ತೆಲಂಗಾಣ ವಿಧಾನಸಭೆ ಚುನಾವಣೆ; ಬಿಆರ್‌ಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಸಿಎಂ ಕೆಸಿಆರ್​
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ತೆಲಂಗಾಣ ವಿಧಾನಸಭೆ ಚುನಾವಣೆ; ಬಿಆರ್‌ಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಸಿಎಂ ಕೆಸಿಆರ್​

ತೆಲಂಗಾಣ ವಿಧಾನಸಭೆ ಚುನಾವಣೆ; ಬಿಆರ್‌ಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಸಿಎಂ ಕೆಸಿಆರ್​

Telangana Assembly elections 2023: ಒಟ್ಟು 119 ಸ್ಥಾನಗಳಿಗೆ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, 115 ಕ್ಷೇತ್ರಗಳಿಗೆ ಬಿಆರ್‌ಎಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕೆಸಿಆರ್ ಎಂದೇ ಖ್ಯಾತರಾಗಿರುವ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗಜ್ವೇಲ್ ಮತ್ತು ಕಾಮರೆಡ್ಡಿ ಕ್ಷೇತ್ರಗಳಿಂದ ಕಣಕ್ಕೆ ಇಳಿಯಲಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್

ಹೈದರಾಬಾದ್​: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ತಮ್ಮ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಒಟ್ಟು 119 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 115 ಕ್ಷೇತ್ರಗಳಿಗೆ ಬಿಆರ್‌ಎಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕೆಸಿಆರ್ ಎಂದೇ ಖ್ಯಾತರಾಗಿರುವ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗಜ್ವೇಲ್ ಮತ್ತು ಕಾಮರೆಡ್ಡಿ ಕ್ಷೇತ್ರಗಳಿಂದ ಕಣಕ್ಕೆ ಇಳಿಯಲಿದ್ದಾರೆ.

ಸಿಎಂ ಕೆಸಿಆರ್ ಅವರ ಪುತ್ರ ಸಚಿವ ಕೆಟಿ ರಾಮರಾವ್​ (ಕೆಟಿಆರ್​) ಅವರು ಸಿರ್ಸಿಲ್ಲಾದಿಂದ ಸ್ಪರ್ಧಿಸಲಿದ್ದಾರೆ. ಅಕ್ಟೋಬರ್ 16 ರಂದು ವಾರಂಗಲ್‌ನಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಚಂದ್ರಶೇಖರ ರಾವ್ ಹೇಳಿದ್ದಾರೆ. ಕೆಸಿಆರ್ ಪ್ರಕಾರ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ.

119 ಸ್ಥಾನಗಳಲ್ಲಿ ಬಿಆರ್‌ಎಸ್ 95-105 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಿಎಂ ಕೆಸಿಆರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಜೊತೆಗಿನ ಬಿಆರ್‌ಎಸ್ ಸ್ನೇಹ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ X (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ, ಇದು ಮುಖ್ಯಮಂತ್ರಿ ನಾಯಕತ್ವ ಮತ್ತು ಬಿಆರ್‌ಎಸ್ ಆಡಳಿತದ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

"ನಮ್ಮ ನಾಯಕ ಕೆಸಿಆರ್ ಅವರು ಮುಂಬರುವ ವಿಧಾನಸಭೆ ಚುನಾವಣೆಗೆ 119 ಸ್ಥಾನಗಳ ಪೈಕಿ 115 ಅಸಾಧಾರಣ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಇದು ನಿಜವಾಗಿಯೂ ಸಿಎಂ ಕೆಸಿಆರ್ ಅವರ ಧೈರ್ಯಶಾಲಿ ನಾಯಕತ್ವ ಮತ್ತು ಬಿಆರ್‌ಎಸ್ ಪಕ್ಷದ ಪ್ರಭಾವಶಾಲಿ ಆಡಳಿತದಲ್ಲಿ ಜನರ ನಂಬಿಕೆಗೆ ಸಾಕ್ಷಿಯಾಗಿದೆ. ನಾವು ವಿನಮ್ರವಾಗಿ ತೆಲಂಗಾಣ ಜನರ ಆಶೀರ್ವಾದವನ್ನು ಬಯಸುತ್ತೇವೆ" ಎಂದು ಟ್ವೀಟ್ ಮಾಡಿದ್ದಾರೆ.

ಈ ವರ್ಷದ ಅಂತ್ಯದಲ್ಲಿ ಅಂದರೆ ನವೆಂಬರ್​ ಅಥವಾ ಡಿಸೆಂಬರ್​ನಲ್ಲಿ ತೆಲಂಗಾಣ ವಿಧಾನಸಭೆ ನಡೆಯಲಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಕೆಸಿಆರ್ ಅವರ ಬಿಆರ್​ಎಸ್​ (ಅಂದಿನ ಟಿಆರ್​ಎಸ್​) ಪಕ್ಷವು 88 ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬಂದಿತ್ತು.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.