Telangana Rains: ತೆಲಂಗಾಣದಲ್ಲಿ ಭಾರಿ ಮಳೆ ಮುನ್ಸೂಚನೆ; ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ; ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Telangana Rains: ತೆಲಂಗಾಣದಲ್ಲಿ ಭಾರಿ ಮಳೆ ಮುನ್ಸೂಚನೆ; ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ; ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ

Telangana Rains: ತೆಲಂಗಾಣದಲ್ಲಿ ಭಾರಿ ಮಳೆ ಮುನ್ಸೂಚನೆ; ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ; ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ

Telangana Rains Floods: ತೆಲಂಗಾಣ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ನೀಡಲಾಗಿದೆ. ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ತೆಲಂಗಾಣದಲ್ಲಿ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ  (ಸಾಂಕೇತಿಕ ಚಿತ್ರ)
ತೆಲಂಗಾಣದಲ್ಲಿ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (ಸಾಂಕೇತಿಕ ಚಿತ್ರ)

ಹೈದರಾಬಾದ್‌: ತೆಲಂಗಾಣದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಜಂಗಾವ್‌ ಮತ್ತು ಪೂರ್ವ ತೆಲಂಗಾಣದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿದ್ದು 19 ಸೆಂಟಿಮೀಟರ್‌ಗೂ ಅಧಿಕ ಮಳೆಯಾಗಿದೆ ಹಾಗೂ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ (ಜುಲೈ 20 ಹಾಗೂ ಜುಲೈ 21) ಸರ್ಕಾರವು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಎರಡು ದಿನಗಳ ಕಾಲ ರಜೆ ಫೋಷಿಸಿದೆ.

ಟ್ವೀಟ್‌ ಮಾಡುವ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ.

ʼರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಕೆಸಿಆರ್‌ ಅವರ ಸೂಚನೆಯಂತೆ ಸರ್ಕಾರವು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿದೆʼ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಶಾಲೆ ತಲುಪಿದ ಮಕ್ಕಳು; ಪರದಾಡಿದ ಪೋಷಕರು

ಬೆಳಿಗ್ಗೆ 8.18ಕ್ಕೆ ಸಚಿವರು ಟ್ವೀಟ್‌ ಮಾಡಿದ್ದು, ಅಷ್ಟೊತ್ತಿಗಾಗಲೇ ವಿದ್ಯಾರ್ಥಿಗಳು ಶಾಲೆ ತಲುಪಿಯಾಗಿತ್ತು. ಅಲ್ಲದೆ ಶಾಲೆಗಳು ರಜೆ ಘೋಷಣೆಯಾದ ವಿಷಯವನ್ನು ಪೋಷಕರಿಗೆ ತಿಳಿಸುವುದು ತಡವಾಗಿತ್ತು. ಇದರಿಂದ ಪುಟ್ಟ, ಪುಟ್ಟ ಮಕ್ಕಳು ಹಾಗೂ ಪೋಷಕರು ಪರದಾಡುವಂತಾಗಿತ್ತು. ಶಾಲೆಗಳ ಮುಂದೆ ಸೇರಿದ್ದ ಪೋಷಕರು ಮಳೆಯ ನಡುವೆ ಮಕ್ಕಳನ್ನು ಮನೆಗೆ ಕರೆದ್ಯೊಯಲು ಹರ ಸಾಹಸಪಡುತ್ತಿರುವ ದ್ರಶ್ಯ ಕಂಡು ಬಂದಿತ್ತು. ಅಲ್ಲದೆ ಶಾಲೆಗಳ ಮುಂದೆ ವಿಪರೀತ ಟ್ರಾಫಿಕ್‌ ಉಂಟಾಗಿತ್ತು.

ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ

ಮೂರು ವಿಭಿನ್ನ ಹವಾಮಾನ ಸ್ಥಿತಿಯು ರಾಜ್ಯವನ್ನು ಆವರಿಸಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ವಿಪತ್ತು ನಿರ್ವಹಣಾ ಪಡೆಯ ಅಧಿಕಾರಗಳ ಪ್ರಕಾರ ಹೈದರಾಬಾದ್‌ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಸುಮಾರು 34 ಮರಗಳು ಬಿದ್ದಿವೆ.

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.