JP Nadda: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ವಿಸ್ತರಣೆ: ಕಮಲ ಪಾಳೆಯ ಹೇಗೆ ಎದುರಿಸಲಿದೆ ಚುನಾವಣೆ?
ಮಹತ್ವದ ಬೆಳವಣಿಗೆಯೊಂದರಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾವಧಿಯನ್ನು ವಿಸ್ತರಣೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ, ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೆಪಿ ನಡ್ಡಾ ಅವರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಅವಧಿಯು ಜೂನ್ 2024ರವರೆಗೆ ಮುಂದುವರೆಯಲಿದೆ.
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾವಧಿಯನ್ನು ವಿಸ್ತರಣೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ, ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೆಪಿ ನಡ್ಡಾ ಅವರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಅವಧಿಯು ಜೂನ್ 2024ರವರೆಗೆ ಮುಂದುವರೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂಬರುವ ವಿವಿಧ ರಾಜ್ಯಗಳ ವಿದಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವನೆಯನ್ನು ಗಮನದಲ್ಲಿಟ್ಟುಕೊಂಡು, ಜೆಪಿ ನಡ್ಡಾ ಅವರ ರಾಷ್ಟ್ರಾಧ್ಯಕ್ಷ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಜೆಡಿ ನಡ್ಡಾ ಅವರ ಮಾರ್ಗದರ್ಶನದಲ್ಲಿ ಪಕ್ಷವು ಈ ಹಿಂದೆ ನಡೆದ ಚುನಾವಣೆಗಳಲ್ಲಿ ಅಭೂತಪೂರ್ವ ಜಯ ಸಾಧಿಸಿದೆ. ಇತ್ತೀಚಿಗೆ ಗುಜರಾತ್‌ನಲ್ಲಿ ಪಕ್ಷವು ಐತಿಹಾಸಿಕ ಜಯ ಸಾಧಿಸಿರುವುದು, ಜೆಪಿ ನಡ್ಡಾ ಅವರು ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಮಾರ್ಗದರ್ಶನದಲ್ಲಿ, ಬಿಜೆಪಿ ಭಾರೀ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂಬುದು ನನ್ನ ನಂಬಿಕೆ ಎಂದು ಅಮಿತ್ ಶಾ ಹೇಳಿದ್ದಾರೆ.
ಜೆಪಿ ನಡ್ಡಾ ಅವರ ರಾಷ್ಟ್ರೀಯ ಅಧ್ಯಕ್ಷ ಅವಧಿಯನ್ನು ವಿಸ್ತರಿಸುವ ಕುರಿತು, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಕುರಿತು ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿದರು. ಈ ಪ್ರಸ್ತಾವನೆಗೆ ಸಭೆಯು ಒಕ್ಕೊರಲಿನಿಂದ ಸಮ್ಮತಿ ಸೂಚಿಸಿತು ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
ಕಳೆದ ಜೂನ್ 2019ರಲ್ಲಿ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕೇಂದ್ರದಲ್ಲಿ ಬಿಜೆಪಿ ಎರಡನೇ ಬಾರಿ ಅಧಿಕಾರ ರಚಿಸಿದ ಮೇಲೆ, ಆಗಿನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವರಾಗಿ ಕೇಂದ್ರ ಸಂಪುಟ ಸೇರಿದ್ದರು.
ಜೆಪಿ ನಡ್ಡಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ನಡೆದ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ, ಪಕ್ಷ ಅಭೂತಪೂರ್ವ ಜಯ ಸಾಧಿಸಿದೆ. ಇದೇ ಅವಧಿಯಲ್ಲಿ ಬಿಜೆಪಿ ಕೆಲವು ರಾಜ್ಯಗಳನ್ನು ಕಳೆದುಕೊಂಡಿದ್ದೂ ಇದೆ.
ಇತ್ತೀಚಿಗೆ ನಡೆದ ಹಿಮಾಚಲ ವಿಧಾನಸಭೆ ಚುನಾವಣೆಯಲ್ಲಿ, ಪಕ್ಷವು ಅಧಿಕಾರ ಕಳೆದುಕೊಂಡಿದೆ. ಹಿಮಾಚಲ ಪ್ರದೇಶ ಜೆಪಿ ನಡ್ಡಾ ಅವರ ತವರು ರಾಜ್ಯ ಎಂಬುದು ವಿಶೇಷ.
ಆದಾಗ್ಯೂ ಜೆಪಿ ನಡ್ಡಾ ಅವರು, ಪಕ್ಷ ಸಂಘಟನೆಯಲ್ಲಿ ಹೆಚ್ಚಿನ ಯಶಸ್ಸು ಸಾಧಿಸಿದ್ದು, ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಜೆಪಿ ನಡ್ಡಾ ಅವರನ್ನೇ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮುಂದುವರೆಸಲು ಬಿಜೆಪಿ ತೀರ್ಮಾನಿಸಿದೆ.
ಇನ್ನು ಜೆಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಣೆ ನಿರ್ಧಾರವನ್ನು ಕರ್ನಾಟಕ ಬಿಜೆಪಿ ಘಟಕವೂ ಸೇರಿದಂತೆ, ದೇಶದ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಘಟಕಗಳು ಸ್ವಾಗತಿಸಿವೆ.
ಇಂದಿನ ಪ್ರಮುಖ ಸುದ್ದಿ
Rahul Gandhi on Media: 'ಗೋದಿ ಮೀಡಿಯಾ' ನುಡಿಗಟ್ಟನ್ನು ನಾನೆಂದೂ ಬಳಸಿಲ್ಲ: ಮಾಧ್ಯಮಗಳ ಬಗ್ಗೆ ರಾಹುಲ್ ಹೇಳಿದ್ದೇನು?
ನಾನು ಪ್ರಸ್ತುತ ಭಾರತೀಯ ಮಾಧ್ಯಮಗಳ ರಚನೆಯನ್ನು ವಿರೋಧಿಸುತ್ತೇನೆಯೇ ಹೊರತು, ಆ ಮಾಧ್ಯಮಗಳಲ್ಲಿ ಕೆಲಸ ಮಾಡುವ ಪತ್ರಕರ್ತರನ್ನಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯ ನೇಪಥ್ಯದಲ್ಲಿ ಹೋಶಿಯಾರ್‌ಪುರ್‌ದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 'ಗೋದಿ ಮೀಡಿಯಾ' ನುಡಿಗಟ್ಟನ್ನು ನಾನು ಆರಂಭಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.