ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bjp National Executive: ಕಾಂಗ್ರೆಸ್‌ ಮಾಜಿ ನಾಯಕರಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ; ನಡ್ಡಾ ಹೊಸ ಘೋಷಣೆ ಏನು?

BJP national executive: ಕಾಂಗ್ರೆಸ್‌ ಮಾಜಿ ನಾಯಕರಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ; ನಡ್ಡಾ ಹೊಸ ಘೋಷಣೆ ಏನು?

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಸುನೀಲ್ ಜಾಖರ್ ಹಾಗೂ ಉತ್ತರ ಪ್ರದೇಶದ ಮಾಜಿ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಮಾಜಿ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಮತ್ತು ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್
ಮಾಜಿ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಮತ್ತು ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ (Source: @JaiveerShergill)

ಎರಡು ರಾಜ್ಯಗಳಲ್ಲಿ ಚುನಾವಣೆ ಕಣ ರಂಗೇರಿರುವ ನಡುವೆ ಬಿಜೆಪಿಯಲ್ಲಿ ಆಂತರಿಕ ರಾಜಕೀಯ ಚಟುವಟಿಕೆಯೂ ಗರಿಗೆದರಿದೆ. ಇಂದು ಕಾಂಗ್ರೆಸ್ ಮಾಜಿ ವಕ್ತಾರ ಜೈವೀರ್ ಶೆರ್ಗಿಲ್ ಅವರನ್ನು ತನ್ನ ರಾಷ್ಟ್ರೀಯ ವಕ್ತಾರರನ್ನಾಗಿ ಬಿಜೆಪಿ ನೇಮಿಸಿದೆ. ಇನ್ನೊಂದೆಡೆ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಸುನೀಲ್ ಜಾಖರ್ ಹಾಗೂ ಉತ್ತರ ಪ್ರದೇಶದ ಮಾಜಿ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಬಿಜೆಪಿಯ ಉತ್ತರಾಖಂಡ ಮತ್ತು ಛತ್ತೀಸ್‌ಗಢದ ಮಾಜಿ ಅಧ್ಯಕ್ಷರಾದ ಮದನ್ ಕೌಶಿಕ್ ಮತ್ತು ವಿಷ್ಣು ದೇವ್ ಸಾಯಿ, ಪಂಜಾಬ್‌ ಬಿಜೆಪಿ ನಾಯಕರಾದ ರಾಣಾ ಗುರ್ಮಿತ್ ಸಿಂಗ್ ಸೋಧಿ, ಮನೋರಂಜನ್ ಕಾಲಿಯಾ ಮತ್ತು ಅಮನ್‌ಜೋತ್ ಕೌರ್ ರಾಮೂವಾಲಿಯಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರನ್ನಾಗಿ ಮಾಡಲಾಗಿದೆ ಎಂದು ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವೃತ್ತಿಯಲ್ಲಿ ವಕೀಲರಾಗಿರುವ ಮತ್ತು ಯುವ ಕಾಂಗ್ರೆಸ್ ನಾಯಕರಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿರುವ ಶೆರ್ಗಿಲ್, ಆಗಸ್ಟ್ 24 ರಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಯುವಕರ ಆಕಾಂಕ್ಷೆಗಳೊಂದಿಗೆ ಕಾಂಗ್ರೆಸ್‌ ಹೈಕಮಾಂಡ್ ದೂತದೃಷ್ಟಿ ಹೊಂದಿಕೆಯಾಗುವುದಿಲ್ಲ ಎಂದು ರಾಜೀನಾಮೆ ವೇಳೆ ಹೇಳಿದ್ದರು.

ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಜಾಖರ್ ಕೂಡ ಈ ವರ್ಷದ ಮೇ ತಿಂಗಳಲ್ಲಿ ಕಾಂಗ್ರೆಸ್‌ನಿಂದ ದೂರವಾಗಿದ್ದರು.

ಕಳೆದ ವರ್ಷ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರದಿಂದ ಕೆಳಗಿಳಿದ ಬಳಿಕ, ಸಿಂಗ್ ಅವರು ಕಾಂಗ್ರೆಸ್ ತೊರೆದರು. 1969ರಲ್ಲಿ ರಾಜಕೀಯಕ್ಕೆ ಧುಮುಕಿದ್ದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ತೊರೆದ ನಂತರ ತಮ್ಮದೇ ಆದ ರಾಜಕೀಯ ಸಂಘಟನೆಯಾದ ಪಂಜಾಬ್ ಲೋಕ ಕಾಂಗ್ರೆಸ್‌ಗೆ ಹೊಸ ರೂಪ ಕೊಟ್ಟರು. ಬಿಜೆಪಿಗೆ ಸೇರಿದ ಬಳಿಕ ಅವರು ತಮ್ಮ ಸಂಘಟನೆಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದರು.

ಗಮನಿಸಬಹುದಾದ ಇತರೆ ಸುದ್ದಿಗಳು

ಮೋದಿ ರೋಡ್‌ ಶೋ ರಾಜಕೀಯಕ್ಕೆ 'ಆಂಬುಲೆನ್ಸ್' ಎಂಟ್ರಿ; ಅದನ್ನು ಸ್ಟಾರ್ ಪ್ರಚಾರಕನನ್ನಾಗಿ ಮಾಡಿ ಎಂದ ಕಾಂಗ್ರೆಸ್!

ಚುನಾವಣಾ ಅಖಾಡ ರಂಗೇರಿರುವ ಗುಜರಾತ್‌ನಲ್ಲಿ ಮೋದಿ ಮೇನಿಯಾ ಜೋರಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಗುಜರಾತ್‌ನ ಅತಿ ದೊಡ್ಡ ನಗರ ಅಹಮದಾಬಾದ್‌ನಲ್ಲಿ ಮೆಗಾ ರೋಡ್ ಶೋ ನಡೆಸಿದ್ದಾರೆ. ಮೊದಲ ಹಂತದ ಮತದಾನಕ್ಕೂ ಮುನ್ನ, ಈ ಹಿಂದೆ ಹಲವು ಬಾರಿ ಮೋದಿ ತವರು ರಾಜ್ಯಕ್ಕೆ ಬಂದು ಚುನಾವಣಾ ಪ್ರಚಾರ ನಡೆಸಿದ್ದಾರೆ. ಅಲ್ಲದೆ ಹಲವು ಬಾರಿ ರೋಡ್‌ ಶೋ ಕೂಡಾ ನಡೆಸಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯೂ ಆಗಿತ್ತು. ಈಗ ಅದೇ ರೋಡ್‌ ಶೋ ಮುಂದಿಟ್ಟುಕೊಂಡಿರುವ ಪ್ರತಿಪಕ್ಷ ಕಾಂಗ್ರೆಸ್‌; ಮೋದಿ ಹಾಗೂ ಬಿಜೆಪಿ ಕಾಲೆಳೆದಿದೆ. ವಿವರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಭಾರತ ಈಗಾಗಲೇ ಒಗ್ಗಟ್ಟಾಗಿದೆ: 'ಭಾರತ್‌ ಜೋಡೋ' ಅವಶ್ಯಕತೆಯಿಲ್ಲ ಎಂದ ಅಸ್ಸಾಂ ಸಿಎಂ!

ಗುವಹಾಟಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಈಗಾಗಲೇ ಒಗ್ಗಟ್ಟಾಗಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ 'ಭಾರತ್‌ ಜೋಡೋ' ಯಾತ್ರೆಯ ಅವಶ್ಯಕತೆಯಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ವಿವರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

IPL_Entry_Point