ಕನ್ನಡ ಸುದ್ದಿ  /  Nation And-world  /  Three Students Detained For Harassing Teacher In Uttar Pradesh

Uttar Pradesh: ಶಿಕ್ಷಕಿಗೆ 'ಜಾನ್ ಐ ಲವ್ ಯೂ' ಎಂದ ಮೂವರು ವಿದ್ಯಾರ್ಥಿಗಳ ಬಂಧನ

ವಿದ್ಯಾರ್ಥಿಗಳು ತಮ್ಮ ಶಿಕ್ಷಕಿಯನ್ನು ನಿಂದಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ವಿಡಿಯೋ ತುಣುಕಿನಲ್ಲಿ ವಿದ್ಯಾರ್ಥಿಗಳು ಶಿಕ್ಷಕಿಯನ್ನು 'ಜಾನ್' ಎಂದು ಸಂಬೋಧಿಸಿ 'ಐ ಲವ್ ಯೂ' ಎಂದು ಹೇಳುವುದನ್ನು ಕೇಳಬಹುದು.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಸಂಬದ್ಧ ಮಾತುಗಳಿಂದ ಟೀಕಿಸಿ ಶಿಕ್ಷಕಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಮೂವರು ಅಪ್ರಾಪ್ತ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೀರತ್‌ನ ಕಿಥೋರ್ ಪ್ರದೇಶದ ಇಂಟರ್ ಮೀಡಿಯೇಟ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳು ತಮ್ಮ ಶಿಕ್ಷಕಿಯನ್ನು ನಿಂದಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ವಿಡಿಯೋ ತುಣುಕಿನಲ್ಲಿ ವಿದ್ಯಾರ್ಥಿಗಳು ಶಿಕ್ಷಕಿಯನ್ನು 'ಜಾನ್' ಎಂದು ಸಂಬೋಧಿಸಿ 'ಐ ಲವ್ ಯೂ' ಎಂದು ಹೇಳುವುದನ್ನು ಕೇಳಬಹುದು.

ಪೊಲೀಸ್ ಅಧಿಕಾರಿ ನೀಡಿರುವ ಮಾಹಿತಿಯ ಪ್ರಕಾರ, 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕಳೆದ ಕೆಲವು ವಾರಗಳಿಂದ ತನಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ 20ರ ಹರೆಯದ ಶಿಕ್ಷಕಿ ಶುಕ್ರವಾರ ದೂರು ನೀಡಿದ್ದಾರೆ. ಶಾಲೆಗೆ ಹೋಗುವಾಗ ಮತ್ತು ಮನೆಗೆ ಹಿಂದಿರುಗುವಾಗ ವಿದ್ಯಾರ್ಥಿಗಳು ಹಲವಾರು ಬಾರಿ ಅಶ್ಲೀಲವಾಗಿ ಕಾಮೆಂಟ್‌ಗಳನ್ನು ಮಾಡುತ್ತಿದ್ದರು ಎಂದು ಶಿಕ್ಷಕಿ ಆರೋಪಿಸಿದ್ದಾರೆ.

ಈ ಕುರಿತು ವಿದ್ಯಾರ್ಥಿಗಳ ಪೋಷಕರಿಗೂ ಶಿಕ್ಷಕಿ ದೂರು ನೀಡಿದ್ದಾರಂತೆ. ಆದರೂ ಮಕ್ಕಳ ಹೆತ್ತವರು ತಮ್ಮ ಮಕ್ಕಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಿಕ್ಷಕಿ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮಾತನಾಡಿದ ಕಿಥೋರ್ ಸರ್ಕಲ್ ಆಫೀಸರ್ ಸುಚಿತಾ ಸಿಂಗ್, “ಮೂವರು ವಿದ್ಯಾರ್ಥಿಗಳ ವಿರುದ್ಧ ಐಪಿಸಿಯ ಸೆಕ್ಷನ್ 354 (ಮಹಿಳೆಯರ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಪ್ರಕರಣ), 500 (ಮಾನನಷ್ಟ) ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮದುವೆ ಸ್ಥಳದ ಸಮೀಪವೇ 7 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ರಾಜಧಾನಿ ಲಖನೌ ಹೊರವಲಯದಲ್ಲಿರುವ ಬಂತ್ರಾ ಪ್ರದೇಶದಲ್ಲಿ, ಮದುವೆ ಮಂಟಪದಲ್ಲಿ ಡಿಜೆ ಕೆಲಸಕ್ಕಾಗಿ ಇದ್ದ ಇಬ್ಬರು ಕೆಲಸಗಾರರು ಮದುವೆ ಸಮಾರಂಭದಿಂದ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಪ್ಪಿಸಿಕೊಂಡಿದ್ದಾನೆ. ಅತ್ಯಾಚಾರ ಸಂತ್ರಸ್ತೆ ಬಾಲಕಿಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸೀತಾಪುರದ ನಿವಾಸಿಯಾಗಿರುವ ಬಾಲಕಿ, ಮದುವೆಗೆ ಹಾಜರಾಗಲು ತನ್ನ ಹೆತ್ತವರೊಂದಿಗೆ ಲಖನೌಗೆ ಪ್ರಯಾಣ ಬೆಳೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಗಿ ಕಾಣೆಯಾಗಿದ್ದಾಳೆಂದು ಗೊತ್ತಾದಾಗ, ಈ ಘಟನೆ ಬೆಳಕಿಗೆ ಬಂದಿದೆ. ಮದುವೆಯ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿರುವ ಖಾಲಿ ಜಾಗದ ಬದಿಯಲ್ಲಿ ಇರಿಸಲಾದ ಬೈಕ್ ಪತ್ತೆ ಮಾಡಿದ ಬಳಿಕ ಬಾಲಕಿ ಸಿಕ್ಕಿದ್ದಾಳೆ.

ಘಟನೆ ಬಗ್ಗೆ ಮಾತನಾಡಿದ ಕೃಷ್ಣನಗರದ ಸಹಾಯಕ ಪೊಲೀಸ್ ಕಮಿಷನರ್ ವಿನಯ್ ಕುಮಾರ್ ಸಿಂಗ್, “ಪೊಲೀಸರು ದೂರದಲ್ಲಿ ಪೊದೆಗಳಲ್ಲಿ ಏನೋ ಚಟುವಟಿಕೆ ನಡೆಯುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳಕ್ಕೆ ಹೋಗಿ ನೋಡಿದಾಗ, ಅಪ್ರಾಪ್ತೆಯೊಂದಿಗೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ನೋಡಿದ್ದಾರೆ. ಅವರಲ್ಲಿ ಒಬ್ಬಾತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಮತ್ತೊಬ್ಬ ಸಿಕ್ಕಿಬಿದ್ದಿದ್ದಾನೆ. ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿದ್ದು, ನೋವಿನಿಂದ ನರಳುತ್ತಿದ್ದಳು. ನಾವು ಆಕೆಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು," ಎಂದು ಹೇಳಿದ್ದಾರೆ.

IPL_Entry_Point