ಕೇಂದ್ರ ಬಜೆಟ್ 2024; ಮಹಿಳೆಯರು, ಬಾಲಕಿಯರ ಯೋಜನೆಗಳಿಗೆ 3 ಲಕ್ಷ ಕೋಟಿ ರೂ ಅನುದಾನ, ಉಪಕ್ರಮಗಳ ವಿವರ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಕೇಂದ್ರ ಬಜೆಟ್ 2024; ಮಹಿಳೆಯರು, ಬಾಲಕಿಯರ ಯೋಜನೆಗಳಿಗೆ 3 ಲಕ್ಷ ಕೋಟಿ ರೂ ಅನುದಾನ, ಉಪಕ್ರಮಗಳ ವಿವರ

ಕೇಂದ್ರ ಬಜೆಟ್ 2024; ಮಹಿಳೆಯರು, ಬಾಲಕಿಯರ ಯೋಜನೆಗಳಿಗೆ 3 ಲಕ್ಷ ಕೋಟಿ ರೂ ಅನುದಾನ, ಉಪಕ್ರಮಗಳ ವಿವರ

ಕೇಂದ್ರ ಬಜೆಟ್ 2024; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಜುಲೈ 23) ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ್ದು, ಮಹಿಳೆಯರು, ಬಾಲಕಿಯರ ಯೋಜನೆಗಳಿಗೆ 3 ಲಕ್ಷ ಕೋಟಿ ರೂ ಅನುದಾನ ಪ್ರಕಟಿಸಿದ್ದಾರೆ. ಈ ಉಪಕ್ರಮಗಳ ವಿವರ ಇಲ್ಲಿದೆ.

ಕೇಂದ್ರ ಬಜೆಟ್ 2024; ಮಹಿಳೆಯರು, ಬಾಲಕಿಯರ ಯೋಜನೆಗಳಿಗೆ 3 ಲಕ್ಷ ಕೋಟಿ ರೂ ಅನುದಾನ, ಉಪಕ್ರಮಗಳ ವಿವರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದರು.
ಕೇಂದ್ರ ಬಜೆಟ್ 2024; ಮಹಿಳೆಯರು, ಬಾಲಕಿಯರ ಯೋಜನೆಗಳಿಗೆ 3 ಲಕ್ಷ ಕೋಟಿ ರೂ ಅನುದಾನ, ಉಪಕ್ರಮಗಳ ವಿವರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದರು.

ನವದೆಹಲಿ: ಭಾರತದ ಮಹಿಳೆಯರು, ಬಾಲಕಿಯರಿಗೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನಕ್ಕಾಗಿ 3 ಲಕ್ಷ ರೂಪಾಯಿ ಅನುದಾನವನ್ನು ಕೇಂದ್ರ ಬಜೆಟ್ 2024 25ರಲ್ಲಿ ಒದಗಿಸಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದರು. ಅವರು ಮಂಗಳವಾರ, ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತ ಈ ವಿಚಾರ ಘೋಷಿಸಿದರು.

ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಹಾಸ್ಟೆಲ್‌ಗಳು, ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗಾಗಿ ವರ್ಕಿಂಗ್ ವುಮನ್ ಹಾಸ್ಟೆಲ್‌ಗಳನ್ನು ಸ್ಥಾಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋ‍ಷಿಸಿದರು.

ನಿರ್ಮಲಾ ಸೀತಾರಾಮನ್ ಅವರು, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ ಪ್ರಧಾನ ಮಂತ್ರಿಗಳ ಪ್ಯಾಕೇಜ್ ವ್ಯಾಪ್ತಿಯಲ್ಲಿ 'ಉದ್ಯೋಗ ಲಿಂಕ್ಡ್ ಇನ್ಸೆಂಟಿವ್ಸ್'ಗಾಗಿ ಮೂರು ಯೋಜನೆಗಳನ್ನು ಘೋಷಿಸಿದರು.

ಸ್ಕೀಮ್ 'ಎ' : ಹೊಸದಾಗಿ ಕೆಲಸಕ್ಕೆ ಸೇರಿದವರಿಗಾಗಿ

ಸ್ಕೀಮ್‌ ‘ಬಿ’: ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ'

ಸ್ಕೀಮ್ 'ಸಿ': 'ಉದ್ಯೋಗದಾತರಿಗೆ ಉತ್ತೇಜನ

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ, ಎನ್‌ಡಿಎ ಮೈತ್ರಿ ಸರ್ಕಾರ ರಚನೆಯಾಗಿದೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಲೋಕಸಭೆಯಲ್ಲಿ ಬಜೆಟ್ ಅನ್ನು ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ.ಗಳನ್ನು ಘೋಷಿಸಿದರು.

ಕೇಂದ್ರ ಬಜೆಟ್ 2024 ಉದ್ಯೋಗ, ಕೌಶಲ್ಯ, ಎಂಎಸ್‌ಎಂಇಗಳ ಉತ್ತೇಜನಕ್ಕೆ ಅನುಗುಣವಾಗಿದೆ. ಇದಲ್ಲದೆ, "ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿರುವಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಗಮನ ಕೇಂದ್ರೀಕರಿಸಬೇಕಾಗಿದೆ" ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಸುದ್ದಿ ಅಪ್ಡೇಟ್ ಆಗ್ತಾ ಇದೆ.

(ಕನ್ನಡದಲ್ಲಿ ಸ್ಪಷ್ಟ ಸುದ್ದಿ, ನಿಖರ ವಿಶ್ಲೇಷಣೆ, ಸಮಗ್ರ ಮಾಹಿತಿಗೆ ಎಚ್‌ಟಿ ಕನ್ನಡ ಬೆಸ್ಟ್‌. ತಾಜಾ ವಿದ್ಯಮಾನ ಮತ್ತು ಬಜೆಟ್‌ ವಿವರಣೆ, ರಾಜಕೀಯ ವಿಶ್ಲೇಷಣೆಗಳಿಗಾಗಿ kannada.hindustantimes.com/nation-and-world ಕ್ಕೆ ಭೇಟಿ ನೀಡಿ.)

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.