Union Budget 2023: ವೈಯಕ್ತಿಕ ಆದಾಯ ತೆರಿಗೆದಾರರಿಗೆ ಭರ್ಜರಿ ಗಿಫ್ಟ್‌ ನೀಡಿ ಬಜೆಟ್‌ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Union Budget 2023: ವೈಯಕ್ತಿಕ ಆದಾಯ ತೆರಿಗೆದಾರರಿಗೆ ಭರ್ಜರಿ ಗಿಫ್ಟ್‌ ನೀಡಿ ಬಜೆಟ್‌ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್

Union Budget 2023: ವೈಯಕ್ತಿಕ ಆದಾಯ ತೆರಿಗೆದಾರರಿಗೆ ಭರ್ಜರಿ ಗಿಫ್ಟ್‌ ನೀಡಿ ಬಜೆಟ್‌ ಭಾಷಣ ಮುಗಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ 2023ನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆದಾರರಿಗೆ ನಿರ್ಮಲಾ ಸೀತಾರಾಮನ್‌ ಭರ್ಜರಿ ಗಿಫ್ಟ್‌ ನೀಡಿ ತಮ್ಮ ಭಾಷಣವನ್ನು ಅಂತ್ಯಗೊಳಿಸಿದ್ದಾರೆ. ಈ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ANI)

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ 2023ನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆದಾರರಿಗೆ ನಿರ್ಮಲಾ ಸೀತಾರಾಮನ್‌ ಭರ್ಜರಿ ಗಿಫ್ಟ್‌ ನೀಡಿ ತಮ್ಮ ಭಾಷಣವನ್ನು ಅಂತ್ಯಗೊಳಿಸಿದ್ದಾರೆ. ಈ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

ನ್ಯಾಯದ ದಕ್ಷ ಆಡಳಿತಕ್ಕಾಗಿ, 7000 ಕೋಟಿ ರೂಪಾಯಿ ವೆಚ್ಚದಲ್ಲಿ ಇಕೋರ್ಟ್ ಯೋಜನೆಯ 3 ನೇ ಹಂತವನ್ನು ಪ್ರಾರಂಭಿಸಲಾಗುವುದು‌ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

‘ಒಂದು ಜಿಲ್ಲೆ, ಒಂದು ಉತ್ಪನ್ನ’ ಮತ್ತು ಜಿಐ ಉತ್ಪನ್ನಗಳು ಮತ್ತು ಇತರ ಕರಕುಶಲ ವಸ್ತುಗಳ ಪ್ರಚಾರ ಮತ್ತು ಮಾರಾಟಕ್ಕಾಗಿ, ರಾಜ್ಯ ರಾಜಧಾನಿ ಅಥವಾ ರಾಜ್ಯದ ಅತ್ಯಂತ ಜನಪ್ರಿಯ ಪ್ರವಾಸಿ ತಾಣದಲ್ಲಿ ‘ಯೂನಿಟಿ ಮಾಲ್’ ಸ್ಥಾಪಿಸಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ವಿತ್ತ ಸಚಿವೆ ಮಾಹಿತಿ ನೀಡಿದರು.

ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರವಾಸೋದ್ಯಮಕ್ಕೆ ಸಂಪೂರ್ಣ ಪ್ಯಾಕೇಜ್‌ನಂತೆ ಅಭಿವೃದ್ಧಿಪಡಿಸಲು ಚಾಲೆಂಜ್ ಮೋಡ್ ಮೂಲಕ 50 ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

MSME ಗಳಿಗೆ ಕ್ರೆಡಿಟ್ ಗ್ಯಾರಂಟಿ - ಕಾರ್ಪಸ್‌ನಲ್ಲಿ 9,000 ಕೋಟಿ ರೂ.ಗಳನ್ನು ತುಂಬಿಸಲಾಗಿದೆ. ಇದು ರೂ 2 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಮೇಲಾಧಾರ-ಮುಕ್ತ ಸಾಲವನ್ನು ಅನುಮತಿಸುತ್ತದೆ. 1ನೇ ಏಪ್ರಿಲ್ 2023 ರಿಂದ ಇದು ಜಾರಿಗೆ ಬರಲಿದೆ ಎಂದು ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದರು.

3 ವರ್ಷಗಳಲ್ಲಿ 47 ಲಕ್ಷ ಯುವಕರಿಗೆ ಬೆಂಬಲ ನೀಡಲು, ಪ್ಯಾನ್ ಇಂಡಿಯಾ ನ್ಯಾಷನಲ್ ಅಪ್ರೆಂಟಿಸ್‌ಶಿಪ್ ಯೋಜನೆಯಡಿ ನೇರ ಲಾಭ ವರ್ಗಾವಣೆಯನ್ನು ಹೊರತರಲಾಗುವುದು. 5G ಸೇವೆಗಳನ್ನು ಬಳಸಿಕೊಂಡು ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಲು 100 ಲ್ಯಾಬ್‌ಗಳನ್ನು engg ಸಂಸ್ಥೆಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನುಡಿದರು.

ಪರಿಷ್ಕೃತ ವಿತ್ತೀಯ ಕೊರತೆ ಜಿಡಪಿಯ ಶೇ. 6.4ರಷ್ಟಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯನ್ನು ಶೇ.5.9ರಷ್ಟು ಇಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದರು. 2025-26ರ ವೇಳೆಗೆ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ. 4.5ಕ್ಕಿಂತ ಕಡಿಮೆಗೆ ತರುವ ನನ್ನ ಉದ್ದೇಶವನ್ನು ನಾನು ಪುನರುಚ್ಚರಿಸುತ್ತೇನೆ ಎಂದೂ ನಿರ್ಮಲಾ ಸೀತಾರಾಮನ್‌ ಲೋಕಸಭೆಗೆ ವಾಗ್ದಾನ ಮಾಡಿದರು.

ಜವಳಿ ಮತ್ತು ಕೃಷಿ ಹೊರತುಪಡಿಸಿ ಇತರ ಸರಕುಗಳ ಮೇಲಿನ ಮೂಲ ಕಸ್ಟಮ್ ಸುಂಕದ ದರಗಳನ್ನು 21 ರಿಂದ 13 ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ. ಇದರ ಪರಿಣಾಮವಾಗಿ, ಆಟಿಕೆಗಳು, ಬೈಸಿಕಲ್‌ಗಳು, ಆಟೋಮೊಬೈಲ್‌ಗಳು ಸೇರಿದಂತೆ ಕೆಲವು ವಸ್ತುಗಳ ಮೂಲ ಕಸ್ಟಮ್ ಸುಂಕಗಳು, ಸೆಸ್‌ಗಳು ಮತ್ತು ಹೆಚ್ಚುವರಿ ಶುಲ್ಕಗಳಲ್ಲಿ ಸಣ್ಣ ಬದಲಾವಣೆಗಳಿವೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಅದೇ ರೀತಿ ಕ್ಯಾಮೆರಾ ಲೆನ್ಸ್‌ನಂತಹ ಕೆಲವು ಭಾಗಗಳು ಮತ್ತು ಇನ್‌ಪುಟ್‌ಗಳ ಆಮದು ಮೇಲಿನ ಕಸ್ಟಮ್ಸ್ ಸುಂಕದ ಮೇಲೆ ಪರಿಹಾರವನ್ನು ನೀಡಲು ನಾನು ಪ್ರಸ್ತಾಪಿಸುತ್ತೇನೆ ಮತ್ತು ಬ್ಯಾಟರಿಗಳಿಗಾಗಿ ಲಿಥಿಯಂ-ಐಯಾನ್ ಸೆಲ್‌ಗಳ ಮೇಲಿನ ರಿಯಾಯಿತಿ ಸುಂಕವನ್ನು ಇನ್ನೊಂದು ವರ್ಷ ಮುಂದುವರಿಸುತ್ತೇನೆ ನಿರ್ಮಲಾ ಸೀತಾರಾಮನ್ ನುಡಿದರು.

ಆದಾಯ ತೆರಿಗೆ ರಿಟರ್ನ್‌ಗಳ ಸರಾಸರಿ ಪ್ರಕ್ರಿಯೆ ಸಮಯವನ್ನು 93 ದಿನಗಳಿಂದ 16 ದಿನಗಳಿಗೆ ಇಳಿಸಲಾಗಿದೆ. ಸಾಮಾನ್ಯ ಐಟಿ ರಿಟರ್ನ್ ಫಾರ್ಮ್‌ಗಳನ್ನು ಹೊರತರಲು ಸರ್ಕಾರ ಉದ್ದೇಶಿಸಿದ್ದು, ಕುಂದುಕೊರತೆ ಪರಿಹಾರ ಕಾರ್ಯವಿಧಾನವನ್ನು ಬಲಪಡಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್‌ ಇದೇ ವೇಳೆ ಮಾಹಿತಿ ನೀಡಿದರು.

ಟಿವಿಗಳ ತಯಾರಿಕೆಯಲ್ಲಿ ಮೌಲ್ಯವರ್ಧನೆಯನ್ನು ಉತ್ತೇಜಿಸಲು, ಟಿವಿ ಪ್ಯಾನಲ್‌ಗಳ ತೆರೆದ ಕೋಶಗಳ ಭಾಗಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ.2.5 ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ತಿಳಿಸಿದರು.

ವೈಯಕ್ತಿಕ ಆದಾಯ ತೆರಿಗೆ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ರಿಯಾಯಿತಿ ವಿಸ್ತರಣೆ ಮಾಡಲಾಗಿದೆ. 6 ಆದಾಯದ ಸ್ಲ್ಯಾಬ್‌ಗಳನ್ನು ಹೊಂದಿರುವ ಹೊಸ ವೈಯಕ್ತಿಕ ಆದಾಯ ತೆರಿಗೆ ಪದ್ಧತಿಯು, 2.5 ಲಕ್ಷ ರೂ.ದಿಂದ ಪ್ರಾರಂಭವಾಗುತ್ತದೆ. ಸ್ಲ್ಯಾಬ್‌ಗಳ ಸಂಖ್ಯೆಯನ್ನು 5ಕ್ಕೆ ಇಳಿಸುವ ಮೂಲಕ ಮತ್ತು ತೆರಿಗೆ ವಿನಾಯಿತಿ ಮಿತಿಯನ್ನು 3 ಲಕ್ಷ ರೂ.ಗೆ ಹೆಚ್ಚಿಸುವ ಮೂಲಕ, ಈ ಆಡಳಿತದಲ್ಲಿ ತೆರಿಗೆ ರಚನೆಯನ್ನು ಬದಲಾಯಿಸಲು ನಾನು ಪ್ರಸ್ತಾಪಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದರು.

ವೈಯಕ್ತಿಕ ಆದಾಯ ತೆರಿಗೆ: "ಹೊಸ ತೆರಿಗೆ ದರಗಳು 0 ರಿಂದ 3 ಲಕ್ಷಗಳವರೆಗೆ ಶೂನ್ಯ, 3 ರಿಂದ 6 ಲಕ್ಷ ರೂ.ವರೆಗೆ ಶೇ. 5, 6 ರಿಂದ 9 ಲಕ್ಷ ರೂ.ವರೆಗೆ ಶೇ.10, 9 ರಿಂದ 12 ಲಕ್ಷ ರೂ.ವರೆಗೆ ಶೇ.15, 12 ರಿಂದ 15 ಲಕ್ಷ ರೂವರೆಗೆ ಶೇ.20 ಮತ್ತು 15 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರಿಗೆ ಶೇ.30 ರ್ಷಟು ತೆರಿಗೆ ವಿಧಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.

Whats_app_banner

ವಿಭಾಗ

ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.