ಭಾರತ ಪಾಕಿಸ್ತಾನ ಸಂಘರ್ಷ: ಅದಕ್ಕೂ ನಮಗೂ ಸಂಬಂಧವಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಭಾರತ ಪಾಕಿಸ್ತಾನ ಸಂಘರ್ಷ: ಅದಕ್ಕೂ ನಮಗೂ ಸಂಬಂಧವಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ಭಾರತ ಪಾಕಿಸ್ತಾನ ಸಂಘರ್ಷ: ಅದಕ್ಕೂ ನಮಗೂ ಸಂಬಂಧವಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷವು ಮೂಲಭೂತವಾಗಿ ನಮ್ಮ ವ್ಯವಹಾರವಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ. ಎರಡೂ ದೇಶಗಳನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್
ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉಂಟಾಗಿರುವ ಸಂಘರ್ಷವು ಮೂಲಭೂತವಾಗಿ ನಮ್ಮ ವ್ಯವಹಾರವಲ್ಲ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ. ಉಭಯ ರಾಷ್ಟ್ರಗಳ ನಡುವಣ ಸಂಘರ್ಷಕ್ಕೂ ಅದನ್ನು ನಿಯಂತ್ರಿಸುವ ಅಮೆರಿಕದ ಸಾಮರ್ಥ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವ್ಯಾನ್ಸ್ ತಿಳಿಸಿದ್ದಾರೆ. ಫಾಕ್ಸ್ ನ್ಯೂಸ್ ಜೊತೆ ಮಾತನಾಡಿದ ಅವರು, ಸಂಘರ್ಷವು ಸಾಧ್ಯವಾದಷ್ಟು ಬೇಗ ಕೊನೆಯಾಗಬೇಕು ಎಂದು ಅಮೆರಿಕ ಬಯಸುತ್ತದೆ ಎಂದು ಹೇಳಿದ್ದಾರೆ.

ನಾವು ಈ ದೇಶಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ನಾವು ಏನು ಮಾಡಬಹುದು ಎಂದರೆ ಈ ರಾಷ್ಟ್ರಗಳ ನಡುವೆ ಸ್ವಲ್ಪ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಒತ್ತಾಯಿಸಬಹುದು, ಆದರೆ ನಾವು ಮೂಲಭೂತವಾಗಿ ನಮ್ಮ ವ್ಯವಹಾರವಲ್ಲದ ಮತ್ತು ಅದನ್ನು ನಿಯಂತ್ರಿಸುವ ಅಮೆರಿಕದ ಸಾಮರ್ಥ್ಯದೊಂದಿಗೆ ಯಾವುದೇ ಸಂಬಂಧವಿಲ್ಲದ ಯುದ್ಧದಲ್ಲಿ ಭಾಗಿಯಾಗಲು ಹೋಗುವುದಿಲ್ಲ ಎಂದು ವ್ಯಾನ್ಸ್ ತಿಳಿಸಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಶೇಮ್‌ಲೆಸ್ ಕರೆದ ಒಂದು ದಿನದ ನಂತರ ಜೆಡಿ ವ್ಯಾನ್ಸ್ ಅವರು ಈ ಹೇಳಿಕೆ ನೀಡಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ ಬೇಗನೇ ಕೊನೆಯಾಗಬೇಕು ಎಂದು ಟ್ರಂಪ್ ಹೇಳಿದ್ದಾರೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.