ಕನ್ನಡ ಸುದ್ದಿ  /  Nation And-world  /  Uproar In Rajya Sabha After Private Member's Bill On Uniform Civil Code Introduced

Uniform Civil Code Bill: ವಿರೋಧದ ನಡುವೆಯೇ ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ವಿರೋಧ ಪಕ್ಷಗಳ ವಿರೋಧದ ನಡುವೆಯೇ 'ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ, 2020' ಅನ್ನು ಮೇಲ್ಮನೆಯಲ್ಲಿ ಮಂಡಿಸಲಾಗಿದೆ.

Uniform Civil Code Bill: ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ
Uniform Civil Code Bill: ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ (ANI)

ನವದೆಹಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಸಿದ್ಧಪಡಿಸಲು ಸಂಬಂಧಪಟ್ಟ ಸಮಿತಿಗೆ ಅವಕಾಶ ಕಲ್ಪಿಸುವ ವಿವಾದಾತ್ಮಕ ಖಾಸಗಿ ಸದಸ್ಯರ ಮಸೂದೆಯನ್ನು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ವಿರೋಧ ಪಕ್ಷಗಳ ವಿರೋಧದ ನಡುವೆಯೇ 'ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ, 2020' ಅನ್ನು ಮೇಲ್ಮನೆಯಲ್ಲಿ ಮಂಡಿಸಲಾಗಿದೆ.

ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರು ಏಕರೂಪ ನಾಗರಿಕ ಸಂಹಿತೆಯನ್ನು ಸಿದ್ಧಪಡಿಸಲು ಮತ್ತು ಭಾರತದಾದ್ಯಂತ ಅದರ ಅನುಷ್ಠಾನಕ್ಕಾಗಿ ರಾಷ್ಟ್ರೀಯ ತಪಾಸಣೆ ಮತ್ತು ತನಿಖಾ ಸಮಿತಿ ರಚನೆಗೆ ಅವಕಾಶ ಕಲ್ಪಿಸುವ ಈ ಮಹತ್ವದ ವಿಧೇಯಕವನ್ನು ಮಂಡಿಸಿದರು.

ಇದು ದೇಶದಲ್ಲಿ ಪ್ರಚಲಿತದಲ್ಲಿರುವ ಸಾಮಾಜಿಕ ರಚನೆ ಮತ್ತು ವಿವಿಧತೆಯಲ್ಲಿ ಏಕತೆಯನ್ನು "ನಾಶಗೊಳಿಸುತ್ತದೆ" ಎಂದು ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೃಣಮೂಲ ಕಾಂಗ್ರೆಸ್‌ ಸದಸ್ಯರು ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ, ಮಸೂದೆಯನ್ನು ಪರಿಚಯಿಸಲು ಪಟ್ಟಿ ಮಾಡಲಾಗಿದ್ದರೂ, ಅದನ್ನು ಮೇಲ್ಮನೆಯಲ್ಲಿ ಮಂಡಿಸಿರಲಿಲ್ಲ.

ಈ ಮಸೂದೆಯ ಪರವಾಗಿ 63 ಮತಗಳು ಹಾಗೂ ಈ ಮಸೂದೆಯ ವಿರುದ್ಧ 23 ಮತಗಳನ್ನು ಚಲಾವಣೆಗೊಂಡವು. ಇದು ದೇಶವನ್ನು ವಿಘಟಿಸುತ್ತದೆ ಮತ್ತು ಅದರ ವೈವಿಧ್ಯಮಯ ಸಂಸ್ಕೃತಿಯನ್ನು ಘಾಸಿಗೊಳಿಸುತ್ತದೆ ಎಂದು ವಿಪಕ್ಷಗಳು ಈ ಮಸೂದೆಯ ಕುರಿತು ವಿರೋಧ ಪಕ್ಷಗಳು ಅಭಿಪ್ರಾಯವ್ಯಕ್ತಪಡಿಸಿದವು.

ಸೂಕ್ಷ್ಮ ವಿಷಯವಾಗಿರುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಕುರಿತು ಈಗಾಗಲೇ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆದಿವೆ. ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಕುರಿತು ಚರ್ಚೆಗಳಾಗಿವೆ. ಮಧ್ಯಪ್ರದೇಶ ಏಕರೂಪ ನಾಗರಿಕ ಸಂಹಿತೆ ಮಸೂದೆ ರಚನೆಗಾಗಿ ಕಳೆದ ಡಿ.2ರಂದು ಸಮಿತಿಯೊಂದನ್ನು ರಚಿಸಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಏಕರೂಪ ನಾಗರಿಕ ಸಂಹಿತೆಯು ಜಾತ್ಯತೀತ ಅಥವಾ ಜಾತ್ಯತೀತ ಕಾನೂನಾಗಿದ್ದು, ಅದರ ಅನುಷ್ಠಾನದ ನಂತರ ಎಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಕೊನೆಗೊಳ್ಳುತ್ತವೆ.

ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳಿಗೆ ವಿವಿಧ ಧಾರ್ಮಿಕ ಕಾನೂನುಗಳಿವೆ. ಹಿಂದೂ ಕಾನೂನು ಬುದ್ಧ, ಜೈನ ಮತ್ತು ಸಿಖ್ ಧರ್ಮದ ಅನುಯಾಯಿಗಳಿಗೂ ಅನ್ವಯಿಸುತ್ತದೆ. ವಿಲ್ ಮತ್ತು ಮದುವೆಯಂತಹ ವಿಷಯಗಳಲ್ಲಿ ಈ ಕಾನೂನುಗಳನ್ನು ಪಾಲಿಸಬೇಕು. ವಿಚ್ಛೇದನ ಮತ್ತು ನಂತರದ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ವೈಯಕ್ತಿಕ ಕಾನೂನಿನ ಮೂಲಕ ನಿರ್ಧರಿಸಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಈ ಎಲ್ಲಾ ವೈಯಕ್ತಿಕ ಕಾನೂನುಗಳು ರದ್ದಾಗುತ್ತದೆ ಮತ್ತು ನಾಗರಿಕರು ಏಕರೂಪ ನಾಗರಿಕ ಸಂಹಿತೆಗೆ ಒತ್ತಾಯಿಸಬೇಕಾಗುತ್ತದೆ.

ಲೋಕಸಭೆಯ ಕಲಾಪ

ಇಂದಿನ ಲೋಕಸಭೆಯ ಕಲಾಪದಲ್ಲಿ ನೋಟು ಅಮಾನ್ಯೀಕರಣದ ಬಗ್ಗೆ ಕಾಂಗ್ರೆಸ್ ಪ್ರಸ್ತಾಪಿಸಿದ್ದು, ಶ್ವೇತ ಪತ್ರ ಹೊರಡಿಸುವಂತೆ ಆಗ್ರಹಿಸಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ, ನೋಟು ಅಮಾನ್ಯೀಕರಣ ಕೇಂದ್ರ ಸರ್ಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಚೌಧರಿ, ಕೇಂದ್ರ ಸರ್ಕಾರ ಯೋಚನೆ ಮಾಡದೇ ನಿರ್ಧಾರ ತೆಗೆದುಕೊಂಡಿತ್ತು, ಆ ನಿರ್ಧಾರವೇ ಅತಾರ್ಕಿಕವಾಗಿತ್ತು ಎಂದು ಹೇಳಿದ್ದಾರೆ. ಕರೆನ್ಸಿ ನೋಟುಗಳ ಪರಿಚಲನೆಯಲ್ಲಿ ಶೇ.72 ರಷ್ಟು ಏರಿಕೆಯಾಗಿದೆ, ಕಪ್ಪು ಹಣ ಚಲಾವಣೆ ನಿಂತಿಲ್ಲ ಎಂದೂ ಆಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಅಧೀರ್ ರಂಜನ್ ಚೌಧರಿ ಮಾತನಾಡುತ್ತಿದ್ದಾಗ, ಮಧ್ಯಪ್ರವೇಶಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಕಾಂಗ್ರೆಸ್ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಹಾಗೂ ಅಕ್ರಮ ವಲಸಿಗರನ್ನು ಬೆಂಬಲಿಸುತ್ತಿದೆ, ಆದ್ದರಿಂದ ಕಾಂಗ್ರೆಸ್ ನೋಟು ಅಮಾನ್ಯೀಕರಣ ನಿರ್ಧಾರವನ್ನು ವಿರೋಧಿಸುತ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

IPL_Entry_Point