Breaking News: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಸಿಲೆಂಡರ್‌ ಸ್ಫೋಟ: ಹೊತ್ತಿ ಉರಿದ ಟೆಂಟ್‌ಗಳು
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Breaking News: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಸಿಲೆಂಡರ್‌ ಸ್ಫೋಟ: ಹೊತ್ತಿ ಉರಿದ ಟೆಂಟ್‌ಗಳು

Breaking News: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಸಿಲೆಂಡರ್‌ ಸ್ಫೋಟ: ಹೊತ್ತಿ ಉರಿದ ಟೆಂಟ್‌ಗಳು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಸಿಲೆಂಡರ್‌ ಸ್ಪೋಟದಿಂದ ಟೆಂಟ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ಕಂಡು ಬಂದ ಬೆಂಕಿ,
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ಕಂಡು ಬಂದ ಬೆಂಕಿ, (twitter)

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಸ್ಥಳದಲ್ಲಿ ಟೆಂಟ್‌ನಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯು ಹಲವಾರು ಟೆಂಟ್‌ಗಳಿಗೆ ಹರಡಿತು. ಇದರಿಂದ ಹದಿನೆಂಟು ಟೆಂಟ್‌ಗಳು ಸುಟ್ಟು ಹೋಗಿವೆ. ಆದರೆ ಯಾವುದೇ ಜೀವಹಾನಿಯಾಗಲಿ, ತೊಂದರೆಯಾಗಲಿ ಆಗಿಲ್ಲ. ಕೂಡಲೇ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.ಬೃಹತ್ ಮಹಾಕುಂಭದಲ್ಲಿ ಸುರಕ್ಷತಾ ವ್ಯವಸ್ಥೆಯ ಭಾಗವಾಗಿ ಈಗಾಗಲೇ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಅಗ್ನಿಶಾಮಕ ವಾಹನಗಳು ಪೀಡಿತ ಪ್ರದೇಶಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಯಾವುದೇ ಗಾಯಗಳ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸುತ್ತಮುತ್ತಲಿನ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷತೆಗಾಗಿ ಸ್ಥಳಾಂತರಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಸ್ಥಿತಿ ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.

"ಮಹಾ ಕುಂಭಮೇಳದ ಸೆಕ್ಟರ್ 19 ರಲ್ಲಿ ಎರಡು ಸಿಲಿಂಡರ್‌ಗಳು ಸ್ಫೋಟಗೊಂಡವು, ಶಿಬಿರಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ" ಎಂದು ಅಖಾರಾ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮಹಾ ಕುಂಭದ ಅಧಿಕೃತ ಎಕ್ಸ್ ಹ್ಯಾಂಡಲ್ ಪೋಸ್ಟ್ ಮಾಡಿದೆ, "ತುಂಬಾ ದುಃಖವಾಗಿದೆ. ಮಹಾ ಕುಂಭದಲ್ಲಿ ಸಂಭವಿಸಿದ ಬೆಂಕಿಯ ಘಟನೆಯು ಎಲ್ಲರನ್ನು ಬೆಚ್ಚಿಬೀಳಿಸಿದೆ. ಆಡಳಿತವು ತಕ್ಷಣದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಖಾತ್ರಿಪಡಿಸುತ್ತಿದೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಮಾ ಗಂಗೆಯನ್ನು ಪ್ರಾರ್ಥಿಸುತ್ತೇವೆ."

45 ದಿನಗಳ ಮಹಾಕುಂಭವು ಜನವರಿ 13 ರಂದು ಪ್ರಾರಂಭವಾಗಿದ್ದು, ಶನಿವಾರದವರೆಗೆ ಲಭ್ಯವಿರುವ ಅಧಿಕೃತ ಅಂಕಿಅಂಶಗಳ ಪ್ರಕಾರ 7.72 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದ್ದಾರೆ. ಭಾನುವಾರ 46.95 ಲಕ್ಷಕ್ಕೂ ಹೆಚ್ಚು ಭಕ್ತರು ಸ್ನಾನ ಪವಿತ್ರ ಸ್ನಾನ)ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.\

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.