ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಕರ್ನಾಟಕ ಹವಾಮಾನ ಜೂನ್ 10: ಉಡುಪಿ, ದಕ್ಷಿಣಕನ್ನಡ, ಗದಗ ಸೇರಿ 12 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್‌ ಘೋಷಣೆ

ಕರ್ನಾಟಕ ಹವಾಮಾನ ಜೂನ್ 10: ಉಡುಪಿ, ದಕ್ಷಿಣಕನ್ನಡ, ಗದಗ ಸೇರಿ 12 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್‌ ಘೋಷಣೆ

ಕರ್ನಾಟಕ ಹವಾಮಾನ ಜೂನ್ 10: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಶುರುವಾಗಿದ್ದು, ಇಂದು ಉಡುಪಿ, ದಕ್ಷಿಣಕನ್ನಡ, ಬೆಂಗಳೂರು, ಕೊಡಗು ಹಾಸನ ಸೇರಿದಂತೆ ರಾಜ್ಯದಲ್ಲಿ ಒಟ್ಟು 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ.

ಉಡುಪಿ, ದಕ್ಷಿಣಕನ್ನಡ, ಗದಗ ಸೇರಿ 12 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ
ಉಡುಪಿ, ದಕ್ಷಿಣಕನ್ನಡ, ಗದಗ ಸೇರಿ 12 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಳೆ ಆರಂಭವಾಗಿ ಕೆಲ ದಿನಗಳು ಕಳೆದಿದ್ದು, ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಜೂನ್‌ 10 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿದೆ ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜೂನ್‌ 13ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇಂದು ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿ ಇರಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. 

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸೂಚನೆ ಸಿಕ್ಕಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಗುಡುಗಿನ ಅರ್ಭಟದ ಜೊತೆಗೆ ಭಾರಿ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್‌

ಬೆಂಗಳೂರು, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉ.ಕ, ದ.ಕ, ಉಡುಪಿ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ಬೆಂಗಳೂರು ಹವಾಮಾನ (ಜೂನ್‌ 10): ನಗರ, ಗ್ರಾಮಾಂತರದಲ್ಲಿ ಮಳೆ ಸಾಧ್ಯತೆ

ಬೆಂಗಳೂರು ನಗರದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಮುನ್ಸೂಚನೆ ಇದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 9 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು - 21 ಡಿಗ್ರಿ ಸೆಲ್ಸಿಯಸ್‌

ಮಂಗಳೂರು - 24 ಡಿಗ್ರಿ ಸೆಲ್ಸಿಯಸ್‌

ಚಿತ್ರದುರ್ಗ - 21 ಡಿಗ್ರಿ ಸೆಲ್ಸಿಯಸ್‌

ಕೋಲಾರ - 22 ಡಿಗ್ರಿ ಸೆಲ್ಸಿಯಸ್‌

ದಾವಣಗೆರೆ - 22 ಡಿಗ್ರಿ ಸೆಲ್ಸಿಯಸ್‌

ಉಡುಪಿ - 24 ಡಿಗ್ರಿ ಸೆಲ್ಸಿಯಸ್‌

ಕಾರವಾರ - 22 ಡಿಗ್ರಿ ಸೆಲ್ಸಿಯಸ್‌

ಹಾಸನ - 20 ಡಿಗ್ರಿ ಸೆಲ್ಸಿಯಸ್‌

ಕೊಡುಗು - 17 ಡಿಗ್ರಿ ಸೆಲ್ಸಿಯಸ್‌

 

(This copy first appeared in Hindustan Times Kannada website. To read more like this please logon to kannada.hindustantimes.com)

ಟಿ20 ವರ್ಲ್ಡ್‌ಕಪ್ 2024

ವಿಭಾಗ