ಕನ್ನಡ ಸುದ್ದಿ  /  Photo Gallery  /  20 People Detained After A Scuffle Occurred Between Two Groups During Rama Navami In Maharashtra

Ram Navami Violence: ಮಹಾರಾಷ್ಟ್ರದಲ್ಲಿ ರಾಮನವಮಿ ದಿನ ಹಿಂಸಾಚಾರ: 20 ಜನರ ಬಂಧನ!

ಮುಂಬೈ: ‘ರಾಮ ​​ನವಮಿ’ ಶೋಭಾ ಯಾತ್ರೆಯ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಮಹಾರಾಷ್ಟ್ರದ ಮಲಾಡ್‌ ಸಮೀಪದ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಪೊಲೀಸರು ಪರಿಸ್ಥಿತಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

ಮಲಾಡ್‌ನ ಮಾಲ್ವಾನಿ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು ಆದರೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. 
icon

(1 / 5)

ಮಲಾಡ್‌ನ ಮಾಲ್ವಾನಿ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು ಆದರೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. (ANI)

ಘಟನೆಯಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
icon

(2 / 5)

ಘಟನೆಯಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.(ANI)

ಘಟನೆಗೆ ಸಂಬಂಧಿಸಿದಂತೆ 20 ಜನರನ್ನು ಬಂಧಿಸಲಾಗಿದ್ದು, ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಇತರ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಮುಂಬೈ ಡಿಸಿಪಿ ಅಜಯ್ ಬನ್ಸಾಲ್ ಮಾಹಿತಿ ನೀಡಿದ್ದಾರೆ.
icon

(3 / 5)

ಘಟನೆಗೆ ಸಂಬಂಧಿಸಿದಂತೆ 20 ಜನರನ್ನು ಬಂಧಿಸಲಾಗಿದ್ದು, ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಇತರ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಮುಂಬೈ ಡಿಸಿಪಿ ಅಜಯ್ ಬನ್ಸಾಲ್ ಮಾಹಿತಿ ನೀಡಿದ್ದಾರೆ.(ANI)

ಇನ್ನು ಘಟನೆಗೆ ಸಂಬಂಧಿಸಿದಂತೆ  300ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
icon

(4 / 5)

ಇನ್ನು ಘಟನೆಗೆ ಸಂಬಂಧಿಸಿದಂತೆ  300ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.(ANI)

ಇನ್ನು ಪಶ್ಚಿಮ ಬಂಗಾಳದ ಹೌರಾ ಪ್ರದೇಶದಲ್ಲೂ, ರಾಮನವಮಿ ಶೋಭಾಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು, ಹೌರಾ ಪ್ರದೇಶದ ಸುತ್ತಲೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. 
icon

(5 / 5)

ಇನ್ನು ಪಶ್ಚಿಮ ಬಂಗಾಳದ ಹೌರಾ ಪ್ರದೇಶದಲ್ಲೂ, ರಾಮನವಮಿ ಶೋಭಾಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು, ಹೌರಾ ಪ್ರದೇಶದ ಸುತ್ತಲೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. (ANI)


ಇತರ ಗ್ಯಾಲರಿಗಳು