ಸಿಕ್ಸರ್​​ಗಳ 'ಅಭಿಷೇಕ'; 8 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ದಾಖಲೆ ಮುರಿದ ಅಭಿಷೇಕ್ ಶರ್ಮಾ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸಿಕ್ಸರ್​​ಗಳ 'ಅಭಿಷೇಕ'; 8 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ದಾಖಲೆ ಮುರಿದ ಅಭಿಷೇಕ್ ಶರ್ಮಾ

ಸಿಕ್ಸರ್​​ಗಳ 'ಅಭಿಷೇಕ'; 8 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ದಾಖಲೆ ಮುರಿದ ಅಭಿಷೇಕ್ ಶರ್ಮಾ

  • Abhishek Sharma: ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ 2024ರ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಸಿಡಿಸಿ ವಿರಾಟ್ ಕೊಹ್ಲಿ ನಿರ್ಮಿಸಿದ್ದ 8 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ.

ಮೇ 19ರಂದು ರಾಜೀವ್​ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್-2024 ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಆರಂಭಿಕ ಅಭಿಷೇಕ್ ಶರ್ಮಾ ಅಮೋಘ ಅರ್ಧಶತಕದ ಮೂಲಕ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿ ಅವರ 8 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ.
icon

(1 / 5)

ಅಭಿಷೇಕ್ ಕೇವಲ 21 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್​​ಗಳ ಸಹಾಯದಿಂದ ತಮ್ಮ ವೈಯಕ್ತಿಕ ಅರ್ಧಶತಕ ಪೂರ್ಣಗೊಳಿಸಿದ್ದಾರೆ. ಅಂತಿಮವಾಗಿ 28 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್​​ಗಳೊಂದಿಗೆ 66 ರನ್ ಗಳಿಸಿ ಡ್ರೆಸ್ಸಿಂಗ್ ರೂಮ್​ಗೆ ಮರಳಿದರು. ಚೊಚ್ಚಲ ಪಂದ್ಯದಲ್ಲಿ ತಮ್ಮ 4ನೇ ಸಿಕ್ಸರ್ ಬಾರಿಸಿದ ನಂತರ ಅವರು ದಾಖಲೆ ಪುಸ್ತಕದಲ್ಲಿ ಹೊಸ ಪುಟವೊಂದನ್ನು ತಿರುವಿ ಹಾಕಿದ್ದಾರೆ.
icon

(2 / 5)

ರಿಷಿ ಧವನ್ ಅವರ ಓವರ್​​ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅಭಿಷೇಕ್ ಶರ್ಮಾ, ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಐಪಿಎಲ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸರ್​​ ಸಿಡಿಸಿದ ಭಾರತದ ಮೊದಲ ಕ್ರಿಕೆಟಿಗ ಎಂಬ ದಾಖಲೆಗೆ ಒಳಗಾಗಿದ್ದಾರೆ. ಈ ಹಿಂದೆ ದಾಖಲೆ ಕೊಹ್ಲಿ ಹೆಸರಿನಲ್ಲಿತ್ತು. 2016ರಲ್ಲಿ ವಿರಾಟ್ ದಾಖಲಿಸಿದ್ದ 38 ಸಿಕ್ಸರ್​​ಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.
icon

(3 / 5)

ವಿರಾಟ್ ಕೊಹ್ಲಿ ಇದೇ ಆವೃತ್ತಿಯಲ್ಲಿ ಅಭಿಷೇಕ್ ಶರ್ಮಾ ಸಿಕ್ಸರ್ ದಾಖಲೆ ಮುರಿಯುವ ಸಾಧ್ಯತೆ ಇದೆ. 2024ರ ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 37 ಸಿಕ್ಸರ್ ಬಾರಿಸಿದ್ದಾರೆ. ಅಭಿಷೇಕ್ ಇಷ್ಟೇ ಪಂದ್ಯಗಳಲ್ಲಿ 41 ಸಿಕ್ಸರ್ ದಾಖಲಿಸಿದ್ದಾರೆ. ಪ್ರಸ್ತುತ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದ ಕಾರಣ ಕೊಹ್ಲಿ ಈ ದಾಖಲೆ ಮುರಿಯುವ ಸಾಧ್ಯತೆ ಇದೆ.
icon

(4 / 5)

2024ರ ಐಪಿಎಲ್​ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟ್ಸ್​​ಮನ್​​ಗಳ ಪಟ್ಟಿಯಲ್ಲೂ ಕೊಹ್ಲಿಯನ್ನು ಸನ್​ರೈಸರ್ಸ್​ ಸ್ಟಾರ್ ಮತ್ತೆ ಹಿಂದಿಕ್ಕಿದ್ದಾರೆ. ಪಂಜಾಬ್ ವಿರುದ್ಧ 6 ಸಿಕ್ಸರ್​ ಸಿಡಿಸಿ ವಿರಾಟ್​ 2ನೇ ಸ್ಥಾನಕ್ಕೆ ತಳ್ಳಿದ್ದಾರೆ.
icon

(5 / 5)

ಇತರ ಗ್ಯಾಲರಿಗಳು