Atal Bihari Vajpayee 100: ಭಾರತ ಕಂಡ ಅಪ್ರತಿಮ ರಾಜಕೀಯ ಮುತ್ಸದ್ದಿ ವಾಜಪೇಯಿ ಜನ್ಮಶತಮಾನೋತ್ಸವ: ಹೀಗಿದ್ದರು ಅಜಾತಶತ್ರು ಅಟಲ್
- Atal Bihari Vajpayee 100: ಭಾರತದ ಅಜಾತಶತ್ರು ಹಾಗೂ ಅಪ್ರತಿಮ ರಾಜಕೀಯ ನೇತಾರರದಲ್ಲಿ ಒಬ್ಬರಾದ. ಮೂರು ಬಾರಿ ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವ ಇಂದು. ಆಡಳಿತಗಾರರಾಗಿಯೂ ಅವರ ನೆನಪು ಅಜರಾಮರ. ವಾಜಪೇಯಿ ಅವರ ಬದುಕಿನ ನೆನಪಿನ ಕ್ಷಣಗಳ ಚಿತ್ರ ನೋಟ ಇಲ್ಲಿದೆ.
- Atal Bihari Vajpayee 100: ಭಾರತದ ಅಜಾತಶತ್ರು ಹಾಗೂ ಅಪ್ರತಿಮ ರಾಜಕೀಯ ನೇತಾರರದಲ್ಲಿ ಒಬ್ಬರಾದ. ಮೂರು ಬಾರಿ ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವ ಇಂದು. ಆಡಳಿತಗಾರರಾಗಿಯೂ ಅವರ ನೆನಪು ಅಜರಾಮರ. ವಾಜಪೇಯಿ ಅವರ ಬದುಕಿನ ನೆನಪಿನ ಕ್ಷಣಗಳ ಚಿತ್ರ ನೋಟ ಇಲ್ಲಿದೆ.
(1 / 11)
ಅಟಲ್ ಬಿಹಾರಿ ವಾಜಪೇಯಿ, ಮಂದಸ್ಮಿತ ವದನ, ಅಸ್ಖಲಿತ ಮಾತು, ಕಾವ್ಯ ವಾಗ್ಜರಿಯ ಮಾತು. ನಿಷ್ಠುರ ಆಡಳಿತಗಾರ. ಶ್ರೇಷ್ಠ ಮಾನವತಾ ವಾದಿ. ಹೀಗೆ ಹಲವು ಉಪಮೇಯಗಳಿಂದ ಗುರುತಿಸಿಕೊಂಡಿದ್ದ, ನಂಬಿದಂತೆ ಬದುಕಿನ ಧೀಮಂತ ನಾಯಕ, ಇಂದು ಅವರ ಜನ್ಮ ಶತಮಾನೋತ್ಸವ.
(2 / 11)
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ 1924ರ ಡಿಸೆಂಬರ್ 24 ರಂದು ಆದರ್ಶ ಶಿಕ್ಷಕರೊಬ್ಬರ ಕುಟುಂಬದಲ್ಲಿ ಜನಿಸಿದ ವಾಜಪೇಯಿ ಅವರು ಸಾರ್ವಜನಿಕ ಜೀವನದಲ್ಲಿ ಬೆಳೆದಿದ್ದು ಅವರ ರಾಜಕೀಯ ಚಾಣಾಕ್ಷತನ ಮತ್ತು ಭಾರತೀಯ ಪ್ರಜಾಪ್ರಭುತ್ವಕ್ಕೆ ನೀಡಿದ ಕೊಡುಗೆಯಾಗಿದೆ. ದಶಕಗಳ ಕಾಲ ಅವರು ತಮ್ಮ ಉದಾರ ವಿಶ್ವ ದೃಷ್ಟಿಕೋನ ಮತ್ತು ಪ್ರಜಾಸತ್ತಾತ್ಮಕ ಆಲೋಚನೆಗಳೊಂದಿಗೆ ಬೆಳೆದು ಮೂರು ಬಾರಿ ಭಾರತದ ಪ್ರಧಾನಿಯಾದರು.
(3 / 11)
ಭಾರತದ ಪ್ರಧಾನಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ಸಂಸತ್ತಿನ ವಿವಿಧ ಮುಖ್ಯ ಸ್ಥಾಯಿ ಸಮಿತಿಗಳ ಅಧ್ಯಕ್ಷರಾಗಿ ಹಾಗೂ ವಿರೋಧಪಕ್ಷದ ನಾಯಕರಾಗಿ ಅವರು ಭಾರತದ ಸ್ವಾತಂತ್ರ್ಯ ನಂತರ ದೇಶೀಯ ಮತ್ತು ವಿದೇಶಿ ನೀತಿಗಳಿಗೆ ಸ್ಪಷ್ಟ ರೂಪ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ವಾಜಪೇಯಿ,
(4 / 11)
ವಾಜಪೇಯಿ ಅವರು ವಿದ್ಯಾರ್ಥಿ ದಿನಗಳಲ್ಲೇ ರಾಷ್ಟ್ರೀಯವಾದಿ ರಾಜಕಾರಣದೊಂದಿಗೆ ಹೋರಾಟಕ್ಕೆ ಧುಮುಕಿದರು. ಬಿಟ್ರಿಷ್ ಆಳ್ವಿಕೆಯನ್ನು ಕೊನೆಗೊಳಿಸಲು 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಗೆ ಸೇರಿದರು. ರಾಜಕೀಯ ಶಾಸ್ತ್ರ ಮತ್ತು ಕಾನೂನು ವಿದ್ಯಾರ್ಥಿಯಾಗಿದ್ದಾಗಲೇ ಕಾಲೇಜಿನಲ್ಲಿ ವಿದೇಶಾಂಗ ವ್ಯವಹಾರಗಳಲ್ಲಿ ಅಪಾರ ಆಸಕ್ತಿಯನ್ನು ಬೆಳೆಸಿಕೊಂಡರು. ಹಲವಾರು ವರ್ಷಗಳ ಕಾಲ ಈ ಆಸಕ್ತಿಗೆ ನೀರೆರೆದು ಪೋಷಿಸಿದ ಅವು ಭಾರತವನ್ನು ವಿವಿಧ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ವೇದಿಕೆಗಳಲ್ಲಿ ಪ್ರತಿನಿಧಿಸುವಾಗ ಆ ಕೌಶಲ್ಯಗಳು ಮತ್ತು ಪರಿಣಿತಿಗಳನ್ನು ಬಳಸಿಕೊಂಡರು. ಅಡ್ವಾಣಿ ಅವರ ಒಡನಾಡಿಯಾಗಿದ್ದು ಕೊಂಡು ಭಾರತಕ್ಕಾಗಿ ದುಡಿದರು.
(5 / 11)
ರಾಷ್ಟ್ರ ರಾಜಕೀಯ ರಂಗದಲ್ಲಿ ಅಜಾತಶತ್ರು, ಚಾಣಾಕ್ಷ ರಾಜಕಾರಣಿ ಎಂದೇ ಪ್ರಖ್ಯಾತರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತ ಕಂಡ ಅಪರೂಪದ ಮಹಾ ರಾಜಕೀಯ ನಾಯಕರಲ್ಲಿ ಒಬ್ಬರು. ತಮ್ಮ ಅಸಾಮಾನ್ಯ ವಾಕ್ ಚಾತುರ್ಯ ಮತ್ತು ವಾಕ್ಪಟುತ್ವ ಈ ಮುತ್ಸದ್ದಿ ತಮ್ಮ ಅಧಿಕಾರಾವಧಿಯಲ್ಲಿ ಕೈಗೊಂಡ ದಿಟ್ಟ ಮತ್ತು ದೂರದೃಷ್ಟಿಯ ಕ್ರಮಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಕಾಂಗ್ರೆಸ್ಸೇತರ ಪ್ರಧಾನಮಂತ್ರಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ವಾಜಪೇಯಿ, ಬಿಜೆಪಿಯ ಸೌಮ್ಯವಾದಿ ಧುರೀಣರೆಂದು ಗುರುತಿಸಿಕೊಂಡರು. ಇವರ ಅವಧಿಯಲ್ಲಿಯೇ ಭಾರತದ ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಹಾಗೂ ವಾಜಪೇಯಿ ಜೋಡಿ ಇತಿಹಾಸ ನಿರ್ಮಿಸಿತು.
(6 / 11)
ವಾಜಪೇಯಿ ಅವರು ಓರ್ವ ಪತ್ರಕರ್ತರಾಗಿ ವೃತ್ತಿಯನ್ನು ಆರಂಭಿಸಿದರು. 1951ರಲ್ಲಿ ಆ ವೃತ್ತಿಯನ್ನು ಬಿಟ್ಟು ಭಾರತೀಯ ಜನ ಸಂಘ ಸೇರಿದರು. ಅಟಲ್ ಬಿಹಾರಿ ವಾಜಪೇಯಿಯವರು ಆರ್‌ಎಸ್ಎಸ್‌ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ನಂತರ ಬಿಜೆಪಿಗೆ ಸೇರ್ಪಡೆಯಾಗಿ 1957ರಲ್ಲಿ ಪ್ರಥಮ ಬಾರಿ ಸಂಸದರಾಗಿ ಆಯ್ಕೆಯಾದರು. ಐದು ದಶಕಗಳಿಗೂ ಹೆಚ್ಚು ಕಾಲ ಅತ್ಯಂತ ಕ್ರಿಯಾಶೀಲ ಸಂಸದೀಯ ಪಟುವಾಗಿ ದೇಶದ ಗಮನ ಸೆಳೆದರು.
(7 / 11)
1996ರಲ್ಲಿ ಪ್ರಥಮ ಬಾರಿಗೆ ಪ್ರಧಾನಮಂತ್ರಿಯಾದರು. ಆದರೆ ಬಹುಮತದ ಕೊರತೆಯಿಂದ ಕೇವಲ 13 ದಿನಗಳಲ್ಲಿ ಅಧಿಕಾರ ಕಳೆದುಕೊಂಡರು. 1998ರಲ್ಲಿ ಎರಡನೇ ಬಾರಿ ಪ್ರಧಾನಿ ಪಟ್ಟ ಅಲಂಕರಿಸಿದರು. ಎಐಎಡಿಎಂಕೆ ಪರಮೋಚ್ಚ ನಾಯಕ ಜೆ.ಜಯಲಲಿತಾ ಬೆಂಬಲ ವಾಪಸ್ ಪಡೆದ ಕಾರಣ 13 ತಿಂಗಳುಗಳಿಗೆ ಅಧಿಕಾರ ಕಳೆದುಕೊಳ್ಳಬೇಕಾಯಿತು. 1999ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾಗಿ ಪೂರ್ತಿ ಐದು ವರ್ಷಗಳ ಕಾಲ ಅಧಿಕಾರದ ಚುಕ್ಕಾಣಿ ಹಿಡಿದು ಎನ್‌ಡಿಎ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಅದಕ್ಕೂ ಪ್ರಧಾನಿಯಾಗಿದ್ದ ಎಚ್.ಡಿ ದೇವೇಗೌಡರ ಅವಧಿಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದರು ವಾಜಪೇಯಿ.
(8 / 11)
ಅವರ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಅನುಷ್ಠಾನಗೊಂಡವು. ಭಾರತವು 1998ರಲ್ಲಿ ರಾಜಸ್ತಾನ ಪೋಖ್ರಾನ್ನಲ್ಲಿ ಸರಣಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿತು. ಆಗ ಅವರೊಂದಿಗೆ ರಕ್ಷಣಾ ಸಚಿವರಾಗಿದ್ದವರು ಕರ್ನಾಟಕ ಮೂಲದವರಾದ, ಸಮಾಜವಾದಿ ರಾಜಕೀಯ ನೇತಾರ ಜಾರ್ಜ್ ಫರ್ನಾಂಡೀಸ್.
(9 / 11)
ಭಾರತದ ಪ್ರಮುಖ ನಗರಗಳ ನಡುವೆ ಸಂಪರ್ಕ ಕಲ್ಪಿಸುವ ಸುವರ್ಣ ಚತುಷ್ಫಥ ರಸ್ತೆ ನಿರ್ಮಾಣ ಯೋಜನೆ ಕೂಡ ವಾಜಪೇಯಿ ಅವರ ಪರಿಕಲ್ಪನೆ. ಪಾಕಿಸ್ತಾನ ಜತೆಗಿನ ಸಂಬಂಧವನ್ನು ಸುಧಾರಿಸುವುದು ವಾಜಪೇಯಿ ಅವರ ವೈಯಕ್ತಿಕ ಉದ್ದೇಶವಾಗಿತ್ತು. 1970ರ ದಶಕದ ಕೊನೆಯಲ್ಲಿ ಮೊರಾರ್ಜಿ ದೇಸಾಯಿ ಸರ್ಕಾರದಲ್ಲಿ ವಾಜಪೇಯಿ ವಿದೇಶಾಂಗ ಸಚಿವರಾಗಿದ್ದರು. ಆಗಲೇ ಅವರು ಭಾರತ-ಪಾಕಿಸ್ತಾನ ನಡುವಣ ಬಾಂಧವ್ಯಕ್ಕೆ ಹೊಸ ಭಾಷ್ಯ ಬರೆಯಲು ವೇದಿಕೆ ಸಿದ್ದಗೊಳಿಸಿದ್ದರು.ಅಟಲ್ ಬಿಹಾರಿ ವಾಜಪೇಯಿ ಅವರ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಮತ್ತು ಕಾರ್ಯವೈಖರಿಯನ್ನು ಯಾರೂ ಪ್ರಶ್ನಿಸುತ್ತಿರಲಿಲ್ಲ. ಅವಿವಾಹಿತರಾದ ವಾಜಪೇಯಿ ಅವರು ಉತ್ತಮ ಕವಿಯೂ ಆಗಿದ್ದರು.
(10 / 11)
ಹಿರಿಯ ಸಂಸದೀಯ ಪಟುವಿನ ರಾಜಕೀಯ ಬದುಕು ಆರು ದಶಕಗಳಿಗೂ ಹೆಚ್ಚು ಕಾಲ ವಿಸ್ತರಿಸಿತ್ತು. ಶ ವಾಜಪೇಯಿ ಅವರು ಲೋಕಸಭೆಗೆ ಒಂಭತ್ತು ಬಾರಿ ಹಾಗೂ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದುದು ಒಂದು ದಾಖಲೆಯೇ. ಅವರು ತಮ್ಮ ಕುಟುಂಬದೊಂದಿಗೆ ಪ್ರೀತಿಯಿಂದ ಸಮಯ ಕಳೆಯುತ್ತಿದ್ದರು. ಮೊಮ್ಮಗಳು ನಿಹಾರಿಕ ಕೂಡ ಅವರ ಪ್ರೀತಿಯ ಹುಡುಗಿ.
(11 / 11)
ವಾಜಪೇಯಿ ಅವರು ದಿಟ್ಟ ಹೆಜ್ಜೆಗಳು ಹಲವಾರು. 1992ರ ಡಿಸೆಂಬರ್ 6ರಂದು ಆಯೋಧ್ಯೆಯಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣವು ವಾಜಪೇಯಿ ಅವರಿಗೆ ಅಗ್ನಿಪರೀಕ್ಷೆಯಾಗಿತ್ತು. ಆ ಸಂದರ್ಭದಲ್ಲಿ ಅವರು ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕರಾಗಿದ್ದರು. ಎಲ್.ಕೆ.ಅಡ್ವಾಣಿ ಮತ್ತು ಬಿಜೆಪಿಯ ಇತರ ನಾಯಕರು ಈ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದರು. ಆದರೆ ವಾಜಪೇಯಿ ಅವರು ಇದನ್ನು ಖಂಡಿಸಿ ತಮ್ಮ ಧರ್ಮ ನಿರಪೇಕ್ಷ ನಿಲುವಿಗೆ ಅಂಟಿಕೊಂಡಿದ್ದು ಅವರು ಮುತ್ಸದ್ದಿತನಕ್ಕೆ ಸಾಕ್ಷಿಯಾಗಿದೆ. ಆನಂತರ ಮೋದಿ ಸಹಿತ ಹಲವು ಹೊಸ ನಾಯಕರನ್ನು ಬೆಳೆಸಿದ ಕೀರ್ತಿ ವಾಜಪೇಯಿ ಅವರದ್ದು,
ಇತರ ಗ್ಯಾಲರಿಗಳು