ಮೊದಲ ಸೋಲಿನ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ಗೆ ದಂಡದ ಬರೆ
- ಏಪ್ರಿಲ್ 13ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ.
- ಏಪ್ರಿಲ್ 13ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ.
(1 / 9)
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ (ಏಪ್ರಿಲ್ 13) ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್ಗಳ ಸೋಲನುಭವಿಸಿದೆ. ಸೋತ ಬೆನ್ನಲ್ಲೇ ನಾಯಕ ಅಕ್ಷರ್ ಪಟೇಲ್ಗೆ ಬಿಸಿಸಿಐ ಆಘಾತ ನೀಡಿದೆ.
(PTI)(2 / 9)
ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.
(AP)(3 / 9)
ಈ ಗುರಿ ಬೆನ್ನಟ್ಟಿದ ಡೆಲ್ಲಿ 19 ಓವರ್ಗಳಲ್ಲಿ 193 ರನ್ ಗಳಿಸಿ ಆಲೌಟ್ ಆಯಿತು. 12 ರನ್ಗಳ ಅಂತರದಿಂದ ಸೋಲಿಗೆ ಶರಣಾಯಿತು.
(AFP)(4 / 9)
ಆದರೆ, ಸೋಲನುಭವಿಸಿದ ಬೆನ್ನಲ್ಲೇ ಡೆಲ್ಲಿ ತಂಡದ ನಾಯಕ ಅಕ್ಷರ್ ಪಟೇಲ್ಗೆ ದಂಡ ಬಿದ್ದಿದೆ. ನಿಧಾನಗತಿಯ ಓವರ್ ರೇಟ್ನಿಂದಾಗಿ 12 ಲಕ್ಷ ದಂಡ ವಿಧಿಸಲಾಗಿದೆ.
(AP)(5 / 9)
ಸತತ ನಾಲ್ಕು ಪಂದ್ಯಗಳಲ್ಲಿ ಗೆದ್ದಿದ್ದ ಡೆಲ್ಲಿ ಇದೀಗ ಮೊದಲ ಸೋಲು ಕಂಡಿದೆ. ಮೊದಲ ಬಾರಿಗೆ ಸತತ ಐದು ಪಂದ್ಯಗಳನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು.
(Surjeet Yadav)(6 / 9)
ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದ ಕರುಣ್ ನಾಯರ್ ಅದ್ಭುತ ಪ್ರದರ್ಶನ ನೀಡಿದರು. 40 ಎಸೆತಗಳಲ್ಲಿ 12 ಬೌಂಡರಿ, 5 ಸಿಕ್ಸರ್ ಸಹಿತ 89 ರನ್ ಗಳಿಸಿದರು.
(Shrikant Singh)(7 / 9)
ಆದರೆ 19ನೇ ಓವರ್ನಲ್ಲಿ ಮೂರು ರನೌಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ 12 ರನ್ಗಳಿಂದ ಗೆದ್ದು ಬೀಗಿತು.
(AFP)(8 / 9)
ಜಸ್ಪ್ರೀತ್ ಬುಮ್ರಾ ಅವರ ಮಾಂತ್ರಿಕ ಎಸೆತಗಳು ಸತತ ಮೂರು ಎಸೆತಗಳಲ್ಲಿ ಮೂರು ವಿಲಕ್ಷಣ ರನ್ಔಟ್ಗಳನ್ನು ಕಂಡಿದ್ದರಿಂದ 19 ನೇ ಓವರ್ನಲ್ಲಿ ಎಲ್ಲವೂ ಮುರಿದುಬಿದ್ದಿತು.
(PTI)ಇತರ ಗ್ಯಾಲರಿಗಳು