ಬೆಂಗಳೂರಿನ ಆರ್‌ಟಿ ನಗರದ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ; ತಪ್ಪಿದ ಅನಾಹುತ, 20 ಮಂದಿಯ ರಕ್ಷಣೆ -Bangalore News
- ಆರ್‌ಟಿ ನಗರದ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆರಂಭದಲ್ಲಿ ನೆಲಮಾಳಿಗೆಯಲ್ಲಿದ್ದ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಜನರೇಟರ್ ಸ್ಫೋಟಗೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
- ಆರ್‌ಟಿ ನಗರದ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆರಂಭದಲ್ಲಿ ನೆಲಮಾಳಿಗೆಯಲ್ಲಿದ್ದ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಜನರೇಟರ್ ಸ್ಫೋಟಗೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
(1 / 5)
ಬೆಂಗಳೂರಿನ ಆರ್.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ 30ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಕಟ್ಟಡದ ಮಹಡಿಯಲ್ಲಿ ಶುಕ್ರವಾರ (ಏಪ್ರಿಲ್ 5) ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ.
(2 / 5)
ಕಟ್ಟಡದೊಳಗೆ ಸಿಲುಕಿದ್ದ ಎಲ್ಲ ಉದ್ಯೋಗಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಏಣಿ ಮೂಲಕ ಪಕ್ಕದ ಕಟ್ಟಡಕ್ಕೆ ಸಿಬ್ಬಂದಿಯನ್ನು ಸ್ಥಳಾಂತರಿಸಿದ್ದಾರೆ.
(3 / 5)
ಹೊಗೆ ದಟ್ಟವಾಗಿ ಆವರಿಸಿದ್ದರಿಂದ ಕೆಲವು ಉದ್ಯೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(4 / 5)
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ವಿಷಯ ಮುಟ್ಟಿಸಿದ್ದರು. ಇಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಯಾವುದೇ ಗಾಯ ಅಥವಾ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಇತರ ಗ್ಯಾಲರಿಗಳು