ಕನ್ನಡ ಸುದ್ದಿ  /  Photo Gallery  /  Bbmp Seizes 220 Kg Of Single Use Plastic In Yasavanthapura And Jalahalli Bangalore

BBMP plastic Ban: ಬೆಂಗಳೂರಿನ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಬಳಸುವರಿಗೆ ದಂಡದ ಬರೆ ಹಾಕಿದ ಬಿಬಿಎಂಪಿ, ಚಿತ್ರಗಳನ್ನು ನೋಡಿ

  • ಬೆಂಗಳೂರಿನಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಸುವ ವ್ಯಾಪಾರಿಗಳು, ಉದ್ದಿಮೆಗಳ ಮೇಲೆ ದಾಳಿಯನ್ನು ಬಿಬಿಎಂಪಿ ಮುಂದುವರೆಸಿದೆ. ಇಂದು ಯಶವಂತಪುರ ಮಾರುಕಟ್ಟೆ ಹಾಗೂ ಜಾಲಹಳ್ಳಿ ಜೆ.ಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 220 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ನಗರದ ಯಶವಂತಪುರ ಮಾರುಕಟ್ಟೆ ಹಾಗೂ ಜಾಲಹಳ್ಳಿ ಜೆ.ಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 220 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು ಬಳಕೆದಾರರಿಗೆ 5800 ರೂ. ದಂಡ ವಿಧಿಸಲಾಗಿದೆ.
icon

(1 / 10)

ಜಾಲಹಳ್ಳಿಯ ಪೋಲೀಸ್ ಠಾಣೆಯ ಹಿಂಬಾಗದ ಶ್ರೀ ಗಣೇಶ ಎಂಟರ್ ಪ್ರೆಸಸ್ ಎಂಬ ಹೆಸರಿನಲ್ಲಿ ಪ್ಲಾಸ್ಟಿಕ್ ಕೋಟೆಡ್ ಪೇಪರ್ ಪ್ಲೇಟ್ ತಯಾರಿಕಾ ಘಟಕಕ್ಕೆ ಭೇಟಿ ನೀಡಲು ಹೋದ ಸಮಯದಲ್ಲಿ ಪಾಲಿಕೆಯ ತಂಡ ಬರುತ್ತಿರುವುದನ್ನು ಮನಗಂಡ ಪ್ಲಾಸ್ಟಿಕ್ ಘಟಕವು ಒಳಗಿನಿಂದ ಬೀಗ ಹಾಕಿಕೊಂಡು ಬಾಗಿಲನ್ನು ಮುಚ್ಚಲಾಯಿತು. ನಂತರ ಪಾಲಿಕೆ ಮಾರ್ಷಲ್‌ತಂಡ ಬೀಗ ತಂದು ಹೊರಗಿನಿಂದ ಬೀಗ ಹಾಕಲು ಮುಂದಾದಾಗ ಒಳಗಿನಿಂದ ಬೀಗ ತೆಗೆದು ಪಾಲಿಕೆ ಅಧಿಕಾರಿಗಳ ಜೊತೆಗೆ ಕೆಲಕಾಲ ವಾಗ್ವಾದ ನಡೆಸಿದರು.
icon

(2 / 10)

ಬಳಿಕ ಮಾರ್ಷಲ್‌ಗಳು ಸದರಿ ಘಟಕದಲ್ಲಿದ್ದ ಸುಮಾರು 20 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 2000 ದಂಡ ವಿಧಿಸಲಾಯಿತು. ವಶಪಡಿಸಿಕೊಂಡ ಎಲ್ಲಾ ಪ್ಲಾಸ್ಟಿಕ್ ಉತ್ಪನ್ನಗಳನ್ನು ದೊಡ್ಡಬಿದಿರಕಲ್ಲು ಸಂಸ್ಕರಣ ಘಟಕಕ್ಕೆ ರವಾನಿಸಲಾಯಿತು.
icon

(3 / 10)

ಕೆ.ಆರ್.ಮಾರುಕಟ್ಟೆಯಲ್ಲಿ ಪರಿಶೀಲನೆ: ಕೆ.ಆರ್.ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ, ಹೂವಿನ ಮಾರುಕಟ್ಟೆಯಲ್ಲಿ ಹಾಗೂ ಬೀದಿಬದಿ ವ್ಯಾಪಾರಿಗಳ ಬಳಿ ತಪಾಸಣೆ ನಡೆಸಿದ ವೇಳೆ ಸುಮಾರು 25 ಕೆ.ಜಿ ಪ್ಲಾಸ್ಟಿಕ್ ಕವರ್ ಗಳನ್ನು ವಶಪಡಿಸಿಕೊಂಡು ಮತ್ತೊಮ್ಮೆ ಪ್ಲಾಸ್ಟಿಕ್ ಕವರ್ ಗಳನ್ನು ಬಳಸದಂತೆ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿ ತಲಾ 200 ರೂ. ದಂಡ ವಿಧಿಸಿರುತ್ತಾರೆ.
icon

(4 / 10)

ಪ್ಲಾಸ್ಟಿಕ್ ಬಳಸದಂತೆ ಜಾಗೃತಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.
icon

(5 / 10)

ನಿಷೇಧಿತ ಪ್ಲಾಸ್ಟಿಕ್‌ ಕುರಿತು ಜಾಗೃತಿ ಮೂಡಿಸುತ್ತಿರುವುದು.
icon

(6 / 10)

ನಿಷೇಧಿತ ಪ್ಲಾಸ್ಟಿಕ್‌ ಕುರಿತು ಜಾಗೃತಿ ಮೂಡಿಸುತ್ತಿರುವುದು.

ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಘನತ್ಯಾಜ್ಯ ವಿಭಾಗದದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
icon

(7 / 10)

ಪಾಲಿಕೆಯ ಘನತ್ಯಾಜ್ಯ ವಿಭಾಗದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡವು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುತ್ತಿವೆ.
icon

(8 / 10)

ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ವ್ಯಾಪಾರಸ್ಥರು/ಮಾರಾಟಗಾರರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
icon

(9 / 10)

ನಿಷೇಧಿತ ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ಸಾಕಷ್ಟು ಅಪಾಯವಿದೆ. ಹೀಗಾಗಿ, ಪ್ಲಾಸ್ಟಿಕ್‌ ಬಳಕೆ ತಗ್ಗಿಸಲು ಜನರು ಹೆಚ್ಚಿನ ಗಮನ ನೀಡಬೇಕಿದೆ.
icon

(10 / 10)

ನಿಷೇಧಿತ ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ಸಾಕಷ್ಟು ಅಪಾಯವಿದೆ. ಹೀಗಾಗಿ, ಪ್ಲಾಸ್ಟಿಕ್‌ ಬಳಕೆ ತಗ್ಗಿಸಲು ಜನರು ಹೆಚ್ಚಿನ ಗಮನ ನೀಡಬೇಕಿದೆ.

IPL_Entry_Point

ಇತರ ಗ್ಯಾಲರಿಗಳು