ಚಾಂಪಿಯನ್ಸ್‌ ಟ್ರೋಫಿ 2025: ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಬಹುದು, ಆದರೆ…; ಬಿಸಿಸಿಐ ಷರತ್ತು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಚಾಂಪಿಯನ್ಸ್‌ ಟ್ರೋಫಿ 2025: ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಬಹುದು, ಆದರೆ…; ಬಿಸಿಸಿಐ ಷರತ್ತು

ಚಾಂಪಿಯನ್ಸ್‌ ಟ್ರೋಫಿ 2025: ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಬಹುದು, ಆದರೆ…; ಬಿಸಿಸಿಐ ಷರತ್ತು

  • ಈ ವರ್ಷ ಟಿ20 ವಿಶ್ವಕಪ್‌ ನಡೆದರೆ, ಮುಂದಿನ ವರ್ಷ (2025) ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಹೀಗಾಗಿ ಪಾಕ್‌ಗೆ ಭಾರತ ತಂಡ ಪ್ರಯಾಣಿಸುತ್ತಾ ಎಂಬುದು ಅಭಿಮಾನಿಗಳ ಪ್ರಶ್ನೆ. ಕಳೆದ ವರ್ಷ ನಡೆದ ಏಷ್ಯಾಕಪ್‌ ಟೂರ್ನಿಯಲ್ಲಿ ಆಡಲು, ಭಾರತವು ಪಾಕಿಸ್ತಾನಕ್ಕೆ ಹೋಗಿರಲಿಲ್ಲ.

ಇದೀಗ ಭಾರತವು ಮತ್ತೊಮ್ಮೆ ಪಾಕಿಸ್ತಾನಕ್ಕೆ ಪ್ರಯಾಣಿಸಬೇಕಾದ ಸಂಭವ ಬಂದಿದೆ. ಆದರೆ, ಈ ಬಾರಿಯೂ ಟೀಮ್‌ ಇಂಡಿಯಾ ಆಟಗಾರರು ಪಾಕ್‌ ವಿಮಾನ ಹತ್ತುವ ಸಾಧ್ಯತೆ ಇಲ್ಲ. ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾತನಾಡಿದ್ದಾರೆ.
icon

(1 / 5)

ಭಾರತದ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು  ಶುಕ್ಲಾ ಹೇಳಿದ್ದಾರೆ. ಈ ಕುರಿತು ಬಿಸಿಸಿಐ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಮುಂದುವರೆಯಲಾಗುತ್ತದೆ ಎಂದು ಹೇಳಿದ್ದಾರೆ.
icon

(2 / 5)

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿಯಿಂದ ಮಾರ್ಚ್ 2025ರವರೆಗೆ ಪಾಕಿಸ್ತಾನದಲ್ಲಿ ನಡೆಯಲಿದೆ. ಪಂದ್ಯಾವಳಿಯಲ್ಲಿ ಆಡಲು ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬ ಮಾಧ್ಯಮ ವರದಿಗಳ ನಡುವೆ ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ.
icon

(3 / 5)

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿಯಿಂದ ಮಾರ್ಚ್ 2025ರವರೆಗೆ ಪಾಕಿಸ್ತಾನದಲ್ಲಿ ನಡೆಯಲಿದೆ. ಪಂದ್ಯಾವಳಿಯಲ್ಲಿ ಆಡಲು ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬ ಮಾಧ್ಯಮ ವರದಿಗಳ ನಡುವೆ ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ.(AFP)

2008ರ ಏಷ್ಯಾಕಪ್ ನಂತರ, ಭಯೋತ್ಪಾದನೆ ಕಾರಣದಿಂದಾಗಿ ಉಭಯ  ರಾಷ್ಟ್ರಗಳ ನಡುವಿನ ರಾಜಕೀಯ ಸಂಬಂಧ ಹದಗೆಟ್ಟಿದೆ. ಆ ಬಳಿಕ ಭಾರತವು ಪಾಕಿಸ್ತಾನದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಿಲ್ಲ. ಭಾರತದಲ್ಲಿ ಡಿಸೆಂಬರ್ 2012 ಹಾಗೂ 2013ರ ಜನವರಿಯಲ್ಲಿ ನಡೆದ ದ್ವಿಪಕ್ಷೀಯ ಸರಣಿಯಲ್ಲಿ ಆಡಲು ಪಾಕ್‌ ಬಂದಿತ್ತು. ಆ ಬಳಿಕ ಈ ಎರಡು ರಾಷ್ಟ್ರಗಳು ಐಸಿಸಿ ಟೂರ್ನಮೆಂಟ್‌ ಹಾಗೂ ಏಷ್ಯಾಕಪ್‌ನಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಆದರೆ, ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಡಲು ಪಾಕಿಸ್ತಾನ ಭಾರತಕ್ಕೆ ಬಂದಿತ್ತು.
icon

(4 / 5)

2008ರ ಏಷ್ಯಾಕಪ್ ನಂತರ, ಭಯೋತ್ಪಾದನೆ ಕಾರಣದಿಂದಾಗಿ ಉಭಯ  ರಾಷ್ಟ್ರಗಳ ನಡುವಿನ ರಾಜಕೀಯ ಸಂಬಂಧ ಹದಗೆಟ್ಟಿದೆ. ಆ ಬಳಿಕ ಭಾರತವು ಪಾಕಿಸ್ತಾನದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡಿಲ್ಲ. ಭಾರತದಲ್ಲಿ ಡಿಸೆಂಬರ್ 2012 ಹಾಗೂ 2013ರ ಜನವರಿಯಲ್ಲಿ ನಡೆದ ದ್ವಿಪಕ್ಷೀಯ ಸರಣಿಯಲ್ಲಿ ಆಡಲು ಪಾಕ್‌ ಬಂದಿತ್ತು. ಆ ಬಳಿಕ ಈ ಎರಡು ರಾಷ್ಟ್ರಗಳು ಐಸಿಸಿ ಟೂರ್ನಮೆಂಟ್‌ ಹಾಗೂ ಏಷ್ಯಾಕಪ್‌ನಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಆದರೆ, ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಡಲು ಪಾಕಿಸ್ತಾನ ಭಾರತಕ್ಕೆ ಬಂದಿತ್ತು.(AFP)

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಶುಕ್ಲಾ, "ಚಾಂಪಿಯನ್ ಟ್ರೋಫಿಯ ಸಂದರ್ಭದಲ್ಲಿ, ಭಾರತ ಸರ್ಕಾರ ಏನು ಹೇಳುತ್ತೋ ನಾವು ಅದನ್ನೇ ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದರೆ ಮಾತ್ರ ನಾವು ನಮ್ಮ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆ, ಎಂದು ಸ್ಪಷ್ಟಪಡಿಸಿದ್ದಾರೆ"
icon

(5 / 5)

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಶುಕ್ಲಾ, "ಚಾಂಪಿಯನ್ ಟ್ರೋಫಿಯ ಸಂದರ್ಭದಲ್ಲಿ, ಭಾರತ ಸರ್ಕಾರ ಏನು ಹೇಳುತ್ತೋ ನಾವು ಅದನ್ನೇ ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದರೆ ಮಾತ್ರ ನಾವು ನಮ್ಮ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆ, ಎಂದು ಸ್ಪಷ್ಟಪಡಿಸಿದ್ದಾರೆ"(AP)

ಇತರ ಗ್ಯಾಲರಿಗಳು