Belagavi News:ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಟೋಪಿಯ ಮಿಂಚು; ಬಾಪೂಜಿ ಭೇಟಿ ಶತಮಾನದ ನೆನಪಿಗೆ ಪುತ್ಥಳಿ ಅನಾವರಣ
- Belagavi News: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಗಾಂಧಿ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು. ಮಂಗಳವಾರ ಉದ್ಘಾಟಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಗಾಂಧಿ ಟೋಪಿಗಳು ರಾರಾಜಿಸಿದವು. ಅದರ ಚಿತ್ರನೋಟ ಹೀಗಿದೆ.
- Belagavi News: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಗಾಂಧಿ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು. ಮಂಗಳವಾರ ಉದ್ಘಾಟಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಗಾಂಧಿ ಟೋಪಿಗಳು ರಾರಾಜಿಸಿದವು. ಅದರ ಚಿತ್ರನೋಟ ಹೀಗಿದೆ.
(1 / 7)
ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬೃಹತ್ ಪುತ್ಥಳಿ ಅನಾವರಣಗೊಳಿಸಲಾಯಿತು,
(2 / 7)
ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಬೆಳಗಾವಿಯಲ್ಲಿ ಉದ್ಘಾಟಿಸಿದ್ದು ವಿಶೇಷ.
(3 / 7)
ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ನಡೆದ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರು ಗಾಂಧಿ ಟೋಪಿಯಲ್ಲಿ ಮಿಂಚಿದರು
(4 / 7)
ಬೆಳಗಾವಿಯಲ್ಲಿ ನಡೆಯುತ್ತಿರುವ ಗಾಂಧಿಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಗಾಂಧಿ ಅವರನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು,
(5 / 7)
ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಕಾಂಗ್ರೆ ಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಸಿದ್ದರಾಮಯ್ಯ ಬರ ಮಾಡಿಕೊಂಡರು. ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಜರಿದ್ದರು.
(6 / 7)
ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದೆ ಪ್ರಿಯಾಂಕಗಾಂಧಿ ಅವರೊಂದಿಗೆ ಸಚಿವ ಎಚ್.ಕೆ.ಪಾಟೀಲ್ ಚರ್ಚೆ.
ಇತರ ಗ್ಯಾಲರಿಗಳು