ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಮಂಡ್ಯ ಸಮ್ಮೇಳನಕ್ಕೆ ಲಾಂಛನ ಬಿಡುಗಡೆ, ಚಿತ್ರನೋಟ
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ತಯಾರಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜುಲೈ 19) ಮಂಡ್ಯ ಸಾಹಿತ್ಯ ಸಮ್ಮೇಳದ ಲಾಂಛನ ಬಿಡುಗಡೆ ಮಾಡಿದರು. ಇದರ ಚಿತ್ರನೋಟ ಇಲ್ಲಿದೆ.
(1 / 7)
ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ. ಮಂಡ್ಯ ಸಮ್ಮೇಳನಕ್ಕೆ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ಈ ಕಾರ್ಯಕ್ರಮದ ಚಿತ್ರನೋಟ.
(2 / 7)
ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಸಾಹಿತ್ಯ ಸಮ್ಮೇಳನ ತಯಾರಿಗೆ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ, ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳನ್ನು ತೊಡಗಿಸಿಕೊಂಡು ಅರ್ಥಪೂರ್ಣವಾಗಿ ಸಮ್ಮೇಳನ ಆಯೋಜಿಸಬೇಕು. ಎಲ್ಲಾ ಸಮಿತಿಗಳಲ್ಲಿ ಸ್ಥಳೀಯ ಶಾಸಕರಿಗೆ ನೇತೃತ್ವ ನೀಡಿ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸೇರ್ಪಡೆ ಮಾಡಿಕೊಳ್ಳುವಂತೆ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು
(3 / 7)
ಜಿಲ್ಲೆಯ ಎಲ್ಲಾ ಸಂಘಟನೆಗಳನ್ನು ಸಹ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು. ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲಾ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು.ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲೆಯಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ ಎಂದು ಎನ್ ಚಲುವರಾಯಸ್ವಾಮಿ ಹೇಳಿದರು
(4 / 7)
ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣ, ನಿರ್ವಹಣೆ, ಶಿಷ್ಠಾಚಾರ ಪಾಲನೆ , ಮೆರವಣಿಗೆ ಸಾಂಸ್ಕೃತಿಕ, ಸಾಹಿತ್ಯಿಕ ಕಾರ್ಯಕ್ರಮಗಳು ,ಗೋಷ್ಠಿ ಆಯೋಜನೆ ,ವಸತಿ, ಕುಡಿಯುವ ನೀರು,ಸ್ವಚ್ಚತೆ, ಊಟೋಪಚಾರ ಹಣಕಾಸು,ಪ್ರಚಾರ, ಪುಸ್ತಕ ಮಳಿಗೆ ಸ್ಮರಣ ಸಂಚಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ತೆರಳಿದ ನಿಯೋಗ ಅಲ್ಲಿ, ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡುವಂತೆ ವಿನಂತಿಸಿತು.
(5 / 7)
ಲಾಂಛನ ಬಿಡುಗಡೆ ವೇಳೆ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಪಿ.ಎಂ ನರೇಂದ್ರ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾದ್ಯಕ್ಷರಾದ ನಾಡೋಜ ಮಹೇಶ್ ಜೋಷಿ, ಲಾಂಛನ ರಚಿಸಿದ ಕಲಾವಿದರ ಶಂಕರ್ ಮತ್ತಿತರು ಹಾಜರಿದ್ದರು.
ಇತರ ಗ್ಯಾಲರಿಗಳು