ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಉದ್ಯಾನದ ಒಳಗೆ ಹೋಗಲು ಬಿಡದೇ ಇದ್ದರೆ ಕೂಡಲೇ ದೂರು ಕೊಡಿ, ಪಾರ್ಕ್ ಪ್ರವೇಶದ ಸಮಯ, ಸಹಾಯವಾಣಿ ವಿವರ
ಬೆಂಗಳೂರು ಮಹಾನಗರದಲ್ಲಿ 1280ಕ್ಕೂ ಹೆಚ್ಚು ಪಾರ್ಕ್‌ಗಳಿವೆ. ಎಲ್ಲ ಪಾರ್ಕ್‌ಗಳು ಸುಸ್ಥಿತಿಯಲ್ಲಿವೆ, ಸಾರ್ವಜನಿಕ ಬಳಕೆಗೆ ಲಭ್ಯವಿದೆ ಎಂದಲ್ಲ. ಕೆಲವು ಪಾರ್ಕ್‌ಗಳಿಗೆ ಸಾರ್ವಜನಿಕರ ಪ್ರವೇಶ ನಿರಾಕರಿಸಲಾಗುತ್ತಿದೆ ಎಂಬ ದೂರು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಈ ಬಗ್ಗೆ ಕ್ರಮ ಜರುಗಿಸುವುದಕ್ಕಾಗಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.
(1 / 6)
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಉದ್ಯಾನದ ಒಳಗೆ ಹೋಗಲು ಬಿಡದೇ ಇದ್ದರೆ ಕೂಡಲೇ ದೂರು ಕೊಡಿ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಹೇಳಿದ್ದಾರೆ. ಪಾರ್ಕ್ ಪ್ರವೇಶದ ಸಮಯ, ಸಹಾಯವಾಣಿ ವಿವರವನ್ನೂ ಒದಗಿಸಿದ್ದಾರೆ.
(2 / 6)
ಬೆಂಗಳೂರು ವ್ಯಾಪ್ತಿಯಲ್ಲಿ ಯಾವುದೇ ಬಿಬಿಎಂಪಿ ಉದ್ಯಾನಗಳಿಗೆ ಪ್ರವೇಶ ನಿರಾಕರಿಸಿದರೆ ಅಂತಹ ಸಂದರ್ಭದಲ್ಲಿ ಸಾರ್ವಜನಿಕರು ದೂರು ನೀಡುವುದಕ್ಕೆ ಅವಕಾಶ ಇದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಹೇಳಿದರು.
(3 / 6)
ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಬೆಳಿಗ್ಗೆ 5ರಿಂದ ರಾತ್ರಿ 10ರ ಅವಧಿಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯದಲ್ಲಿ ಪ್ರವೇಶ ನಿರಾಕರಿಸುವಂತೆ ಇಲ್ಲ ಎಂದು ಪ್ರೀತಿ ಗೆಹ್ಲೋಟ್ ಹೇಳಿದರು.
(4 / 6)
ಬಿಬಿಎಂಪಿ ಉದ್ಯಾನಗಳಿಗೆ ಬೆಳಿಗ್ಗೆ 5ರಿಂದ ರಾತ್ರಿ 10ರ ಅವಧಿಯಲ್ಲಿ ಪ್ರವೇಶ ನಿರಾಕರಿಸಿದರೆ ಸಾರ್ವಜನಿಕರು ಕೂಡಲೇ ಸಹಾಯವಾಣಿ ಸಂಖ್ಯೆ 1533ಕ್ಕೆ ಕರೆ ಮಾಡಿ ದೂರು ನೀಡಬೇಕು ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದರು.
(5 / 6)
ಬಿಬಿಎಂಪಿ ವ್ಯಾಪ್ತಿಯಲ್ಲಿ 1,287 ಉದ್ಯಾನಗಳಿದ್ದು, ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಬೇಕೆಂಬ ಉದ್ದೇಶದಿಂದ 2024ರ ಜೂನ್ 12ರಿಂದ ಸಾರ್ವಜನಿಕ ಪ್ರವೇಶಕ್ಕೆ ಸಮಯ ನಿಗದಿಮಾಡಲಾಗಿದೆ. ಈ ಸಮಯದಲ್ಲಿ ಯಾವುದೇ ಉದ್ಯಾನಗಳಲ್ಲಾಗಲಿ ಸಾರ್ವಜನಿಕರ ಪ್ರವೇಶವನ್ನು ನಿರಾಕರಿಸುವಂತಿಲ್ಲ ಎಂದು ಪ್ರೀತಿ ಗೆಹ್ಲೋಟ್ ವಿವರಿಸಿದರು.
ಇತರ ಗ್ಯಾಲರಿಗಳು