ಕನ್ನಡ ಸುದ್ದಿ  /  Photo Gallery  /  Bengaluru Tech Summit 2022 Photos

Bengaluru Tech Summit 2022: ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ಪ್ರಧಾನಿ ಮೋದಿ ಚಾಲನೆ; ಇಲ್ಲಿವೆ ಫೋಟೋಗಳು

  • ಇಂದಿನಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಆರಂಭವಾಗಿರುವ 25ನೇ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚ್ಯುವಲ್ ಮೂಲಕ ಉದ್ಘಾಟಿಸಿದರು.

ತಂತ್ರಜ್ಞಾನ ಶೃಂಗಸಭೆಗೆ ಚಾಲನೆ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ತಂತ್ರಜ್ಞಾನದ ತವರು. ಭಾರತದ ಆವಿಷ್ಕಾರ ವಲಯದಲ್ಲಿ ಬೆಂಗಳೂರು ನಂಬರ್​ ವನ್ ಆಗಿ ಹೊರಹೊಮ್ಮಿದೆ ಎಂದು ಹೇಳಿದರು.
icon

(1 / 5)

ಜಾಗತಿಕ ಆವಿಷ್ಕಾರ ಸೂಚ್ಯಾಂಕದಲ್ಲಿ ಭಾರತ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕಂಪನಿಗಳ ಆರ್ ಅಂಡ್ ಡಿ ಸೆಂಟರ್ ಗಳು ಭಾರತದಲ್ಲಿವೆ. ಭಾರತ ವಿಶ್ವದ 3ನೇ ಅತಿದೊಡ್ಡ ಸ್ಟಾರ್ಟ್ ಅಪ್​ ಕೇಂದ್ರ ಎಂದು ಮೋದಿ ಹೊಗಳಿದರು.
icon

(2 / 5)

ಕೋವಿಡ್ ಸಮಯದಲ್ಲಿ ಸರ್ಕಾರದ ಯೋಜನೆಗಳನ್ನು ತಂತ್ರಜ್ಞಾನದ ನೆರವಿನಿಂದ ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ ಎಂದು ನರೇಂದ್ರ ಮೋದಿ ತಿಳಿಸಿದರು.
icon

(3 / 5)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದರು.
icon

(4 / 5)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ‌. ಸಿ ಎನ್ ಅಶ್ವತ್ಥನಾರಾಯಣ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಯೊಕಾನ್ ಮುಖ್ಯಸ್ಥೆ ಕಿರಣ್ ಮಜೂಮ್ದಾರ್ ಷಾ ಹಾಗೂ ಐಟಿ ಬಿಟಿ ಉದ್ಯಮಿಗಳು ಹಾಜರಿದ್ದರು.
icon

(5 / 5)

IPL_Entry_Point

ಇತರ ಗ್ಯಾಲರಿಗಳು