Gujarat Elections 2022: ತವರಿನಲ್ಲಿ ಮೋದಿ ಪಕ್ಷದ ಜಯಭೇರಿ; ಈ ದಿನ ಏನೇನಾಯ್ತು? ಸಂಭ್ರಮಾಚರಣೆಯ ಫೋಟೋ ನೋಡಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Gujarat Elections 2022: ತವರಿನಲ್ಲಿ ಮೋದಿ ಪಕ್ಷದ ಜಯಭೇರಿ; ಈ ದಿನ ಏನೇನಾಯ್ತು? ಸಂಭ್ರಮಾಚರಣೆಯ ಫೋಟೋ ನೋಡಿ

Gujarat Elections 2022: ತವರಿನಲ್ಲಿ ಮೋದಿ ಪಕ್ಷದ ಜಯಭೇರಿ; ಈ ದಿನ ಏನೇನಾಯ್ತು? ಸಂಭ್ರಮಾಚರಣೆಯ ಫೋಟೋ ನೋಡಿ

  • ಗುಜರಾತ್‌ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ಅಮೋಘ ಜಯ ಸಾಧಿಸಿದ್ದು, ರಾಜ್ಯ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಸಂಭ್ರಮಾಚಾರಣೆ ಜೋರಾಗಿ ನಡೆದಿದೆ.

ಗುಜರಾತ್‌ನಲ್ಲಿ ಭಾರತೀಯ ಜನತಾ ಪಕ್ಷಯು 156 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತವರು ರಾಜ್ಯದಲ್ಲಿ ಪಕ್ಷವು ತನ್ನ 27 ವರ್ಷಗಳ ರಾಜ್ಯಭಾರವನ್ನು ಚುನಾವಣಾ ವಿಜಯದೊಂದಿಗೆ ಉಳಿಸಿಕೊಂಡಿದೆ.
icon

(1 / 10)

ಗುಜರಾತ್‌ನಲ್ಲಿ ಭಾರತೀಯ ಜನತಾ ಪಕ್ಷಯು 156 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತವರು ರಾಜ್ಯದಲ್ಲಿ ಪಕ್ಷವು ತನ್ನ 27 ವರ್ಷಗಳ ರಾಜ್ಯಭಾರವನ್ನು ಚುನಾವಣಾ ವಿಜಯದೊಂದಿಗೆ ಉಳಿಸಿಕೊಂಡಿದೆ.(ANI)

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಸಂಭ್ರಮವನ್ನು ಪಾಟ್ನಾದಲ್ಲಿ ಬಿಜೆಪಿ ಬೆಂಬಲಿಗರು ಪರಸ್ಪರ ಮುಖಕ್ಕೆ ಬಣ್ಣ ಹಚ್ಚಿಕೊಂಡು ಆಚರಿಸಿದರು.
icon

(2 / 10)

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಸಂಭ್ರಮವನ್ನು ಪಾಟ್ನಾದಲ್ಲಿ ಬಿಜೆಪಿ ಬೆಂಬಲಿಗರು ಪರಸ್ಪರ ಮುಖಕ್ಕೆ ಬಣ್ಣ ಹಚ್ಚಿಕೊಂಡು ಆಚರಿಸಿದರು.(ANI)

ಅಂತಿಮ ಫಲಿತಾಂಶ ಹೊರಬೀಳುವುದಕ್ಕೂ ಮುಂಚೆ, ಗೆಲುವು ಖಚಿತಪಡಿಸಿಕೊಂಡ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಗುಜರಾತ್ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಶ್ರಮವಹಿಸಿದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ನಾನು ಇಷ್ಟು ಹೇಳಲು ಬಯಸುತ್ತೇನೆ. ನೀವು ಪ್ರತಿಯೊಬ್ಬರೂ ಚಾಂಪಿಯನ್! ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.
icon

(3 / 10)

ಅಂತಿಮ ಫಲಿತಾಂಶ ಹೊರಬೀಳುವುದಕ್ಕೂ ಮುಂಚೆ, ಗೆಲುವು ಖಚಿತಪಡಿಸಿಕೊಂಡ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಗುಜರಾತ್ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಶ್ರಮವಹಿಸಿದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ನಾನು ಇಷ್ಟು ಹೇಳಲು ಬಯಸುತ್ತೇನೆ. ನೀವು ಪ್ರತಿಯೊಬ್ಬರೂ ಚಾಂಪಿಯನ್! ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.(PTI)

"ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ" ಎಂದು ಪ್ರಧಾನಿ ಮೋದಿ ಹೇಳಿದರು.
icon

(4 / 10)

"ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ" ಎಂದು ಪ್ರಧಾನಿ ಮೋದಿ ಹೇಳಿದರು.(ANI)

ಗುಜರಾತ್‌ನ ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸಿ ಆರ್ ಪಾಟೀಲ್ ಅವರು ಗಾಂಧಿನಗರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ, ಪರಸ್ಪರ ಸಿಹಿ ಹಂಚಿದರು.
icon

(5 / 10)

ಗುಜರಾತ್‌ನ ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸಿ ಆರ್ ಪಾಟೀಲ್ ಅವರು ಗಾಂಧಿನಗರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ, ಪರಸ್ಪರ ಸಿಹಿ ಹಂಚಿದರು.(ANI)

ಬಿಜೆಪಿಯು 27 ವರ್ಷಗಳ ಕಾಲ ರಾಜ್ಯವನ್ನು ಆಳಿದೆ. ಈಗ ಮತ್ತೆ ಐದು ಕಾಲ ಅಧಿಕಾರ ಮುಂದುವರೆಸಲಿದೆ. ದೇಶದ 16 ರಾಜ್ಯಗಳಲ್ಲಿ ಬಿಜೆಪಿ ಮತ್ತದರ ಮಿತ್ರಪಕ್ಷಗಳು ಸರ್ಕಾರ ನಡೆಸುತ್ತಿವೆ.
icon

(6 / 10)

ಬಿಜೆಪಿಯು 27 ವರ್ಷಗಳ ಕಾಲ ರಾಜ್ಯವನ್ನು ಆಳಿದೆ. ಈಗ ಮತ್ತೆ ಐದು ಕಾಲ ಅಧಿಕಾರ ಮುಂದುವರೆಸಲಿದೆ. ದೇಶದ 16 ರಾಜ್ಯಗಳಲ್ಲಿ ಬಿಜೆಪಿ ಮತ್ತದರ ಮಿತ್ರಪಕ್ಷಗಳು ಸರ್ಕಾರ ನಡೆಸುತ್ತಿವೆ.(ANI)

ಕಳೆದ ಚುನಾವಣೆಯಲ್ಲಿ ಬರೋಬ್ಬರಿ 78 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದ ಕಾಂಗ್ರೆಸ್‌, ಈ ಬಾರಿ ಭಾರಿ ಹಿನ್ನಡೆ ಅನುಭವಿಸಿದೆ. ಕೇವಲ 17 ಕ್ಷೇತ್ರಗಳಲ್ಲಿ ಮಾತ್ರ ಕೈ ಅಭ್ಯರ್ಥಿಗಳು ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಆದರೆ ಬಿಜೆಪಿ 150ರ ಗಡಿ ದಾಟಿ ದಾಖಲೆ ನಿರ್ಮಿಸಿದೆ. ಹೀಗಾಗಿ ಸಹಜವಾಗಿ ರಾಜ್ಯದಲ್ಲಿ ಸಂಭ್ರಮ ಜೋರಾಗಿದೆ.
icon

(7 / 10)

ಕಳೆದ ಚುನಾವಣೆಯಲ್ಲಿ ಬರೋಬ್ಬರಿ 78 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದ ಕಾಂಗ್ರೆಸ್‌, ಈ ಬಾರಿ ಭಾರಿ ಹಿನ್ನಡೆ ಅನುಭವಿಸಿದೆ. ಕೇವಲ 17 ಕ್ಷೇತ್ರಗಳಲ್ಲಿ ಮಾತ್ರ ಕೈ ಅಭ್ಯರ್ಥಿಗಳು ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಆದರೆ ಬಿಜೆಪಿ 150ರ ಗಡಿ ದಾಟಿ ದಾಖಲೆ ನಿರ್ಮಿಸಿದೆ. ಹೀಗಾಗಿ ಸಹಜವಾಗಿ ರಾಜ್ಯದಲ್ಲಿ ಸಂಭ್ರಮ ಜೋರಾಗಿದೆ.(ANI)

ಜಾಮ್‌ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜಾ ಅವರು ತಮ್ಮ ಪತಿ ಮತ್ತು ಕ್ರಿಕೆಟಿಗ ರವೀಂದ್ರ ಜಡೇಜಾ ಅವರೊಂದಿಗೆ ಜಾಮ್‌ನಗರದಲ್ಲಿ ವಿಜಯೋತ್ಸವ ಆಚರಿಸಿದರು.
icon

(8 / 10)

ಜಾಮ್‌ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜಾ ಅವರು ತಮ್ಮ ಪತಿ ಮತ್ತು ಕ್ರಿಕೆಟಿಗ ರವೀಂದ್ರ ಜಡೇಜಾ ಅವರೊಂದಿಗೆ ಜಾಮ್‌ನಗರದಲ್ಲಿ ವಿಜಯೋತ್ಸವ ಆಚರಿಸಿದರು.(PTI)

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ನಂತರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಪ್ರಧಾನಿ ಮೋದಿ ನವದೆಹಲಿಯ ನಡೆದ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದರು.
icon

(9 / 10)

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ನಂತರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಪ್ರಧಾನಿ ಮೋದಿ ನವದೆಹಲಿಯ ನಡೆದ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದರು.(ANI)

ರಾಂಚಿಯಲ್ಲಿ ನಡೆದ ಪಕ್ಷದ ವಿಜಯೋತ್ಸವದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ಪ್ರಧಾನಿ ಮೋದಿಯವರ ಪೋಸ್ಟರ್ ಹಿಡಿದಿರುವ ದೃಶ್ಯ.
icon

(10 / 10)

ರಾಂಚಿಯಲ್ಲಿ ನಡೆದ ಪಕ್ಷದ ವಿಜಯೋತ್ಸವದ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ಪ್ರಧಾನಿ ಮೋದಿಯವರ ಪೋಸ್ಟರ್ ಹಿಡಿದಿರುವ ದೃಶ್ಯ.(ANI)


ಇತರ ಗ್ಯಾಲರಿಗಳು