Gujarat Assembly Elections 2022 Results: ಬಿಜೆಪಿ ಪಾಳೆಯದಲ್ಲಿ ಸಂಭ್ರಮ: ಐತಿಹಾಸಿಕ ಗೆಲುವಿನ ಸ್ವಾಗತಕ್ಕೆ ಕ್ಷಣಗಣನೆ
- ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಜಾರಿಯಲ್ಲಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿರುವುದು ಬಹುತೇಕ ಖಚಿತವಾಗಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವುದು ಖಚಿತ. ಈ ಹಿನ್ನೆಲೆಯಲ್ಲಿ ಗುಜರಾತ್ ಬಿಜೆಪಿ ಘಟಕದಲ್ಲಿ ಸಂಭ್ರಮಾಚರಣೆ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜಗಳೊಂದಿಗೆ ರಸ್ತೆಗಿಳಿದಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ..

(1 / 5)
ಗಾಂಧಿನಗರದಲ್ಲಿರುವ ಪಕ್ಷದ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಪಕ್ಷ ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಅಧಿಕಾರಕ್ಕೇರಲಿರುವುದು ಖಚಿತವಾಗುತ್ತಿದ್ದಂತೇ, ಕೇಸರಿ ಕಾರ್ಯಕರ್ತರು ನೃತ್ಯ ಮಾಡಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
(2 / 5)
ಅದೇ ರೀತಿ ಅಹಮದಾಬಾದ್ ಪಕ್ಷದ ಕಚೇರಿಯಲ್ಲೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದು, ಡೊಳ್ಳು ಬಾರಿಸುವ ಮೂಲಕ, ನೃತ್ಯ ಮಾಡುವ ಮೂಲಕ ಪಕ್ಷದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದರು.(PTI)
(3 / 5)
ಹಾಗೆಯೇ ಅಹಮದಾಬಾದ್‌ನ ಪಕ್ಷದ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಿಜೆಪಿ ಮಹಿಳಾ ಕಾರ್ಯಕರ್ತೆಯರು, ಗುಜರಾತ್‌ನ ಸಾಂಪ್ರದಾಯಿಕ ನೃತ್ಯ ಮಾಡಿ ಗೆಲುವನ್ನು ಸಂಭ್ರಮಿಸಿದರು.(PTI)
(4 / 5)
ಈ ವೇಳೆ ಗಾಂಧಿನಗರದ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಗುಜರಾತ್ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಸಿಂಗ್ ವಘೇಲಾ, ಪ್ರಧಾನಿ ಮೋದಿಯವರ ಅಭಿವೃದ್ಧಿಯ ರಾಜಕಾರಣ ಗುಜರಾತ್‌ನಲ್ಲಿ ಮತ್ತೊಮ್ಮೆ ಗೆದ್ದಿದೆ. ನಾನು ರಾಜ್ಯದ ಜನತೆಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.
ಇತರ ಗ್ಯಾಲರಿಗಳು