ಪರ್ತ್ನಲ್ಲಿ ಇತಿಹಾಸ ನಿರ್ಮಿಸಿದ ಭಾರತ ಅಡಿಲೇಡ್ನಲ್ಲಿ ಸೋತಿದ್ದೇಕೆ; ಸೋಲಿಗೆ 3 ಪ್ರಮುಖ ಕಾರಣಗಳು
- India vs Australia 2nd Test: ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಭಾರತದ ಸೋಲಿಗೆ 3 ಪ್ರಮುಖ ಕಾರಣಗಳೇನು ಎಂಬುದನ್ನು ನೋಡೋಣ.
- India vs Australia 2nd Test: ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಭಾರತದ ಸೋಲಿಗೆ 3 ಪ್ರಮುಖ ಕಾರಣಗಳೇನು ಎಂಬುದನ್ನು ನೋಡೋಣ.
(1 / 5)
ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 10 ವಿಕೆಟ್ಗಳಿಂದ ಸೋತಿದೆ. ಪರ್ತ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಅಡಿಲೇಡ್ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್ನಲ್ಲಿ ಶರಣಾಯಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-1ರ ಸಮಬಲ ಸಾಧಿಸಿದೆ.
(2 / 5)
ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಬ್ಯಾಟರ್ಗಳು, ಬೌಲರ್ಗಳು ಭರ್ಜರಿ ಪ್ರದರ್ಶನ ನೀಡಿದ ಭಾರತ 295 ರನ್ಗಳಿಂದ ಗೆದ್ದಿತ್ತು. ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಶತಕ ಬಾರಿಸಿದರೆ, ಜಸ್ಪ್ರೀತ್ ಬುಮ್ರಾ 8 ವಿಕೆಟ್ ಪಡೆದು ಮಿಂಚಿದ್ದರು. ಆದರೆ, ಅಡಿಲೇಡ್ನಲ್ಲಿ ಪರ್ತ್ನ ಟೆಸ್ಟ್ ಹೀರೋಗಳು ನಿರಾಸೆ ಮೂಡಿಸಿದರು. ಆದರೆ, ಭಾರತದ ಸೋಲಿಗೆ 3 ಪ್ರಮುಖ ಕಾರಣಗಳು ಇಲ್ಲಿವೆ.
(AFP)(3 / 5)
ನಿಯಮಿತ ನಾಯಕ ರೋಹಿತ್ ಶರ್ಮಾ ಅವರು 2ನೇ ಟೆಸ್ಟ್ಗೆ ಮರಳಿದರೂ ಆರಂಭಿಕರಾಗಿ ಕಣಕ್ಕಿಳಿಯುವ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದರು. ಆದರೆ ಮೊದಲ ಇನ್ನಿಂಗ್ಸ್ನಲ್ಲಿ ಆರು ರನ್ ಮತ್ತು 2ನೇ ಇನ್ನಿಂಗ್ಸ್ನಲ್ಲಿ 3 ರನ್ ಗಳಿಸಿದರು. ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ಅವರಂತಹ ಆಟಗಾರರ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದು ಆಕ್ರಮಣಕಾರಿಯಾಗಿ ಬ್ಯಾಟಿಂಗ್ ನಡೆಸಿದ್ದರೆ, ಪಂದ್ಯದ ಫಲಿತಾಂಶ ಬದಲಾಗುವ ಸಾಧ್ಯತೆ ಇತ್ತು.
(AP)(4 / 5)
ಅಡಿಲೇಡ್ ಟೆಸ್ಟ್ನಲ್ಲಿ 2 ಇನ್ನಿಂಗ್ಸ್ಗಳಲ್ಲಿ ಭಾರತೀಯ ಬ್ಯಾಟರ್ಗಳು ಸಂಪೂರ್ಣ ವೈಫಲ್ಯ ಅನುಭವಿಸಿದರು. ಹೀಗಾಗಿ ಟೀಮ್ ಇಂಡಿಯಾ ಭಾರಿ ಬೆಲೆ ತೆರಬೇಕಾಯಿತು. ನಿತೀಶ್ ರೆಡ್ಡಿ ಹೊರತುಪಡಿಸಿ ಉಳಿದ ಬ್ಯಾಟರ್ಗಳು ರನ್ ಗಳಿಸಲು ಪರದಾಟ ನಡೆಸಿದರು. ಆದರೆ ಆಸೀಸ್ ಬ್ಯಾಟರ್ಗಳು ಮಿಂಚಿದರು. ಟ್ರಾವಿಸ್ ಹೆಡ್ ಭರ್ಜರಿ ಶತಕ ಸಿಡಿಸಿದರು. ಇದರ ಪರಿಣಾಮ ಭಾರತ ತಂಡವು ಸೋಲಿಗೆ ಶರಣಾಗಬೇಕಾಯಿತು. ನಿತೀಶ್ ಕುಮಾರ್ ರೆಡ್ಡಿ ಮುಕ್ತವಾಗಿ ಆಡಿದ್ದು ಎರಡೂ ಇನ್ನಿಂಗ್ಸ್ಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
(AFP)(5 / 5)
ಅಡಿಲೇಡ್ ಟೆಸ್ಟ್ನಲ್ಲಿ ಭಾರತದ ಬೌಲರ್ಗಳು ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ. ತಮ್ಮ ಕಾರ್ಯತಂತ್ರಕ್ಕೆ ಅನುಗುಣವಾಗಿ ಬೌಲಿಂಗ್ ಮಾಡಲಿಲ್ಲ. ಪಿಚ್ ಮತ್ತು ಬೌನ್ಸಿ ಟ್ರ್ಯಾಕ್ ಅನ್ನು ಅರಿಯುವಲ್ಲಿ ವಿಫಲರಾದರು. ಆಸ್ಟ್ರೇಲಿಯಾದ ಬೌಲರ್ಗಳು ಶಿಸ್ತುಬದ್ಧ ದಾಳಿ ನಡೆಸಿದರು. ಇದೇ ಕಾರಣಕ್ಕೆ ಎರಡೂ ಇನ್ನಿಂಗ್ಸ್ಗಳಲ್ಲಿ ಅಲ್ಪಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.
(AP)ಇತರ ಗ್ಯಾಲರಿಗಳು