MMHills Rathotsav2024:ಮಲೈಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಸಡಗರ, ತೇರು ಎಳೆದ ಭಕ್ತರು Photos
- ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಡಗರದಿಂದ ನಡೆಯಿತು. ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು,ಕೇರಳದಿಂದಲೂ ಆಗಮಿಸಿದ್ದ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾದರು.

(1 / 6)
ಚಾಮರಾಜನಗರದಲ್ಲಿ ಶಿವರಾತ್ರಿ ರಥೋತ್ಸವ ಜನಜನಿತ. ಅಮಾವಾಸ್ಯೆಯ ಮರು ದಿನ ಮಲೈಮಹದೇಶ್ವರ ಮೂರ್ತಿಯನ್ನು ರಥದಲ್ಲಿ ಇಟ್ಟು ಎಳೆಯಲಾಗುತ್ತದೆ. ಈ ಬಾರಿ ಸೋಮವಾರ ಬೆಳಗ್ಗೆಯೇ ರಥೋತ್ಸವ ಸಡಗರ, ಸಂಭ್ರಮದಿಂದ ಜರುಗಿತು.
(2 / 6)
ಮಲೈಮಹದೇಶ್ವರ ಬೆಟ್ಟದ ಶಿವರಾತ್ರಿ ರಥೋತ್ಸವಕ್ಕೆ ಮಕ್ಕಳೊಂದಿಗೆ ಬಂದಿದ್ದು ಸಹಸ್ರಾರು ಭಕ್ತರು ದೇವರ ದರ್ಶನ ಪಡೆದರು.
(3 / 6)
ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ಮಲೈಮಹದೇಶ್ವರ ಬೆಟ್ಟದ ಮಹದೇಶ್ವರ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆಗಳು ನಡೆದವು.
(4 / 6)
ಶಿವರಾತ್ರಿ ಜಾತ್ರಾ ಮಹೋತ್ಸವದ ಭಾಗವಾಗಿ ನಡೆದ ನಾನಾ ಧಾರ್ಮಿಕ ಚಟುವಟಿಕೆಗಳಲ್ಲಿ ಮಹದೇಶ್ವರ ಮುಖವಾಡದೊಂದಿಗಿನ ಮೆರವಣಿಗೆಯಲ್ಲಿ ಸಾಲೂರು ಮಠದ ಸ್ವಾಮೀಜಿ ಅವರು ಪಾಲ್ಗೊಂಡರು.
(5 / 6)
ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಮಲೈ ಮಹದೇಶ್ವರ ಬೆಟ್ಟದಲ್ಲಿ ವಿವಿಧ ಪೂಜೆಗಳು ನಡೆದವು. ಈ ವೇಳೆ ಮಹದೇಶ್ವರ ಮೆರವಣಿಗೆಯೂ ವಿಜೃಂಭಣೆಯಿಂದ ನಡೆಯಿತು. ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಭಾಗಿಯಾಗಿದ್ದರು.
ಇತರ ಗ್ಯಾಲರಿಗಳು