Chennai Rain News: ಚೆನ್ನೈನಲ್ಲಿ ಮುಂದುವರೆದ ಭಾರಿ ಮಳೆ; ಕೆಲ ಜಿಲ್ಲೆಗಳಲ್ಲಿ ಇಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
chennai rain news : ತಮಿಳುನಾಡಿನ ಚೆನ್ನೈನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಕೂಡ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವ ವರದಿಯಾಗಿದೆ.
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
(1 / 5)
ಭಾರಿ ಮಳೆಯಿಂದಾಗಿ ಚೆನ್ನೈ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ. (HT_PRINT)
(2 / 5)
ತಮಿಳುನಾಡಿನ ಹಲವೆಡೆ ಸೋಮವಾರ ಧಾರಾಕಾರ ಮಳೆಯಾಗಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರ, ವೆಲ್ಲೂರು, ರಾಣಿಪೇಟ್ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಈ ಪ್ರದೇಶಗಳಲ್ಲಿ ಮಂಗಳವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.(Anantha Krishnan)
(3 / 5)
ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಕಡೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಮರಗಳು ಧರೆಗುರುಳಿದ್ದು, ಕೆರೆಗಳು, ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.(Anantha Krishnan)
(4 / 5)
ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಜನರು ಎಚ್ಚರಿಕೆಯಿಂದಿರಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈನಲ್ಲಿ ಭಾನುವಾರ ವರುಣ ಆರ್ಭಟಿಸಿದ್ದು, ಅದು ಸೋಮವಾರಕ್ಕೂ ಮುಂದುವರಿದಿತ್ತು.(Anantha Krishnan)
ಇತರ ಗ್ಯಾಲರಿಗಳು