ಚಿತ್ರದುರ್ಗದ ಫಲಪುಷ್ಪ ಪ್ರದರ್ಶನ ಆರಂಭ, ಹೂವುಗಳಲ್ಲಿ ಅರಳಿದ್ದಾರೆ ಕೋಟೆ ನಾಡಿನ ಮಯೂರ ವರ್ಮ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಚಿತ್ರದುರ್ಗದ ಫಲಪುಷ್ಪ ಪ್ರದರ್ಶನ ಆರಂಭ, ಹೂವುಗಳಲ್ಲಿ ಅರಳಿದ್ದಾರೆ ಕೋಟೆ ನಾಡಿನ ಮಯೂರ ವರ್ಮ

ಚಿತ್ರದುರ್ಗದ ಫಲಪುಷ್ಪ ಪ್ರದರ್ಶನ ಆರಂಭ, ಹೂವುಗಳಲ್ಲಿ ಅರಳಿದ್ದಾರೆ ಕೋಟೆ ನಾಡಿನ ಮಯೂರ ವರ್ಮ

  • ಕೋಟೆ ನಾಡು ಹಾಗೂ ಬಿಸಿಲಿನ ನಾಡು ಎಂದು ಹೆಸರು ಪಡೆದಿರುವ ಚಿತ್ರದುರ್ಗದಲ್ಲಿ ಶನಿವಾರದಿಂದ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಬಗೆಬಗೆಯ ಹೂವು, ಅಲಂಕಾರದಿಂದ ಆಕರ್ಷಿಸಲಿದೆ.

ಚಿತ್ರದುರ್ಗ ನಗರದ ವಿ.ಪಿ. ಬಡಾವಣೆಯಲ್ಲಿರುವ ಜಿಲ್ಲಾ ತೋಟಗಾರಿಕೆ ಇಲಾಖೆ ಆವರಣದಲ್ಲಿ ಇದೇ ಫೆಬ್ರವರಿ 15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. 
icon

(1 / 6)

ಏರ್ಪಡಿಸಲಾಗಿದೆ. ಹೆಣ್ಣಿಗೆ ಗೌರವ ಸೂಚಕ ಕಲಾಕೃತಿ, ಮಯೂರವರ್ಮ, ಸ್ವಾವಲಂಬಿ ರೈತ ಹಾಗೂ ವಾಣಿವಿಲಾಸ ಸಾಗರ ಕಲಾಕೃತಿ 32ನೇ ಫಲ-ಪುಷ್ಪ ಪ್ರದರ್ಶನದ ಈ ಬಾರಿಯ ವಿಶೇಷ ಆಕರ್ಷಣೆ. ಜಿಲ್ಲಾ ಫಲ-ಪುಷ್ಪ ಪ್ರದರ್ಶನವನ್ನು ಪ್ರತಿ ವರ್ಷವೂ ಆಚರಿಸುತ್ತಿದ್ದು, ವಿವಿಧ ಜಾತಿಯ ಹೂಗಳು, ಹಣ್ಣುಗಳು, ತರಕಾರಿಗಳು, ಮತ್ತು ಹಲವು ವಿಶೇಷ ಬಗೆಯ ಅಲಂಕಾರಿಕಾ ಗಿಡಗಳನ್ನು ಬೆಳೆಸಿ ಪ್ರದರ್ಶಿಸಲಾಗುತ್ತಿದೆ. 
icon

(2 / 6)

ಫಲ-ಪುಷ್ಪ ಪ್ರದರ್ಶನದಲ್ಲಿ ಹೂವಿನ ಗಿಡಗಳ ಬೃಹತ್ ಪ್ರದರ್ಶನ, ಕುಬ್ಜ ಮರ (ಬೋನ್ಸಾಯ್) ಗಿಡಗಳು, ತರಕಾರಿ ಕೆತ್ತನೆ, ಅಲಂಕಾರಿಕಾ ಗಿಡಗಳ ಜೋಡಣೆ ಹಾಗೂ ಜಿಲ್ಲೆಯ ರೈತರು ಬೆಳೆದಿರುವ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ ಏರ್ಪಡಿಸಿ, ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆಬಿಸಿಲು ನಾಡಿನಲ್ಲಿ ವಿವಿಧ ಪುಷ್ಪ ಜೋಡಣೆಗಳಿಗೆ ಹಲವು ಬಗೆಯ ವಿಶೇಷ ಹೂಗಳನ್ನು ಬಳಸುತ್ತಿರುವುದರ ಜೊತೆಗೆ ಕುಂಡದಲ್ಲಿ ಬೆಳೆದ ಚಿತ್ತಾಕರ್ಷಕ ವರ್ಣಗಳಿಂದ ಕೂಡಿದ ಸುಮಾರು 50ಕ್ಕೂ ಹೆಚ್ಚು ಬಗೆಯ 50 ಸಾವಿರ ವಿವಿಧ ಜಾತಿಯ  ಹೂವಿನಗಿಡಗಳನ್ನು ಬೆಳೆಯಲಾಗಿದೆ.
icon

(3 / 6)

ಆರ್ಕಿಡ್ಸ್, ಕಾಕ್ಸ್ ಕೂಂಬ್, ಸೆಲೋಶಿಯಾ, ಗಾಕ್ಸೀನಿಯ, ಕೆಲಂಚಾ, ಲಿಲ್ಲಿಸ್, ಇಂಪೇಷನ್ಸ್ (ಮಿಕ್ಸ್‍ಡ್), ಡಾಲಿಯಾ (ಡ್ವಾರ್ಫ್ ಮತ್ತು ಟಾಲ್) ಸಾಲ್ವಿಯಾ (ಕೆಂಪು, ನೀಲಿ, ಕೇಸರಿ,) ಚೆಂಡು ಹೂ, ಚಿಂತಾಮಣಿ ಚೆಂಡು ಹೂ, ಜಿನಿಯಾ (ಡ್ವಾರ್ಫ್ ಮತ್ತು ಟಾಲ್),  ಪೆಟೂನಿಯಾ (ಸಿಂಗಲ್ ಮತ್ತು ಡಬಲ್ ವರ್ಲ್), ಕಾಸ್‍ಮಾಸ್ ಮಿಕ್ಸ್ (ಡ್ವಾರ್ಫ್ ಮತ್ತು ಟಾಲ್), ಬಾಲ್ಸಂ, ಜಿರೇನಿಯಂ, ಆಂಟಿರಿನಮ್ ಮಿಕ್ಸ್ ಡಯಾಂತಸ್ ಮಿಕ್ಸ್, ಕ್ಯಾಲೊಂಡೋಲಾ, ಪಾಟ್ ಕ್ರೈಸಾಂತೆಮ್, ಪೆಂಟಾಸ್, ಯುಪೋರ್ಬಿಯ ಮಿಲ್ಲಿ, ಫಾಯಿನ್‍ಸಿಟಿಯಾ, ಬಿಗೋನಿಯಾ, ವಿಂಕಾ, ಇತ್ಯಾದಿ ವಿವಿಧ ಪುಷ್ಪ ಸಸಿಗಳು, ನೂರಕ್ಕೂ ಹೆಚ್ಚು ಬಗೆಯ ತಳಿಗಳು, ಪ್ರದರ್ಶಿಸುವುದರೊಂದಿಗೆ ಪುಷ್ಪ ರಸಿಕರಿಗೆ ಪ್ರದರ್ಶನ ಮುದ ನೀಡಲಿದೆ ಎನ್ನುವುದು ತೋಟಗಾರಿಕೆ ಉಪನಿರ್ದೇಶಕಿ ಜಿ.ಸವಿತಾ ವಿವರಣೆ.
icon

(4 / 6)

ಚಿತ್ರದುರ್ಗದ ಚಂದ್ರವಳ್ಳಿಯಲ್ಲಿ ಕನ್ನಡದ ಮೊದಲ ದೊರೆ ಮಯೂರವರ್ಮ ಕನ್ನಡದ ಮೊದಲ ಸಾಮ್ರಾಜ್ಯ ಸ್ಥಾಪಿಸಿರುವುದು ಹೆಮ್ಮೆಯ ವಿಷಯ. ಪಲ್ಲವರಿಂದ ಅವಮಾನಿತನಾದ ಮಯೂರವರ್ಮ ಹಿಂದಿರುಗಿ ಚಂದ್ರವಳ್ಳಿಯ ಕಾಡಿನಲ್ಲಿ ಅಂದಿನ ಶ್ರೀ ಪರ್ವತ ಇಂದಿನ ದವಳಪ್ಪನಗುಡ್ಡದ ಪ್ರದೇಶದ ಜನರನ್ನು ಒಳಗೊಂಡು ಶಸ್ತ್ರಭ್ಯಾಸ ಮಾಡಿ ಉನ್ನತ ಸೈನ್ಯ ಕಟ್ಟಿ ಪಲ್ಲವರೊಡನೆ ಕೆಚ್ಚದೆಯಿಂದ ಹೋರಾಡಿ ಅವರನ್ನು ಸೋಲಿಸಿ ಕನ್ನಡದ ಪ್ರಥಮ ಸಾಮ್ರಾಜ್ಯ ಚಂದ್ರವಳ್ಳಿಯಲ್ಲಿ ಸ್ಥಾಪನೆ ಮಾಡಿರುವುದು ಹೆಮ್ಮೆ ಪಡುವಂತ ವಿಷಯವಾಗಿದೆ. ಈ ಇತಿಹಾಸ ಹೇಳುವ ಮಯೂರವರ್ಮನ ಕಲಾಕೃತಿ, ಚಂದ್ರವಳ್ಳಿ ಕೆರೆ, ದವಳಪ್ಪನಗುಡ್ಡ ಹಾಗೂ ಕಲ್ಲಿನ ಮೇಲೆ ಇರುವ ಶಾಸನ ಪರಿಚಯಿಸುವಂತೆ ಹೂವುಗಳಲ್ಲಿ ಇತಿಹಾಸವನ್ನು ಪ್ರದರ್ಶನಗೊಳಿಸಲಾಗುತ್ತಿದೆ.  
icon

(5 / 6)

ಈ ವರ್ಷ ತುಂಬಿರುವ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಸಾಗರ ಅಣೆಕಟ್ಟಿನ ಕಲಾಕೃತಿಯೂ ಪ್ರದರ್ಶನದಲ್ಲಿ  ಇರಲಿದೆ, ಫಲಪುಷ್ಪ ಪ್ರದರ್ಶನದ ಅಂಗವಾಗಿ ನಗರದ ವಿವಿಧ ಶಾಲೆಗಳ ಶಾಲಾ ಮಕ್ಕಳಿಗೆ ಜಾನಪದ ಹಾಗೂ ಭಾವಗೀತೆ ಸ್ಪರ್ಧೆ, ಚಿತ್ರಕಲಾ ಸ್ಟರ್ಧೆ, ಪ್ರಬಂಧ ಸ್ಪರ್ಧೆ, ಹಣ್ಣು ಮತ್ತು ಹೂ ತರಕಾರಿಗಳನ್ನು ಬಳಸಿ ಪ್ಯಾನ್ಸಿ ಡ್ರಸ್ಸ್ ಸ್ಪರ್ಧೆ, ಚಿಕ್ಕ ಮಕ್ಕಳಿಗೆ ಹಣ್ಣು ಮತ್ತು ತರಕಾರಿಗಳ ಗುರುತಿಸುವ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾ ತೋಟಗಾರಿಕೆ ಸಂಘದ ಪದನಿಮಿತ್ತ ಕಾರ್ಯದರ್ಶಿ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ದೀಪಾ ಭೀಮಪ್ಪ ಹೊಂಕಳಿ ಹೇಳುತ್ತಾರೆ
icon

(6 / 6)

(Manu Monster)

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು