ಯುದ್ಧ ಕೊನೆಗೊಳಿಸಲು ಬದ್ಧ; ಅಮೆರಿಕ ಅಧ್ಯಕ್ಷರಾಗಿ 2ನೇ ಬಾರಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಮೊದಲ ಭಾಷಣ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಯುದ್ಧ ಕೊನೆಗೊಳಿಸಲು ಬದ್ಧ; ಅಮೆರಿಕ ಅಧ್ಯಕ್ಷರಾಗಿ 2ನೇ ಬಾರಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಮೊದಲ ಭಾಷಣ

ಯುದ್ಧ ಕೊನೆಗೊಳಿಸಲು ಬದ್ಧ; ಅಮೆರಿಕ ಅಧ್ಯಕ್ಷರಾಗಿ 2ನೇ ಬಾರಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಮೊದಲ ಭಾಷಣ

  • ಈಗ ನಾವು ನಮ್ಮ ಭರವಸೆಗಳನ್ನು ಪೂರೈಸಲು ಪ್ರಾರಂಭಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಯುಎಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟ್ರಂಪ್ ಅವರ ಮೊದಲ ಭಾಷಣದ ವಿವರ ಇಲ್ಲಿದೆ. 

ಬಹು ನಿರೀಕ್ಷಿತ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ವಿರುದ್ಧ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 315 ಮತಗಳನ್ನು ಪಡೆಯುವ ಮೂಲಕ 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
icon

(1 / 7)

ಬಹು ನಿರೀಕ್ಷಿತ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ವಿರುದ್ಧ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 315 ಮತಗಳನ್ನು ಪಡೆಯುವ ಮೂಲಕ 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. (HT_PRINT)

ತಮ್ಮ ಗೆಲುವು ಖಚಿತವಾದ ಬಳಿಕ ಮಾತನಾಡಿರುವ ಯುಎಸ್ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಅಮೆರಿಕದ ಗೆಲವು, ಈಗ ಸುವರ್ಣ ಯುಗ ಆರಂಭವಾಗಲಿದೆ. ಅಮೆರಿಕದ ಇತಿಹಾಸದಲ್ಲಿ ಇದೊಂದು ದೊಡ್ಡ ವಿಜಯವಾಗಿದ್ದು, ಈಗ ನಾವು ನಮ್ಮ ಭರವಸೆಗಳನ್ನು ಪೂರೈಸಲು ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.
icon

(2 / 7)

ತಮ್ಮ ಗೆಲುವು ಖಚಿತವಾದ ಬಳಿಕ ಮಾತನಾಡಿರುವ ಯುಎಸ್ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಅಮೆರಿಕದ ಗೆಲವು, ಈಗ ಸುವರ್ಣ ಯುಗ ಆರಂಭವಾಗಲಿದೆ. ಅಮೆರಿಕದ ಇತಿಹಾಸದಲ್ಲಿ ಇದೊಂದು ದೊಡ್ಡ ವಿಜಯವಾಗಿದ್ದು, ಈಗ ನಾವು ನಮ್ಮ ಭರವಸೆಗಳನ್ನು ಪೂರೈಸಲು ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.(AP)

ಯುದ್ಧವನ್ನು ಕೊನೆಗೊಳಿಸಲು ನಾವು ಬದ್ಧರಾಗಿದ್ದೇವೆ. ಒಳನುಸುಳುವಿಕೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ. ಈಗ ಯಾರೂ ಅಕ್ರಮವಾಗಿ ಅಮೆರಿಕವನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ಟ್ರಂಪ್ ಗುಡುಗಿದ್ದಾರೆ.
icon

(3 / 7)

ಯುದ್ಧವನ್ನು ಕೊನೆಗೊಳಿಸಲು ನಾವು ಬದ್ಧರಾಗಿದ್ದೇವೆ. ಒಳನುಸುಳುವಿಕೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ. ಈಗ ಯಾರೂ ಅಕ್ರಮವಾಗಿ ಅಮೆರಿಕವನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ಟ್ರಂಪ್ ಗುಡುಗಿದ್ದಾರೆ.

ಇಸ್ಲಾಮಿಕ್ ಸ್ಟೇಟ್‌ನಂತಹ ಭಯೋತ್ಪಾದಕ ಸಂಘಟನೆಯನ್ನು ನಾಶ ಮಾಡಿದ್ದು ನಾವೇ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
icon

(4 / 7)

ಇಸ್ಲಾಮಿಕ್ ಸ್ಟೇಟ್‌ನಂತಹ ಭಯೋತ್ಪಾದಕ ಸಂಘಟನೆಯನ್ನು ನಾಶ ಮಾಡಿದ್ದು ನಾವೇ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.(AFP)

ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿದ್ದ ಜಗತ್ತಿನ ಅಗ್ರ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಬಗ್ಗೆಯೂ ಮಾತನಾಡಿರುವ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್ ಒಬ್ಬ ಅದ್ಭುತ ವ್ಯಕ್ತಿ ಎಂದು ಶ್ಲಾಘಿಸಿದ್ದಾರೆ. 
icon

(5 / 7)

ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿದ್ದ ಜಗತ್ತಿನ ಅಗ್ರ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಬಗ್ಗೆಯೂ ಮಾತನಾಡಿರುವ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್ ಒಬ್ಬ ಅದ್ಭುತ ವ್ಯಕ್ತಿ ಎಂದು ಶ್ಲಾಘಿಸಿದ್ದಾರೆ. (Bloomberg)

ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಿರುವ ಹೆಚ್ಚಿನ ಜನರನ್ನು ಶೀಘ್ರದಲ್ಲೇ ವಾಪಸ್ ಕಳುಹಿಸುತ್ತೇವೆ. ಇಂತಹವರಿಗಾಗಿ ತೆರಿಗೆ ಹಣ ವ್ಯಯವಾಗುತ್ತಿದೆ ಎಂದು 2ನೇ ಬಾರಿಗೆ ಯುಎಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಮ್ಮ ಮೊದಲ ಭಾಷಣದಲ್ಲಿ ಗುಡುಗಿದ್ದಾರೆ.
icon

(6 / 7)

ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಿರುವ ಹೆಚ್ಚಿನ ಜನರನ್ನು ಶೀಘ್ರದಲ್ಲೇ ವಾಪಸ್ ಕಳುಹಿಸುತ್ತೇವೆ. ಇಂತಹವರಿಗಾಗಿ ತೆರಿಗೆ ಹಣ ವ್ಯಯವಾಗುತ್ತಿದೆ ಎಂದು 2ನೇ ಬಾರಿಗೆ ಯುಎಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಮ್ಮ ಮೊದಲ ಭಾಷಣದಲ್ಲಿ ಗುಡುಗಿದ್ದಾರೆ.(AFP)

ಡೊನಾಲ್ಡ್ ಟ್ರಂಪ್ ತಮ್ಮ ಚುನಾವಣಾ ಭಾಷಣಗಳಲ್ಲಿ ಯುದ್ಧವನ್ನು ನಿಲ್ಲಿಸುವುದಾಗಿ ಪದೇ ಪದೇ ಹೇಳುತ್ತಿದ್ದರು. ರಷ್ಯಾ ಮತ್ತು ಉಕ್ರೇನ್ ಯುದ್ಧಕ್ಕೆ ಪರಿಹಾರ ಸಿಗಬಹುದು ಎಂದು ಜಗತ್ತಿನ ಹಲವರ ನಿರೀಕ್ಷೆಯಾಗಿದೆ. ಆದರೆ ಇದು ಎಷ್ಟರ ಮಟ್ಟಿಗೆ ಯಶಸ್ಸು ಕಾಣಲಿದೆ ಅನ್ನೋದನ್ನು ಕಾದು ನೋಡಬೇಕಿದೆ.
icon

(7 / 7)

ಡೊನಾಲ್ಡ್ ಟ್ರಂಪ್ ತಮ್ಮ ಚುನಾವಣಾ ಭಾಷಣಗಳಲ್ಲಿ ಯುದ್ಧವನ್ನು ನಿಲ್ಲಿಸುವುದಾಗಿ ಪದೇ ಪದೇ ಹೇಳುತ್ತಿದ್ದರು. ರಷ್ಯಾ ಮತ್ತು ಉಕ್ರೇನ್ ಯುದ್ಧಕ್ಕೆ ಪರಿಹಾರ ಸಿಗಬಹುದು ಎಂದು ಜಗತ್ತಿನ ಹಲವರ ನಿರೀಕ್ಷೆಯಾಗಿದೆ. ಆದರೆ ಇದು ಎಷ್ಟರ ಮಟ್ಟಿಗೆ ಯಶಸ್ಸು ಕಾಣಲಿದೆ ಅನ್ನೋದನ್ನು ಕಾದು ನೋಡಬೇಕಿದೆ.(Bloomberg)


ಇತರ ಗ್ಯಾಲರಿಗಳು