Devaraj Urs: ಕಾಂಗ್ರೆಸ್‌ ಭವನದಲ್ಲಿ ರಾಜೀವ್, ಅರಸು ಜನ್ಮ ಜಯಂತಿ ಆಚರಣೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Devaraj Urs: ಕಾಂಗ್ರೆಸ್‌ ಭವನದಲ್ಲಿ ರಾಜೀವ್, ಅರಸು ಜನ್ಮ ಜಯಂತಿ ಆಚರಣೆ

Devaraj Urs: ಕಾಂಗ್ರೆಸ್‌ ಭವನದಲ್ಲಿ ರಾಜೀವ್, ಅರಸು ಜನ್ಮ ಜಯಂತಿ ಆಚರಣೆ

  • ಬೆಂಗಳೂರಿನಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಇಂದು(ಆ.20-ಶನಿವಾರ) ಭಾರತದ ಮಾಜಿ ಪ್ರಧಾನಮಂತ್ರಿ ರಾಜೀವ್‌ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ್‌ ಅರಸು ಅವರ ಜನ್ಮ ದಿನಾಚರಣೆಯನ್ನು ಅಚರಿಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ರಾಜೀವ್‌ ಹಾಗೂ ಅರಸು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ದೇಶದ ಹಿಂದುಳಿದ ವರ್ಗಗಳ ಏಳಿಗೆಗಾಗಿ ದಿವಂಗತ ರಾಜೀವ್‌ ಗಾಂಧಿ ಹಾಗೂ ದೇವರಾಜ್‌ ಅರಸು ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

ಇಂದು(ಆ.20-ಶನಿವಾರ) ಭಾರತದ ಮಾಜಿ ಪ್ರಧಾನಮಂತ್ರಿ ರಾಜೀವ್‌ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ್‌ ಅರಸು ಅವರ ಜನ್ಮ ದಿನಾಚರಣೆಯನ್ನು ಬೆಂಗಳೂರಿನ ಕಾಂಗ್ರೆಸ್‌ ಭವನದಲ್ಲಿ ಆಚರಿಸಲಾಯಿತು.
icon

(1 / 5)

ಇಂದು(ಆ.20-ಶನಿವಾರ) ಭಾರತದ ಮಾಜಿ ಪ್ರಧಾನಮಂತ್ರಿ ರಾಜೀವ್‌ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ್‌ ಅರಸು ಅವರ ಜನ್ಮ ದಿನಾಚರಣೆಯನ್ನು ಬೆಂಗಳೂರಿನ ಕಾಂಗ್ರೆಸ್‌ ಭವನದಲ್ಲಿ ಆಚರಿಸಲಾಯಿತು.(Verified Twitter)

ರಾಜೀವ್‌ ಗಾಂಧಿ ಹಾಗೂ ದೇವರಾಜ್‌ ಅರಸು ಭಾವಿಚಿತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರಿಂದ ಪುಷ್ಪ ನಮನ ಸಲ್ಲಿಸಲಾಯಿತು.
icon

(2 / 5)

ರಾಜೀವ್‌ ಗಾಂಧಿ ಹಾಗೂ ದೇವರಾಜ್‌ ಅರಸು ಭಾವಿಚಿತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರಿಂದ ಪುಷ್ಪ ನಮನ ಸಲ್ಲಿಸಲಾಯಿತು.(Verified Twitter)

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌, ದೇಶದ ಹಿಂದುಳಿದ ವರ್ಗಗಳ ಏಳಿಗೆಗಾಗಿ ರಾಜೀವ್‌ ಗಾಂಧಿ ಹಾಗೂ ದೇವರಾಜ್‌ ಅರಸು ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು.
icon

(3 / 5)

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌, ದೇಶದ ಹಿಂದುಳಿದ ವರ್ಗಗಳ ಏಳಿಗೆಗಾಗಿ ರಾಜೀವ್‌ ಗಾಂಧಿ ಹಾಗೂ ದೇವರಾಜ್‌ ಅರಸು ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು.(Verified Twitter)

ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಂವಿಧಾನದ ಆಶಯಗಳನ್ನು ಈಡೇರಿಸುವುದು ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ ಎಂದ ನಾಯಕರು, ಕಾಂಗ್ರೆಸ್‌ ಮಾತ್ರ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಎತ್ತಿ ಹಿಡಿಯಬಲ್ಲದು ಎಂದು ಅಭಿಪ್ರಾಯಪಟ್ಟರು.
icon

(4 / 5)

ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಂವಿಧಾನದ ಆಶಯಗಳನ್ನು ಈಡೇರಿಸುವುದು ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ ಎಂದ ನಾಯಕರು, ಕಾಂಗ್ರೆಸ್‌ ಮಾತ್ರ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಎತ್ತಿ ಹಿಡಿಯಬಲ್ಲದು ಎಂದು ಅಭಿಪ್ರಾಯಪಟ್ಟರು.(Verified Twitter)

ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್‌ ಖಂಡ್ರೆ, ಸಲೀಂ ಅಹ್ಮದ್‌, ಮಾಜಿ ಸಂಸದ ವಿಎಸ್‌ ಉಗ್ರಪ್ಪ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಮತ್ತು ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಭಾಗವಹಿಸಿದ್ದರು.
icon

(5 / 5)

ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್‌ ಖಂಡ್ರೆ, ಸಲೀಂ ಅಹ್ಮದ್‌, ಮಾಜಿ ಸಂಸದ ವಿಎಸ್‌ ಉಗ್ರಪ್ಪ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಮತ್ತು ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಭಾಗವಹಿಸಿದ್ದರು.(Verified Twitter)


ಇತರ ಗ್ಯಾಲರಿಗಳು