ಬಾಬರ್ ಅಜಮ್-ಟ್ರಾವಿಸ್ ಹೆಡ್ ಹಿಂದಿಕ್ಕಿ ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ ಪಡೆದ ಅರ್ಷದೀಪ್ ಸಿಂಗ್
- ಭಾರತದ ವೇಗಿ ಅರ್ಷದೀಪ್ ಸಿಂಗ್ ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂದು (ಜನವರಿ 25, ಶನಿವಾರ) ಐಸಿಸಿ ಈ ಪ್ರಶಸ್ತಿಯನ್ನು ಘೋಷಿಸಿದೆ. ವಿಶ್ವದ ಹಲವು ಸ್ಟಾರ್ ಆಟಗಾರರನ್ನು ಹಿಂದಿಕ್ಕಿ ಭಾರತದ ಯುವ ವೇಗಿ ಪ್ರಶಸ್ತಿ ಬಾಚಿಕೊಂಡಿದ್ದಾರೆ.
- ಭಾರತದ ವೇಗಿ ಅರ್ಷದೀಪ್ ಸಿಂಗ್ ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂದು (ಜನವರಿ 25, ಶನಿವಾರ) ಐಸಿಸಿ ಈ ಪ್ರಶಸ್ತಿಯನ್ನು ಘೋಷಿಸಿದೆ. ವಿಶ್ವದ ಹಲವು ಸ್ಟಾರ್ ಆಟಗಾರರನ್ನು ಹಿಂದಿಕ್ಕಿ ಭಾರತದ ಯುವ ವೇಗಿ ಪ್ರಶಸ್ತಿ ಬಾಚಿಕೊಂಡಿದ್ದಾರೆ.
(1 / 7)
2022ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಭಾರತದ ಯುವ ವೇಗಿ ಅರ್ಷದೀಪ್ ಸಿಂಗ್, ಕಳೆದ ವರ್ಷ (2024) ಈ ಸ್ವರೂಪದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದರು. ಕಳೆದ ವರ್ಷ ಭಾರತ ತಂಡವು ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರ್ಷದೀಪ್, ಐಸಿಸಿ ಪ್ರಶಸ್ತಿ ಗೆದ್ದಿದ್ದಾರೆ.
(REUTERS)(2 / 7)
ಅರ್ಷದೀಪ್ ಸಿಂಗ್ 2024ನೇ ಸಾಲಿನ ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2024ರಲ್ಲಿ ಟಿ20 ಸ್ವರೂಪದಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ ಅರ್ಷದೀಪ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇಂದು ಪ್ರಶಸ್ತಿ ಪ್ರಕಟಿಸಿದೆ.
(AFP)(3 / 7)
ಭಾರತೀಯ ವೇಗಿ ಜತೆಗೆ ಆಸ್ಟ್ರೇಲಿಯಾದ ಬ್ಯಾಟರ್ ಟ್ರಾವಿಸ್ ಹೆಡ್, ಪಾಕಿಸ್ತಾನದ ಸ್ಟಾರ್ ಆಟಗಾರ ಬಾಬರ್ ಅಜಮ್ ಮತ್ತು ಜಿಂಬಾಬ್ವೆಯ ಸಿಕಂದರ್ ರಾಜಾ ಕೂಡ 2024ರ ವರ್ಷದ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರೆಲ್ಲರನ್ನೂ ಹಿಂದಿಕ್ಕಿ 2024ನೇ ಸಾಲಿನ ಐಸಿಸಿ ವರ್ಷದ ಟಿ20 ಕ್ರಿಕೆಟರ್ ಪ್ರಶಸ್ತಿಗೆ ಭಾರತೀಯ ವೇಗಿ ಭಾಜನರಾಗಿದ್ದಾರೆ.
(AP)(4 / 7)
2024ರಲ್ಲಿ ಅರ್ಷದೀಪ್ ಸಿಂಗ್ 18 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿ 36 ವಿಕೆಟ್ ಕಬಳಿಸಿದ್ದರು. ಟಿ20 ವಿಶ್ವಕಪ್‌ನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಅವರು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಪವರ್‌ಪ್ಲೇನಲ್ಲಿ ಸ್ವಿಂಗ್ ಎಸೆತಗಳಿಂದ ವಿಕೆಟ್‌ಗಳನ್ನು ಪಡೆದರು.
(AP)(5 / 7)
ಭಾರತದ ಪರ 61 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 97 ವಿಕೆಟ್‌ಗಳನ್ನು ಪಡೆದಿರುವ ಅರ್ಷದೀಪ್ ಸಿಂಗ್, ಇಂಗ್ಲೆಂಡ್ ವಿರುದ್ಧದ ಮೊದಲ ಟಿ20ಯಲ್ಲಿ ದಾಖಲೆ ನಿರ್ಮಿಸಿದ್ದರು. ಚುಟುಕು ಸ್ವರೂಪದಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್ ಎನಿಸಿಕೊಂಡರು.
(AFP)(6 / 7)
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಅಪಾಯಕಾರಿ ಆಟಗಾರರಾದ ಐಡೆನ್ ಮಾರ್ಕ್ರಾಮ್ ಹಾಗೂ ಕ್ವಿಂಟನ್ ಡಿ ಕಾಕ್ ಅವರನ್ನು ಔಟ್ ಮಾಡಿದರು. ಕೊನೆಯ ಎರಡು ಓವರ್‌ಗಳಲ್ಲಿ ಹರಿಣಗಳಿಗೆ 20 ರನ್‌ಗಳು ಬೇಕಾಗಿದ್ದಾಗ, ಅರ್ಷದೀಪ್ ದೋಷರಹಿತ ಓವರ್ ಎಸೆದು ಕೇವಲ ನಾಲ್ಕು ರನ್ ಬಿಟ್ಟುಕೊಟ್ಟರು.
(PTI)ಇತರ ಗ್ಯಾಲರಿಗಳು