ಈವರೆಗೆ ಯಾವೆಲ್ಲಾ ದೇಶಗಳು ಚಾಂಪಿಯನ್ಸ್ ಟ್ರೋಫಿ ಗೆದ್ದಿವೆ? ಆಸ್ಟ್ರೇಲಿಯಾ-ಭಾರತ ಯಶಸ್ವಿ ತಂಡಗಳು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಈವರೆಗೆ ಯಾವೆಲ್ಲಾ ದೇಶಗಳು ಚಾಂಪಿಯನ್ಸ್ ಟ್ರೋಫಿ ಗೆದ್ದಿವೆ? ಆಸ್ಟ್ರೇಲಿಯಾ-ಭಾರತ ಯಶಸ್ವಿ ತಂಡಗಳು

ಈವರೆಗೆ ಯಾವೆಲ್ಲಾ ದೇಶಗಳು ಚಾಂಪಿಯನ್ಸ್ ಟ್ರೋಫಿ ಗೆದ್ದಿವೆ? ಆಸ್ಟ್ರೇಲಿಯಾ-ಭಾರತ ಯಶಸ್ವಿ ತಂಡಗಳು

  • Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಆವೃತ್ತಿಯು ಫೆಬ್ರುವರಿ 19ರಿಂದ ಆರಂಭವಾಗಲಿದೆ. ಪಂದ್ಯಾವಳಿಯ ಒಂಬತ್ತನೇ ಆವೃತ್ತಿ ಇದಾಗಿದೆ. ಹಾಗಿದ್ದರೆ ಕಳೆದ ಎಂಟು ಆವೃತ್ತಿಗಳ ವಿಜೇತರು ಯಾರು?  ಹೆಚ್ಚು ಬಾರಿ ಚಾಂಪಿಯನ್‌ ಆದ ತಂಡ ಯಾವುದು ನೋಡೋಣ.

ದಕ್ಷಿಣ ಆಫ್ರಿಕಾ: ಐಸಿಸಿ ಚಾಂಪಿಯನ್ಸ್ ಟ್ರೋಫಿ 1998ರಲ್ಲಿ ಆರಂಭವಾಯ್ತು. ಮೊದಲ ಆವೃತ್ತಿಯ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ನಡೆಸಲಾಯಿತು. ಇದರಲ್ಲಿ ದಕ್ಷಿಣ ಆಫ್ರಿಕಾ ಗೆದ್ದು ಬೀಗಿತು. ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ 4 ವಿಕೆಟ್‌ಗಳಿಂದ ಜಯ ಸಾಧಿಸಿತು.
icon

(1 / 8)

(ICC)

ನ್ಯೂಜಿಲೆಂಡ್:‌ ಚಾಂಪಿಯನ್ಸ್ ಟ್ರೋಫಿಯ ಎರಡನೇ ಋತುವು 2000ರಲ್ಲಿ ಕೀನ್ಯಾದಲ್ಲಿ ನಡೆಯಿತು. ನ್ಯೂಜಿಲೆಂಡ್ ತಂಡವು ಫೈನಲ್ ಪಂದ್ಯದಲ್ಲಿ ಭಾರತವನ್ನು 4 ವಿಕೆಟ್‌ಗಳಿಂದ ಸೋಲಿಸಿತು.
icon

(2 / 8)

(X)

ಭಾರತ-ಶ್ರೀಲಂಕಾ ಜಂಟಿ ಚಾಂಪಿಯನ್: 2002ರಲ್ಲಿ ಚಾಂಪಿಯನ್ಸ್ ಟ್ರೋಫಿಯ ಮೂರನೇ ಆವೃತ್ತಿ ಶ್ರೀಲಂಕಾದಲ್ಲಿ ನಡೆಯಿತು. ಆ ವರ್ಷ ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡ ಮತ್ತು ಶ್ರೀಲಂಕಾ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಏಕೆಂದರೆ ಮಳೆಯಿಂದಾಗಿ ಫೈನಲ್ ಪಂದ್ಯ ನಡೆದಿರಲಿಲ್ಲ.
icon

(3 / 8)

ವೆಸ್ಟ್ ಇಂಡೀಸ್: 2004ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯನ್ನು ವೆಸ್ಟ್ ಇಂಡೀಸ್ ಗೆದ್ದುಕೊಂಡಿತು. ರೋಮಾಂಚಕ ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ತಂಡ ಆತಿಥೇಯ ಇಂಗ್ಲೆಂಡ್ ತಂಡವನ್ನು 2 ವಿಕೆಟ್‌ಗಳಿಂದ ಸೋಲಿಸಿತು.
icon

(4 / 8)

ಆಸ್ಟ್ರೇಲಿಯಾ: ಚಾಂಪಿಯನ್ಸ್ ಟ್ರೋಫಿಯ ಐದನೇ ಋತುವು 2006ರಲ್ಲಿ ಭಾರತದಲ್ಲಿ ನಡೆಯಿತು. ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಫೈನಲ್ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾದವು. ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್‌ಗಳಿಂದ ಜಯ‌ ಸಾಧಿಸಿತು.
icon

(5 / 8)

ಆಸ್ಟ್ರೇಲಿಯಾ: 2009ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲೂ ಆಸ್ಟ್ರೇಲಿಯಾ ಜಯ ಸಾಧಿಸಿತು. ಪಂದ್ಯಾವಳಿಯ ಆರನೇ ಸೀಸನ್ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. ಪ್ರಶಸ್ತಿ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆ ಮೂಲಕ ಸತತ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯ್ತು.
icon

(6 / 8)

ಭಾರತ: 2013ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ತಂಡ ಗೆದ್ದುಕೊಂಡಿತು. ಎಂಎಸ್ ಧೋನಿ ನಾಯಕತ್ವದಲ್ಲಿ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 5 ರನ್‌ಗಳಿಂದ ರೋಚಕವಾಗಿ ಸೋಲಿಸಿತು. ಭಾರತ ಮತ್ತು ಆಸ್ಟ್ರೇಲಿಯಾ ತಲಾ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದಿವೆ. ಆದರಲ್ಲಿ ಭಾರತ ಒಮ್ಮೆ ಜಂಟಿ ಚಾಂಪಿಯನ್‌ ಆಗಿದೆ.
icon

(7 / 8)

ಪಾಕಿಸ್ತಾನ: ಎಂಟನೇ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿಯೂ ಇಂಗ್ಲೆಂಡ್‌ನಲ್ಲಿ ನಡೆಯಿತು. ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಆದರೆ, ಪಾಕಿಸ್ತಾನ ತಂಡವು ಭಾರತವನ್ನು 180 ರನ್‌ಗಳಿಂದ ಸೋಲಿಸಿ ಮೊದಲ ಬಾರಿಗೆ ಟ್ರೋಫಿಯನ್ನು ಗೆದ್ದುಕೊಂಡಿತು.
icon

(8 / 8)

ಇತರ ಗ್ಯಾಲರಿಗಳು