ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಡೆಲ್ಲಿ ಕ್ಯಾಪಿಟಲ್ಸ್ ಸಿಡಿಗುಂಡು ಜೇಕ್ ಫ್ರೇಸರ್ ಮೆಕ್‌ಗುರ್ಕ್
- ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಸಿಡಿದ ಸಿಡಿಗುಂಡು ಜೇಕ್ ಫ್ರೇಸರ್-ಮೆಕ್‌ಗುರ್ಕ್, ಇದೀಗ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಚೊಚ್ಚಲ ಐಪಿಎಲ್ ಆವೃತ್ತಿಯಲ್ಲೇ ಇವರ ಅಬ್ಬರ ನೋಡಿದ ಕ್ರಿಕೆಟ್ ಆಸ್ಟ್ರೇಲಿಯಾ, ಮೀಸಲು ಆಟಗಾರನಾಗಿ ಆಯ್ಕೆ ಮಾಡಿದೆ. ಇವರೊಂದಿಗೆ ಸಹ ಆಟಗಾರ ಮ್ಯಾಟ್ ಶಾರ್ಟ್ ಕೂಡಾ ಸ್ಥಾನ ಪಡೆದಿದ್ದಾರೆ.
- ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಸಿಡಿದ ಸಿಡಿಗುಂಡು ಜೇಕ್ ಫ್ರೇಸರ್-ಮೆಕ್‌ಗುರ್ಕ್, ಇದೀಗ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಚೊಚ್ಚಲ ಐಪಿಎಲ್ ಆವೃತ್ತಿಯಲ್ಲೇ ಇವರ ಅಬ್ಬರ ನೋಡಿದ ಕ್ರಿಕೆಟ್ ಆಸ್ಟ್ರೇಲಿಯಾ, ಮೀಸಲು ಆಟಗಾರನಾಗಿ ಆಯ್ಕೆ ಮಾಡಿದೆ. ಇವರೊಂದಿಗೆ ಸಹ ಆಟಗಾರ ಮ್ಯಾಟ್ ಶಾರ್ಟ್ ಕೂಡಾ ಸ್ಥಾನ ಪಡೆದಿದ್ದಾರೆ.
(1 / 8)
ಫ್ರೇಸರ್-ಮೆಕ್‌ಗುರ್ಕ್ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಅಬ್ಬರಿಸಿದ್ದರು. ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇವರಿಬ್ಬರೂ ಆಸ್ಟ್ರೇಲಿಯಾದ ಆರಂಭಿಕ 15 ಮಂದಿಯ ತಂಡಕ್ಕೆ ಆಯ್ಕೆಯಾಗಿರಲಿಲ್ಲ.
(AFP)(2 / 8)
ತಂಡದ ಅಗ್ರ ಕ್ರಮಾಂಕಕ್ಕೆ ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ ಅವರಂಥ ಬಲಿಷ್ಠರಿದ್ದಾರೆ. ಇದೀಗ ಯುವ ಆಟಗಾರರು ರಿಸರ್ವ್ ಪ್ಲೇಯರ್‌ಗಳಾಗಿ ಸಾಥ್ ಕೊಡಲಿದ್ದಾರೆ.
(AFP)(3 / 8)
"ಜೇಕ್ ಫ್ರೇಸರ್ ಇತ್ತೀಚೆಗೆ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು ಎಂದು ಮುಖ್ಯ ಆಯ್ಕೆಗಾರ ಜಾರ್ಜ್ ಬೈಲಿ ಹೇಳಿದ್ದಾರೆ.
(AFP)(4 / 8)
ಫ್ರೇಸರ್ ತಮ್ಮ ಚೊಚ್ಚಲ ಐಪಿಎಲ್ ಋತುವಿನಲ್ಲಿ ಕೇವಲ ಒಂಬತ್ತು ಪಂದ್ಯಗಳಲ್ಲಿ ಬರೋಬ್ಬರಿ 234.4ರ ಸ್ಟ್ರೈಕ್ ರೇಟ್‌ನಲ್ಲಿ 330 ರನ್ ಸಿಡಿಸಿದ್ದರು. ಡಿಸಿ ಪ್ಲೇಆಫ್‌ಗೆ ಲಗ್ಗೆಹಾಕಲು ವಿಫಲವಾದರೂ, ಮೆಕ್‌ಗುರ್ಕ್ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯ್ತು.
(AFP)(5 / 8)
ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಯು ಜೂನ್ 2ರಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ. ಟೂರ್ನಿ ಆರಂಭಕ್ಕೂ ಮುನ್ನ ಆಸೀಸ್ ಮೇ 28 ಮತ್ತು 30ರಂದು ಕ್ರಮವಾಗಿ ನಮೀಬಿಯಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.
(AP)(6 / 8)
ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಐಪಿಎಲ್ ಪ್ಲೇಆಫ್ ಪಂದ್ಯಗಳಲ್ಲಿ ಆಡಲು ಭಾರತದಲ್ಲೇ ಉಳಿದಿದ್ದಾರೆ. ಇವರೆಲ್ಲಾ ಪ್ಲೇಆಫ್ ಬಳಿಕ ತಂಡವನ್ನು ಸೇರಿಕೊಳ್ಳಲಿದ್ದಾರೆ.
(PTI)(7 / 8)
ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯ್ನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್ , ಆಡಮ್ ಜಂಪಾ.
(PTI)ಇತರ ಗ್ಯಾಲರಿಗಳು