ಡಬ್ಲ್ಯಪಿಎಲ್ನಲ್ಲಿ ಚರಿತ್ರೆ ಸೃಷ್ಟಿಸಿದ ಎಲ್ಲಿಸ್ ಪೆರಿ; ಅತಿ ಹೆಚ್ಚು ರನ್ ಗಳಿಸಿದ ಅಗ್ರ ಐವರು ಇವರು
- WPL 2025: ಆರ್ಸಿಬಿ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಡಬ್ಲ್ಯುಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟಾಪ್-5ರಲ್ಲಿ ಯಾರಿದ್ದಾರೆ ಎಂಬುದನ್ನು ನೋಡೋಣ.
- WPL 2025: ಆರ್ಸಿಬಿ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಡಬ್ಲ್ಯುಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟಾಪ್-5ರಲ್ಲಿ ಯಾರಿದ್ದಾರೆ ಎಂಬುದನ್ನು ನೋಡೋಣ.
(1 / 5)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಲ್ಲಿಸ್ ಪೆರಿ ಡಬ್ಲ್ಯುಪಿಎಲ್ ಇತಿಹಾಸದಲ್ಲಿ 800 ರನ್ ಗಡಿ ದಾಟಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 21 ಇನ್ನಿಂಗ್ಸ್ಗಳಲ್ಲಿ 835 ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ 7 ಅರ್ಧಶತಕಗಳೂ ಇವೆ. ಅವರ ವೈಯಕ್ತಿಕ ಗರಿಷ್ಠ ಸ್ಕೋರ್ 90*.
(PTI)(2 / 5)
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅವರು 22 ಇನ್ನಿಂಗ್ಸ್ಗಳಲ್ಲಿ 782 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಎಲ್ಲಿಸ್ ಪೆರಿ ಅಗ್ರಸ್ಥಾನಕ್ಕೇರಿದ ಕಾರಣ ಲ್ಯಾನಿಂಗ್ ಒಂದು ಕುಸಿತ ಕಂಡಿದ್ದಾರೆ.
(HT_PRINT)(3 / 5)
ನ್ಯಾಟ್ ಸೀವರ್ ಬ್ರಂಟ್ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ. ಮುಂಬೈ ಇಂಡಿಯನ್ಸ್ ಬ್ಯಾಟರ್ 22 ಇನ್ನಿಂಗ್ಸ್ಗಳಲ್ಲಿ 683 ರನ್ ಗಳಿಸಿದ್ದಾರೆ.
(4 / 5)
ಡೆಲ್ಲಿ ಕ್ಯಾಪಿಟಲ್ಸ್ ಡ್ಯಾಶಿಂಗ್ ಓಪನರ್ ಶಫಾಲಿ ವರ್ಮಾ ಕೂಡ ಅದ್ಭುತವಾಗಿ ಬ್ಯಾಟಿಂಗ್ ನಡೆಸಿದ್ದಾರೆ. ಯುವ ಆಟಗಾರ್ತಿ 4ನೇ ಸ್ಥಾನದಲ್ಲಿದ್ದಾರೆ. ಶೆಫಾಲಿ 22 ಇನ್ನಿಂಗ್ಸ್ಗಳಲ್ಲಿ 654 ರನ್ ಗಳಿಸಿದ್ದಾರೆ.
(PTI)ಇತರ ಗ್ಯಾಲರಿಗಳು