ಜಸ್ಪ್ರೀತ್ ಬುಮ್ರಾದಿಂದ ಕಮಿನ್ಸ್ ತನಕ; ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದ, ಹೊರಗುಳಿಯುವ ಮ್ಯಾಚ್ ವಿನ್ನರ್ಸ್ ಇವರೇ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಜಸ್ಪ್ರೀತ್ ಬುಮ್ರಾದಿಂದ ಕಮಿನ್ಸ್ ತನಕ; ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದ, ಹೊರಗುಳಿಯುವ ಮ್ಯಾಚ್ ವಿನ್ನರ್ಸ್ ಇವರೇ

ಜಸ್ಪ್ರೀತ್ ಬುಮ್ರಾದಿಂದ ಕಮಿನ್ಸ್ ತನಕ; ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದ, ಹೊರಗುಳಿಯುವ ಮ್ಯಾಚ್ ವಿನ್ನರ್ಸ್ ಇವರೇ

  • ICC Champions Trophy 2025: ಫೆಬ್ರವರಿ 19ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಆದರೆ ಈ ಮಹತ್ವದ ಪಂದ್ಯಕ್ಕೆ ಯಾರೆಲ್ಲಾ ಹೊರಬಿದ್ದಿದ್ದಾರೆ, ಹೊರಗುಳಿಯಬಹುದು ಎನ್ನುವುದರ ವಿವರ ಇಲ್ಲಿದೆ.

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 19ರಿಂದ ಐಸಿಸಿ ಮೆಗಾ ಈವೆಂಟ್​ಗೆ ಚಾಲನೆ ಸಿಗಲಿದೆ. ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಪಾಕಿಸ್ತಾನ ಮತ್ತು ದುಬೈನಲ್ಲಿ (ಭಾರತದ ಪಂದ್ಯಗಳು ಮಾತ್ರ) ಆಯೋಜಿಸಲಾಗಿದೆ.
icon

(1 / 9)

ಈಗಾಗಲೇ ಎಲ್ಲಾ ತಂಡಗಳು ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿವೆ. ಆದರೆ ಈ ಮಧ್ಯೆ, ಸ್ಟಾರ್​ ಆಟಗಾರರೇ ಗಾಯಗೊಂಡಿದ್ದಾರೆ. ಹೀಗಿದ್ದಾಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದ ಅಥವಾ ಹೊರಗುಳಿಯಬಹುದಾದ ಆಟಗಾರರ ಬಗ್ಗೆ ತಿಳಿದುಕೊಳ್ಳೋಣ.
icon

(2 / 9)

ಪಾಕಿಸ್ತಾನದ ಯುವ ತಾರೆ ಸೈಮ್ ಅಯೂಬ್ ಚಾಂಪಿಯನ್ಸ್ ಟ್ರೋಫಿಯ ಭಾಗವಾಗಿಲ್ಲ. ಈತನ ಆಯ್ಕೆಗಾಗಿ ಕಾದಿದ್ದ ಪಾಕಿಸ್ತಾನ, ಗಾಯದಿಂದ ಚೇತರಿಸಿಕೊಳ್ಳದ ಹಿನ್ನೆಲೆ ಅಯೂಬ್​ರನ್ನು ಕೈಬಿಟ್ಟು ಅಂತಿಮ ತಂಡವನ್ನು ಪ್ರಕಟಿಸಿತ್ತು. ಪಾಕ್ ಪರ ಅದ್ಭುತ ಪ್ರದರ್ಶನ ನೀಡಿದ್ದ ಅಯೂಬ್, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಫೀಲ್ಡಿಂಗ್ ಮೊಣಕಾಲಿಗೆ ಗಾಯಗೊಂಡಿದ್ದರು.
icon

(3 / 9)

ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರು ಭಾರತ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆದರೆ ಆಸ್ಟ್ರೇಲಿಯಾ ಪ್ರವಾಸದ ವೇಳೆ ಬೆನ್ನುನೋವಿನ ಸಮಸ್ಯೆ ಒಳಗಾಗಿದ್ದ ಬುಮ್ರಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅವರು ಇನ್ನೂ ಚೇತರಿಸಿಕೊಂಡಿಲ್ಲ. ಪ್ರಸ್ತುತ ಬುಮ್ರಾ ಇಂಗ್ಲೆಂಡ್ ವಿರುದ್ಧದ ತವರು ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಬಗ್ಗೆ ಅನುಮಾನವಿದೆ.
icon

(4 / 9)

ಆಸ್ಟ್ರೇಲಿಯಾ ಭಾರೀ ಆಘಾತಕ್ಕೆ ಒಳಗಾಗಿದೆ. ತನ್ನ ನಾಯಕ ಪ್ಯಾಟ್ ಕಮಿನ್ಸ್ ಅವರನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಕಷ್ಟವೆಂದು ಹೇಳಲಾಗುತ್ತಿದೆ. ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಪ್ಯಾಟ್ ಕಮಿನ್ಸ್ ಪಾದದ ಗಾಯಕ್ಕೆ ಒಳಗಾಗಿದ್ದರು. ಅವರಿನ್ನೂ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ.
icon

(5 / 9)

ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್​ವುಡ್ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸೇರಿಸಲಾಗಿದೆ. ಆದರೆ ಹೇಜಲ್​ವುಡ್ ಅವರ ವೈದ್ಯಕೀಯ ವರದಿ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಂಡದ ಕೋಚ್ ಸ್ಪಷ್ಟವಾಗಿ ಹೇಳಿದ್ದಾರೆ. ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಈ ವೇಗಿ ಗಾಯಗೊಂಡಿದ್ದರು. ಹಾಗಾಗಿ ಅವರೂ ಚಾಂಪಿಯನ್ಸ್ ಟ್ರೋಫಿ ಆಡುವುದು ಬಹುತೇಕ ಅನುಮಾನ ಎನ್ನಲಾಗಿದೆ.
icon

(6 / 9)

ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಆಲ್​ರೌಂಡರ್ ಮಿಚೆಲ್ ಮಾರ್ಷ್ ಕೂಡ ಬೆನ್ನುನೋವಿನಿಂದ ಚೇತರಿಸಿಕೊಂಡಿಲ್ಲ. ಸದ್ಯಕ್ಕೆ ಕ್ರಿಕೆಟ್​​​ನಿಂದ ದೂರವಿರಲು ಫಿಸಿಯೋ ಸೂಚಿಸಿದ್ದಾರೆ. ಮಿಚೆಲ್ ಮಾರ್ಷ್ ಇನ್ನು ಮುಂದೆ ಆಸ್ಟ್ರೇಲಿಯಾಕ್ಕೆ ಲಭ್ಯವಿರುವುದಿಲ್ಲ.
icon

(7 / 9)

ದಕ್ಷಿಣ ಆಫ್ರಿಕಾ ತಂಡದಲ್ಲಿ ಅವಕಾಶ ಪಡೆದಿದ್ದ ಜೆರಾಲ್ಡ್ ಕೊಯೆಟ್ಜಿ ಗಾಯದಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಹೊರಬಿದ್ದಿದ್ದಾರೆ.
icon

(8 / 9)

ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿದ್ದ ಆಸ್ಟ್ರೇಲಿಯಾದ ಆಲ್​ರೌಂಡರ್​ ಮಾರ್ಕಸ್ ಸ್ಟೋಯ್ನಿಸ್ ಅವರು ಟೂರ್ನಿಗೂ ಮುನ್ನವೇ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.
icon

(9 / 9)

(REUTERS)

ಇತರ ಗ್ಯಾಲರಿಗಳು