ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್: ಅತಿ ಹೆಚ್ಚು ರನ್, ವಿಕೆಟ್, ಸರಣಿ ಶ್ರೇಷ್ಠ ಪ್ರಶಸ್ತಿ ವಿಜೇತರ ಪಟ್ಟಿ
- ಭಾರತ ಅಂಡರ್ 19 ವನಿತೆಯರ ತಂಡವು ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದು ಸಂಭ್ರಮಿಸಿದೆ. ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದ ತಂಡ ಮತ್ತೊಂದು ಐಸಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
- ಭಾರತ ಅಂಡರ್ 19 ವನಿತೆಯರ ತಂಡವು ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದು ಸಂಭ್ರಮಿಸಿದೆ. ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದ ತಂಡ ಮತ್ತೊಂದು ಐಸಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
(1 / 8)
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, 82 ರನ್‌ಗಳಿಗೆ ಆಲೌಟ್ ಆಯ್ತು. ಇದಕ್ಕೆ ಪ್ರತಿಯಾಗಿ ಸುಲಭ ಚೇಸಿಂಗ್ ನಡೆಸಿದ ಭಾರತ ತಂಡ, ಕೇವಲ 11.2 ಓವರ್‌ಗಳಲ್ಲೇ 1 ವಿಕೆಟ್ ಮಾತ್ರ ಕಳೆದುಕೊಂಡು 84 ರನ್ ಗಳಿಸಿ ಗುರಿ ತಲುಪಿತು.
(2 / 8)
ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಗೊಂಗಾಡಿ ತ್ರಿಶಾ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಪರುಣಿಕಾ ಆಯುಷಿ ಶುಕ್ಲಾ ಹಾಗೂ ವೈಷ್ಣವಿ ಶರ್ಮಾ ತಲಾ 2 ವಿಕೆಟ್ ಕಬಳಿಸಿದರು. ಸರಣಿಯುದ್ದಕ್ಕೂ ಪ್ರಚಂಡ ಫಾರ್ಮ್‌ನಲ್ಲಿರುವ ಗೊಂಗಾಡಿ ತ್ರಿಶಾ ಮತ್ತೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಕೇವಲ 33 ಎಸೆತಗಳಲ್ಲಿ 44 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
(3 / 8)
ಸರಣಿಯುದ್ದಕ್ಕೂ ಅಬ್ಬರಿಸಿದ ಜಿ ತ್ರಿಶಾ, ಫೈನಲ್ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಕಳೆದ ಬಾರಿಯ ವಿಶ್ವಕಪ್‌ನಲ್ಲೂ ಆಡಿದ ಅನುಭವವಿದ್ದ ತ್ರಿಶಾ ಟೂರ್ನಿಯುದ್ದಕ್ಕೂ 309 ರನ್ ಗಳಿಸುವ ಮೂಲಕ, ಟೂರ್ನಿಯ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಹೀಗಾಗಿ ಸರಣಿಶ್ರೇಷ್ಠ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು.
(4 / 8)
ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಆಡಿದ ತ್ರಿಶಾ, ಒಂದು ಸ್ಫೋಟಕ ಶತಕ ಸೇರಿ 309 ರನ್ ಗಳಿಸಿದ್ದಾರೆ. 147.14ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 45 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿದ್ದಾರೆ. ಅಲ್ಲದೆ ಬೌಲಿಂಗ್‌ನಲ್ಲೂ ಅಬ್ಬರಿಸಿರು ಆಟಗಾರ್ತಿ 7 ವಿಕೆಟ್ ಕಬಳಿಸಿದ್ದಾರೆ.
(5 / 8)
ಇಂಗ್ಲೆಂಡ್‌ನ ಡೇವಿನಾ ಸಾರಾ ಟಿ ಪೆರಿನ್, ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. 5 ಪಂದ್ಯಗಳಲ್ಲಿ ಅವರು 176 ರನ್ ಗಳಿಸಿದರು. ಭಾರತದ ಮತ್ತೊಬ್ಬರು ಆರಂಭಿಕ ಆಟಗಾರ್ತಿ ಕಮಲಿನಿ 7 ಪಂದ್ಯಗಳಲ್ಲಿ 143 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
(6 / 8)
ಬೌಲರ್‌ಗಳ ಪೈಕಿ ಭಾರತೀಯ ಸ್ಪಿನ್ನರ್‌ಗಳದ್ದೇ ಆರ್ಭಟ. ಅಂಡರ್ 19 ವಿಶ್ವಕಪ್‌ನಲ್ಲಿ ಚೊಚ್ಚಲ ಹ್ಯಾಟ್ರಿಕ್ ಸಾಧನೆ ಮಾಡಿದ ವೈಷ್ಣವಿ ಶರ್ಮಾ, ದಾಖಲೆಯ 17 ವಿಕೆಟ್‌ಗಳೊಂದಿಗೆ ಟೂರ್ನಿಯ ಗರಿಷ್ಠ ವಿಕೆಟ್ ಟೇಕರ್ ಎನಿಸಿಕೊಂಡಿದ್ದಾರೆ.
(7 / 8)
ಇದೇ ವೇಳೆ ಆಯುಷಿ ಶರ್ಮಾ 14 ವಿಕೆಟ್ ಪಡೆಯುವ ಮೂಲಕ ಗರಿಷ್ಠ ವಿಕೆಟ್ ಪಡೆದ ಎರಡನೇ ಆಟಗಾರ್ತಿ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಇದೇ ವೇಳೆ ಪರುಣಿಕಾ ಸಿಸೋಡಿಯಾ 10 ವಿಕೆಟ್ ಪಡೆದು ನಾಲ್ಕನೇ ಸ್ಥಾನ ಪಡೆದಿದ್ದಾರೆ.
(8 / 8)
2023ರಲ್ಲಿ ನಡೆದ ಚೊಚ್ಚಲ ಅಂಡರ್ 19 ಟಿ20 ವಿಶ್ವಕಪ್‌ನಲ್ಲಿಯೂ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ಈ ಬಾರಿಯ ಟೂರ್ನಿಯಲ್ಲಿ ಭಾರತದ ಮತ್ತೆ ಇತಿಹಾಸ ಮರುಕಳಿಸುವಂತೆ ಮಾಡಿದೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲದೆ ಫೀಲ್ಡಿಂಗ್‌ನಲ್ಲೂ ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸತತ ಎರಡನೇ ಬಾರಿಯೂ ಗೆದ್ದು ಚಾಂಪಿಯನ್ ಪಟ್ಟ ಉಳಿಸಿಕೊಂಡಿದೆ.
ಇತರ ಗ್ಯಾಲರಿಗಳು