ಭಾರತ vs ಇಂಗ್ಲೆಂಡ್ ಮೊದಲ ಟಿ20: ಸಮಯ, ಆಡುವ ಬಳಗ, ಮುಖಾಮುಖಿ ದಾಖಲೆ ಮತ್ತು ನೇರಪ್ರಸಾರ ವಿವರ
- ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ಕ್ರಿಕೆಟ್ ತಂಡವು ಬುಧವಾರ (ಜನವರಿ 22) ಇಂಗ್ಲೆಂಡ್ ವಿರುದ್ದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಡಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ಐದು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ.
- ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ಕ್ರಿಕೆಟ್ ತಂಡವು ಬುಧವಾರ (ಜನವರಿ 22) ಇಂಗ್ಲೆಂಡ್ ವಿರುದ್ದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಡಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ಐದು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ.
(1 / 9)
ಮೊದಲ ಟಿ20 ಪಂದ್ಯವು ಜನವರಿ 22ರಂದು ಸಂಜೆ 7:00 ಗಂಟೆಗೆ ಪ್ರಾರಂಭವಾಗುತ್ತವೆ. ಟಾಸ್ ಪ್ರಕ್ರಿಯೆಯು 6:30ಕ್ಕೆ ನಡೆಯಲಿದೆ
(Sudipta Banerjee)(2 / 9)
ಎರಡು ತಿಂಗಳ ನಂತರ ಚುಟುಕು ಸ್ವರೂಪದಲ್ಲಿ ಭಾರತ ತಂಡ ಕಣಕ್ಕಿಳಿಯುತ್ತಿದೆ. ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಆಂಗ್ಲರ ಬಳಗವು ಈಗಾಗಲೇ ಮೊದಲ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದೆ. ಆದರೆ, ಭಾರತದ ಆಡುವ ಬಳಗ ಪಂದ್ಯದ ಸಮಯದಲ್ಲೇ ತಿಳಿಯಲಿದೆ.
(PTI)(3 / 9)
ವೇಗಿ ಮೊಹಮ್ಮದ್ ಶಮಿ 14 ತಿಂಗಳ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದಾರೆ. ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಕೂಡಾ ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ಧ್ರುವ್ ಜುರೆಲ್ ತಂಡದಲ್ಲಿ ಸ್ಥಾನ ಪಡೆದಿದ್ದು, ಸಂಜು ಸ್ಯಾಮ್ಸನ್ ನಂತರ ಎರಡನೇ ಕೀಪರ್ ಆಗಿ ಸ್ಥಾನ ಪಡೆದಿದ್ದಾರೆ.
(AFP)(4 / 9)
ಭಾರತ ತಂಡವು ವಿಶ್ವ ಟಿ20 ಚಾಂಪಿಯನ್ ಆದ ನಂತರ ಟಿ20 ದ್ವಿಪಕ್ಷೀಯ ಸರಣಿಯನ್ನು ಕಳೆದುಕೊಂಡಿಲ್ಲ. ಕೊನೆಯದಾಗಿ ದಕ್ಷಿಣ ಆಫ್ರಿಕಾ ವಿರುದ್ಧ 3-1 ಅಂತರದಿಂದ ವಿದೇಶಿ ಸರಣಿ ಗೆದ್ದ ತಂಡವು, ಮತ್ತೆ ತವರಿನಲ್ಲಿ ಪಾರುಪತ್ಯ ಮೆರೆಯಲು ಸಜ್ಜಾಗಿದೆ.
(Sudipta Banerjee)(5 / 9)
ಟಿ20ಯಲ್ಲಿ ಭಾರತ vs ಇಂಗ್ಲೆಂಡ್ ಮುಖಾಮುಖಿ ದಾಖಲೆ ನೋಡುವುದಾದರೆ, ಉಭಯ ತಂಡಗಳು ಈವರೆಗೆ 24 ಪಂದ್ಯಗಳಲ್ಲಿ ಪರಸ್ಪರ ಎದುರಾಗಿವೆ. ಅದರಲ್ಲಿ ಭಾರತ 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಇಂಗ್ಲೆಂಡ್ ತಂಡ 11ರಲ್ಲಿ ಗೆದ್ದಿದೆ.
(AFP)(6 / 9)
ನೇರಪ್ರಸಾರ: ಭಾರತ vs ಇಂಗ್ಲೆಂಡ್ ಟಿ20 ಸರಣಿಯ ನೇರಪ್ರಸಾರವು ಭಾರತದಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಇದೇ ವೇಳೆ ಟಿವಿ ಮೂಲಕ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್‌ನಲ್ಲಿ ಪಂದ್ಯ ವೀಕ್ಷಿಸಬಹುದು.
(Shyamal Maitra)(7 / 9)
ಇಂಗ್ಲೆಂಡ್ ಆಡುವ ಬಳಗ: ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಬೆನ್ ಡಕೆಟ್, ಫಿಲ್ ಸಾಲ್ಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಲಿಯಾಮ್ ಲಿವಿಂಗ್‌ಸ್ಟನ್, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಮಾರ್ಕ್ ವುಡ್.
(AP)(8 / 9)
ಭಾರತ ಸಂಭಾವ್ಯ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
(PTI)ಇತರ ಗ್ಯಾಲರಿಗಳು