IPL 2025: ಹಸಿರು ಜೆರ್ಸಿಯಲ್ಲಿ ಬದಲಾಗುತ್ತಾ ಆರ್‌ಸಿಬಿ ಅದೃಷ್ಟ; ಇಂದಿನ ಐಪಿಎಲ್ ಪಂದ್ಯಗಳ 10 ಆಸಕ್ತಿಕರ ಅಂಶಗಳು
- ಐಪಿಎಲ್ 2025ರ ಆವೃತ್ತಿಯಲ್ಲಿ ಏಪ್ರಿಲ್ 13ರಂದು 2 ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗಲಿವೆ. ಭಾನುವಾರದ ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳನ್ನು ನೋಡೋಣ.
- ಐಪಿಎಲ್ 2025ರ ಆವೃತ್ತಿಯಲ್ಲಿ ಏಪ್ರಿಲ್ 13ರಂದು 2 ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗಲಿವೆ. ಭಾನುವಾರದ ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳನ್ನು ನೋಡೋಣ.
(1 / 10)
ಆರ್‌ಆರ್ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಆರ್‌ಆರ್ ನಡುವಿನ ಪಂದ್ಯವು ಮಧ್ಯಾಹ್ನ 3:30ಕ್ಕೆ ನಡೆಯಲಿವೆ. ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7:30ಕ್ಕೆ ಆರಂಭವಾಗಲಿದೆ.
(PTI)(2 / 10)
ಐಪಿಎಲ್‌ನಲ್ಲಿ ಆರ್‌ಆರ್ ಮತ್ತು ಆರ್‌ಸಿಬಿ ತಂಡಗಳು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಅದರಲ್ಲಿ ಆರ್‌ಸಿಬಿ 15 ಪಂದ್ಯಗಳಲ್ಲಿ ಗೆದ್ದರೆ, ರಾಜಸ್ಥಾನ 14 ಪಂದ್ಯಗಳನ್ನು ಗೆದ್ದಿದೆ.
(PTI)(3 / 10)
ಜೈಪುರದಲ್ಲಿ ನಡೆದ ಪಂದ್ಯಗಳಲ್ಲಿ ಉಭಯ ತಂಡಗಳ ನಡುವಿನ ಪೈಪೋಟಿ ಸಮನಾಗಿದೆ. ಆದರೆ ಆತಿಥೇಯ ತಂಡ 5-4 ಅಂತರದಿಂದ ತುಸು ಮೇಲುಗೈ ಸಾಧಿಸಿದೆ. ಈ ತಂಡಗಳು ಆಡಿದ ಕೊನೆಯ ಐದು ಪಂದ್ಯಗಳಲ್ಲಿಯೂ ರಾಜಸ್ಥಾನ 3-2 ಅಂತರದಿಂದ ಮೇಲುಗೈ ಸಾಧಿಸಿದೆ.
(Surjeet Yadav)(4 / 10)
ರಾಜಸ್ಥಾನ ತಂಡದ ವೇಗಿ ಸಂದೀಪ್ ಶರ್ಮಾ, ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಗರಿಷ್ಠ ಏಳು ಬಾರಿ ಔಟ್ ಮಾಡಿದ್ದಾರೆ. ಸ್ವಿಂಗ್ ಹಾಗೂ ಯಾರ್ಕರ್‌ಗಳಿಂದ ಎದುರಾಳಿಯನ್ನು ಕಾಡುವ ಸಂದೀಪ್, ಆರ್‌ಸಿಬಿಗೆ ಮುಳುವಾದರೂ ಅಚ್ಚರಿಯಿಲ್ಲ.
(AP)(5 / 10)
ಪ್ರಸಕ್ತ ವರ್ಷದ ಐಪಿಎಲ್ ಋತುವಿನಲ್ಲಿ ಸಂಜು ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಡಿದ ಐದು ಪಂದ್ಯಗಳಲ್ಲಿ 36ರ ಸರಾಸರಿ ಮತ್ತು 151ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ. ಇವರನ್ನು ಆರ್‌ಸಿಬಿ ವೇಗಿ ಭುವನೇಶ್ವರ್ ಕುಮಾರ್ ಕಾಡುವ ಸಾಧ್ಯತೆ ಇದೆ. ಒಟ್ಟು 18 ಟಿ20 ಇನ್ನಿಂಗ್ಸ್‌ಗಳಲ್ಲಿ ನಾಲ್ಕರಲ್ಲಿ ಸ್ಯಾಮ್ಸನ್ ಅವರನ್ನು ಭುವಿ ಔಟ್ ಮಾಡಿದ್ದಾರೆ.
(Surjeet Yadav)(6 / 10)
ರಾಜಸ್ಥಾನ್ ವಿರುದ್ಧ ಆರ್‌ಸಿಬಿ ತಂಡವು ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಪ್ರತಿ ಬಾರಿಯೂ ಐಪಿಎಲ್‌ನ ಒಂದು ಪಂದ್ಯದಲ್ಲಿ ತಂಡ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತದೆ. ಇದು 'ಗೋ ಗ್ರೀನ್' ಅಭಿಯಾನದ ಭಾಗವಾಗಿದ್ದು, ಈ ಬಾರಿ ಏಪ್ರಿಲ್ 20ರಂದು ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧ ಆಡಲಿದೆ. ಅಪರೂಪವೆಂಬಂತೆ ತವರಿನ ಹೊರಗೆ ಆಡುತ್ತಿರುವ ಪಂದ್ಯದಲ್ಲಿ ತಂಡ ಹಸಿರು ಜೆರ್ಸಿ ತೊಡುತ್ತಿದೆ.
(AFP)(7 / 10)
ಪ್ರಸಕ್ತ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ತಂಡವು ಭರ್ಜರಿ ಫಾರ್ಮ್‌ನಲ್ಲಿದ್ದು, ಟೂರ್ನಿಯ ಏಕೈಕ ಅಜೇಯ ತಂಡ ಎನಿಸಿಕೊಂಡಿದೆ. ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಬೀಗಿದೆ. ಅತ್ತ ಮುಂಬೈ ಇಂಡಿಯನ್ಸ್ ತಂಡ 1 ಪಂದ್ಯ ಮಾತ್ರ ಗೆದ್ದಿದ್ದು, ನಾಲ್ಕರಲ್ಲಿ ಸೋತಿದೆ.
(REUTERS)(8 / 10)
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರನ್ ಮಳೆ ಹರಿಯುವ ನಿರೀಕ್ಷೆ ಇದ. ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ದೊಡ್ಡ ಮೊತ್ತದ ರನ್ ಗಳಿಕೆಗೆ ಹೆಸರುವಾಸಿಯಾಗಿದೆ.
(Hindustan Times)(9 / 10)
ಈ ಎರಡೂ ತಂಡಗಳ ನಡುವೆ ಐಪಿಎಲ್ ಪಂದ್ಯಗಳಾದಾಗ ಮುಂಬೈ ಇಂಡಿಯನ್ಸ್ 19 ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದೆ. ಉಳಿದಂತೆ ಡೆಲ್ಲಿ ಕ್ಯಾಪಿಟಲ್ಸ್ 16ರಲ್ಲಿ ಜಯ ಸಾಧಿಸಿದೆ. ಆದರೆ, ತವರಿನಲ್ಲಿ ಡಿಸಿ ತಂಡವು ಎಂಐ ವಿರುದ್ಧ 9-5 ಅಂತರದಲ್ಲಿ ಮುನ್ನಡೆಯಲ್ಲಿದೆ.
(PTI)ಇತರ ಗ್ಯಾಲರಿಗಳು