ಕಳೆದ ವರ್ಷವಷ್ಟೇ ನಿವೃತ್ತಿ ಘೋಷಿಸಿದ್ದ ಜೇಮ್ಸ್ ಆ್ಯಂಡರ್ಸನ್ ಮತ್ತೆ ಕ್ರಿಕೆಟ್ ಆಡಲು ಸಜ್ಜು
- James Anderson: 2024ರ ಜುಲೈನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರು ಮತ್ತೆ ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ.
- James Anderson: 2024ರ ಜುಲೈನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರು ಮತ್ತೆ ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ.
(1 / 5)
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ನಲ್ಲಿ 704 ವಿಕೆಟ್ ಪಡೆದಿರುವ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರು ಸುಮಾರು ನಿವೃತ್ತಿಯ ನಂತರ ಕ್ರಿಕೆಟ್ ಮೈದಾನಕ್ಕೆ ಮರಳಲು ಸಜ್ಜಾಗಿದ್ದಾರೆ. ಏಪ್ರಿಲ್ನಲ್ಲಿ ಆರಂಭವಾಗುವ ಕೌಂಟಿ ಚಾಂಪಿಯನ್ಶಿಪ್ನಲ್ಲಿ ಲಂಕಾಷೈರ್ ಪರ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ ಎಂದು ಇಎಸ್ಪಿಎನ್ ಕ್ರಿಕ್ಇನ್ಫೋ ವರದಿ ಮಾಡಿದೆ.
(AFP)(2 / 5)
2024ರ ಜುಲೈನಲ್ಲಿ ಲಾರ್ಡ್ಸ್ನಲ್ಲಿ ಜರುಗಿದ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ನಲ್ಲಿ ಕಣಕ್ಕಿಳಿದಿದ್ದ ಆ್ಯಂಡರ್ಸನ್ ಅವರು ಪಂದ್ಯದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಅವರು ರೆಡ್-ಬಾಲ್ ಕ್ರಿಕೆಟ್ ಮಾತ್ರವಲ್ಲ, ಲಂಕಾಷೈರ್ ಪರ ಕ್ರಿಕೆಟ್ನ ಎಲ್ಲಾ ಫಾರ್ಮೆಟ್ಗಳಲ್ಲೂ ಕಣಕ್ಕಿಳಿಯಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.
(REUTERS)(3 / 5)
ಜಿಮ್ಮಿ ತಮ್ಮ ವೃತ್ತಿಜೀವನದ ಆರಂಭದಿಂದಲೂ ಲಂಕಾಷೈರ್ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ. ಅವರು 2000ರಿಂದ ಲಂಕಾಷೈರ್ ಪರ ಕಣಕ್ಕಿಳಿಯುತ್ತಿದ್ದಾರೆ. ಆ್ಯಂಡರ್ಸನ್ ಇದುವರೆಗೆ 298 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.
(PTI)(4 / 5)
ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಆ್ಯಂಡರ್ಸನ್ ದಾಖಲೆ ಅದ್ಭುತವಾಗಿದೆ. 24.52ರ ಸರಾಸರಿಯಲ್ಲಿ 1,126 ವಿಕೆಟ್ ಪಡೆದಿದ್ದಾರೆ. 55 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿದ್ದಾರೆ. ಇನ್ನಿಂಗ್ಸ್ವೊಂದರಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿ-ಅಂಶ 19 ರನ್ ನೀಡಿ 7 ವಿಕೆಟ್ ಪಡೆದಿರುವುದು.
(5 / 5)
ಪ್ರಸ್ತುತ ಇಂಗ್ಲೆಂಡ್ ತಂಡದ ಬೌಲಿಂಗ್ ಕೋಚ್ ಆಗಿರುವ ಆ್ಯಂಡರ್ಸನ್, ಕೌಂಟಿ ಚಾಂಪಿಯನ್ಶಿಪ್ನಲ್ಲಿ ಕಣಕ್ಕಿಳಿಯಲು ನೆಟ್ಸ್ನಲ್ಲಿ ತೀವ್ರ ಅಭ್ಯಾಸ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ಯಾವುದೇ ಟೆಸ್ಟ್ ಸರಣಿಗಳು ಇಲ್ಲದ ಕಾರಣ, ಅಲ್ಲಿಯವರೆಗೂ ಖಾಲಿ ಕೂರುವುದು ಬೇಡ ಎಂದು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಜೂನ್ 20ರಿಂದ ಇಂಗ್ಲೆಂಡ್ vs ಭಾರತ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ.
(AP)ಇತರ ಗ್ಯಾಲರಿಗಳು