ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಮೈಲಿಗಲ್ಲು ತಲುಪಿದ ಜಸ್ಪ್ರೀತ್ ಬುಮ್ರಾ; ಈ ಶ್ರೇಯಾಂಕ ಪಡೆದ ಮೊದಲ ಭಾರತೀಯ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಮೈಲಿಗಲ್ಲು ತಲುಪಿದ ಜಸ್ಪ್ರೀತ್ ಬುಮ್ರಾ; ಈ ಶ್ರೇಯಾಂಕ ಪಡೆದ ಮೊದಲ ಭಾರತೀಯ

ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಮೈಲಿಗಲ್ಲು ತಲುಪಿದ ಜಸ್ಪ್ರೀತ್ ಬುಮ್ರಾ; ಈ ಶ್ರೇಯಾಂಕ ಪಡೆದ ಮೊದಲ ಭಾರತೀಯ

  • ಬಾರ್ಡರ್‌-ಗವಾಸ್ಕರ್‌ ಟ್ರೋಫಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಐಸಿಸಿ ಶ್ರೇಯಾಂಕದಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ. ರವಿಚಂದ್ರನ್ ಅಶ್ವಿನ್ ಅವರ 904 ರೇಟಿಂಗ್ ಅಂಕಗಳ ಮೈಲಿಗಲ್ಲನ್ನು ಹಿಂದಿಕ್ಕಿ, ಇತಿಹಾಸದಲ್ಲಿ ಅತ್ಯುನ್ನತ ಶ್ರೇಯಾಂಕ ಸಂಪಾದಿಸಿದ ಭಾರತದ ಟೆಸ್ಟ್ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನೂತನ ಟೆಸ್ಟ್‌ ಶ್ರೇಯಾಂಕ ಪಟ್ಟಿಯಲ್ಲಿ 907 ರೇಟಿಂಗ್‌ನೊಂದಿಗೆ ಬುಮ್ರಾ ಅಗ್ರಸ್ಥಾನದಲ್ಲಿದ್ದಾರೆ. ಇದೇ ವೇಳೆ ಸಾರ್ವಕಾಲಿಕ ಅತ್ಯುನ್ನತ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ಡೆರೆಕ್ ಅಂಡರ್ವುಡ್ ಜೊತೆಗೆ ಜಂಟಿಯಾಗಿ 17ನೇ ಸ್ಥಾನದಲ್ಲಿದ್ದಾರೆ.
icon

(1 / 6)

(PTI)

ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಬುಮ್ರಾ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎಂಸಿಜಿ ಟೆಸ್ಟ್‌ನಲ್ಲಿ ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರೊಂದಿಗೆ ತಮ್ಮ ಟೆಸ್ಟ್‌ ಶ್ರೇಯಾಂಕದಲ್ಲಿ ಮತ್ತಷ್ಟು ಮುನ್ನಡೆ ಕಾಯ್ದುಕೊಂಡಿದ್ದಾರೆ. 
icon

(2 / 6)

(BCCI- X)

ಸರಣಿಯ ನಾಲ್ಕು ಪಂದ್ಯಗಳಲ್ಲಿ ಆಡಿರುವ ಬುಮ್ರಾ, 30 ವಿಕೆಟ್‌ ಕಬಳಿಸಿದ್ದಾರೆ. ಇದರಲ್ಲಿ ಮೂರು ಬಾರಿ 5 ವಿಕೆಟ್‌ ಗೊಂಚಲು ಪಡೆದಿದ್ದಾರೆ. 
icon

(3 / 6)

ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆರು ವಿಕೆಟ್‌ಗಳನ್ನು ಪಡೆದ  ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್, ಬೌಲಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೆ ಏರಿದ್ದಾರೆ. ಇದೇ ವೇಳೆ ಟೆಸ್ಟ್ ಆಲ್‌ರೌಂಡರ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನವನ್ನು ಗಳಿಸಿದ್ದಾರೆ.
icon

(4 / 6)

(AP)

ಸೆಂಚೂರಿಯನ್ ಬಾಕ್ಸಿಂಗ್ ಡೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧದ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಏಳು ವಿಕೆಟ್ ಪಡೆದ ಮಾರ್ಕೊ ಜಾನ್ಸೆನ್ ಬೌಲಿಂಗ್ ಶ್ರೇಯಾಂಕದಲ್ಲಿ ಆರು ಸ್ಥಾನ ಮೇಲಕ್ಕೇರಿ ಐದನೇ ಸ್ಥಾನದಲ್ಲಿದ್ದಾರೆ. ಜಾನ್ಸೆನ್ 800 ರೇಟಿಂಗ್ ಅಂಕಗಳನ್ನು ದಾಟಿದ್ದು ಇದೇ ಮೊದಲು.
icon

(5 / 6)

(AFP)

ಸರಣಿಯ ನಾಲ್ಕು ಪಂದ್ಯಗಳಲ್ಲಿ ಆಡಿರುವ ಬುಮ್ರಾ, 30 ವಿಕೆಟ್‌ ಕಬಳಿಸಿದ್ದಾರೆ. ಇದರಲ್ಲಿ ಮೂರು ಬಾರಿ 5 ವಿಕೆಟ್‌ ಗೊಂಚಲು ಪಡೆದಿದ್ದಾರೆ.
icon

(6 / 6)

ಇತರ ಗ್ಯಾಲರಿಗಳು