ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟರ್ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ಸ್ಪರ್ಧೆ; ರೇಸ್ನಲ್ಲಿ ಇಂಗ್ಲೆಂಡ್ ಸ್ಟಾರ್ಸ್
- ICC Mens Test Cricketer of the Year award: ಐಸಿಸಿ ಪುರುಷರ ಟೆಸ್ಟ್ ಕ್ರಿಕೆಟರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆದಿದ್ದಾರೆ.
- ICC Mens Test Cricketer of the Year award: ಐಸಿಸಿ ಪುರುಷರ ಟೆಸ್ಟ್ ಕ್ರಿಕೆಟರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆದಿದ್ದಾರೆ.
(1 / 5)
2024ರ ವರ್ಷದ ಟೆಸ್ಟ್ ಕ್ರಿಕೆಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಕ್ರಿಕೆಟಿಗರನ್ನು ಐಸಿಸಿ ಬಿಡುಗಡೆ ಮಾಡಿದೆ. ಈ ವರ್ಷ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು ಪ್ರಶಸ್ತಿಯ ರೇಸ್ನಲ್ಲಿದ್ದಾರೆ. ಅವರೊಂದಿಗೆ ಇಂಗ್ಲೆಂಡ್ನ ಜೋ ರೂಟ್, ಹ್ಯಾರಿ ಬ್ರೂಕ್, ಶ್ರೀಲಂಕಾದ ಕಮಿಂಡು ಮೆಂಡಿಸ್ ಕಣದಲ್ಲಿದ್ದಾರೆ.
(AFP)(2 / 5)
ಪ್ರಸ್ತುತ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯುತ್ತಮ ಫಾರ್ಮ್ನಲ್ಲಿದ್ದು, ಈವರೆಗೆ 8 ಇನ್ನಿಂಗ್ಸ್ಗಳಲ್ಲಿ 30 ವಿಕೆಟ್ ಪಡೆದಿದ್ದಾರೆ. ಈ ವರ್ಷ ಬುಮ್ರಾ 13 ಟೆಸ್ಟ್ ಪಂದ್ಯಗಳ 26 ಇನ್ನಿಂಗ್ಸ್ಗಳಲ್ಲಿ 14.92 ಸರಾಸರಿಯಲ್ಲಿ 71 ವಿಕೆಟ್ ಕಬಳಿಸಿದ್ದಾರೆ. ಒಂದು ಇನ್ನಿಂಗ್ಸ್ನಲ್ಲಿ 45 ರನ್ ನೀಡಿ 6 ವಿಕೆಟ್ ಪಡೆದಿರುವುದು ಅವರ ಬೆಸ್ಟ್ ಬೌಲಿಂಗ್.
(AP)(3 / 5)
ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್ ಕೂಡ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇಂಗ್ಲೆಂಡ್ ಬ್ಯಾಟರ್ ಈ ವರ್ಷ 17 ಟೆಸ್ಟ್ಗಳ 31 ಇನ್ನಿಂಗ್ಸ್ಗಳಲ್ಲಿ 55.57ರ ಬ್ಯಾಟಿಂಗ್ ಸರಾಸರಿಯಲ್ಲಿ 1556 ರನ್ ಗಳಿಸಿದ್ದಾರೆ. ಇನ್ನಿಂಗ್ಸ್ವೊಂದರಲ್ಲಿ ಗರಿಷ್ಠ ಸ್ಕೋರ್ 262.
(AP)(4 / 5)
ಮತ್ತೊಬ್ಬ ಇಂಗ್ಲೆಂಡ್ ಕ್ರಿಕೆಟಿಗ ಹ್ಯಾರಿ ಬ್ರೂಕ್ ಸಹ ಪ್ರಶಸ್ತಿಯ ಕಣದಲ್ಲಿದ್ದಾರೆ. ಅವರು ಈ ವರ್ಷ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ, ಈ ವರ್ಷ ಅವರು 12 ಟೆಸ್ಟ್ಗಳ 20 ಇನ್ನಿಂಗ್ಸ್ಗಳಲ್ಲಿ 55ರ ಬ್ಯಾಟಿಂಗ್ ಸರಾಸರಿಯಲ್ಲಿ 1100 ರನ್ ಗಳಿಸಿದ್ದಾರೆ. ಇನ್ನಿಂಗ್ಸ್ವೊಂದರಲ್ಲಿ ಗರಿಷ್ಠ ಸ್ಕೋರ್ 317.
(AP)ಇತರ ಗ್ಯಾಲರಿಗಳು