908 ಎಸೆತ, 32 ವಿಕೆಟ್; ಭಾರತ ಬಾರ್ಡರ್-ಗವಾಸ್ಕರ್ ಟ್ರೋಫಿ ಸೋತರೂ ಜಸ್ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ
- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಆದರೆ, ಭಾರತದ ಅಭಿಮಾನಿಗಳಿಗೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ನಿರಾಶೆ ಮಾಡಿಲ್ಲ. ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ಅವರು, ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಆದರೆ, ಭಾರತದ ಅಭಿಮಾನಿಗಳಿಗೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ನಿರಾಶೆ ಮಾಡಿಲ್ಲ. ಸರಣಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ಅವರು, ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
(1 / 8)
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ 1-3 ಅಂತರದಿಂದ ಸೋತಿದೆ. ಸಿಡ್ನಿಯಲ್ಲಿ ಇಂದು (ಜನವರಿ 5) ನಡೆದ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಸೋತಿದೆ. ಆದರೆ, ಭಾರತ ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಈ ಸರಣಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಮಾಧಾನ ತಂದಿದ್ದಾರೆ. ಭಾರತ ತಂಡ ಸೋತರೂ ಬುಮ್ರಾ ಗೆದ್ದಿದ್ದಾರೆ.
(AFP)(2 / 8)
ಸರಣಿಯಲ್ಲಿ ಬುಮ್ರಾ ಪ್ರಭಾವಶಾಲಿ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಟೆಸ್ಟ್ ಪಂದ್ಯದ ಕೊನೆಯ ಇನ್ನಿಂಗ್ಸ್‌ನಲ್ಲಿ ಬುಮ್ರಾ ಬೌಲಿಂಗ್ ಮಾಡಲಿಲ್ಲ. ಇದು ಆಸೀಸ್ ಬ್ಯಾಟರ್‌ಗಳ ಸುಗಮ ಬ್ಯಾಟಿಂಗ್‌ಗೆ ನೆರವಾಯ್ತು. ಸರಣಿಯ ಮೊದಲ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ ಅವರು ಪಂದ್ಯವನ್ನು ಗೆಲ್ಲಿಸಿದ್ದರು.
(BCCI- X)(3 / 8)
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಬುಮ್ರಾ ಐದು ಟೆಸ್ಟ್ ಪಂದ್ಯಗಳಲ್ಲಿ ಆಡಿ ಒಟ್ಟು 151.2 ಓವರ್ ಬೌಲಿಂಗ್ ಮಾಡಿದ್ದಾರೆ. ಅಂದರೆ 908 ಎಸೆತಗಳನ್ನು ಎಸೆದರು. ಭಾರತದ ಪರ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದರು.
(AFP)(4 / 8)
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬುಮ್ರಾ ಒಟ್ಟು 32 ವಿಕೆಟ್ ಕಬಳಿಸಿದ್ದಾರೆ. 13.06ರ ಸರಾಸರಿಯಲ್ಲಿ 32 ವಿಕೆಟ್ ಪಡೆದಿದ್ದಾರೆ. ಈ ವೇಳೆ ಮೂರು ಬಾರಿ ಐದು ವಿಕೆಟ್ ಗೊಂಚಲು ಪಡೆದರು. ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಬುಮ್ರಾ ಪಾತ್ರರಾದರು. ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಐತಿಹಾಸಿಕ ದಾಖಲೆಗೂ ಪಾತ್ರರಾದರು.
(AP)(5 / 8)
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾರತ ಸೋತರೂ, ಬುಮ್ರಾ ಅವರ ಹೋರಾಟವು ಐತಿಹಾಸಿಕ ಸಾಧನೆಯಾಗಿದೆ. ಹೀಗಾಗಿ ಆಸೀಸ್ ತಂಡ ಸರಣಿ ಗೆದ್ದರೂ, ಬುಮ್ರಾಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
(AFP)(6 / 8)
ಗಾಯದಿಂದಾಗಿ ಬುಮ್ರಾ ಐದನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಹಿಂದಿನ ದಿನ ಸ್ಕ್ಯಾನಿಂಗ್‌ಗೆ ಒಳಗಾದ ಅವರು, ವಿಶ್ರಾಂತಿ ಪಡೆದರು. ಆಸೀಸ್ ಕೊನೆಯ ಇನ್ನಿಂಗ್ಸ್‌ವೇಳೆ ಬುಮ್ರಾ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಭಾರತೀಯ ಬೌಲಿಂಗ್ ಸಪ್ಪೆಯಾಗಿತ್ತು.
(AP)(7 / 8)
ಸತತ ನಾಲ್ಕು ಬಾರಿ ಬಿಜಿಟಿ ಪ್ರಶಸ್ತಿ ಗೆದ್ದಿರುವ ಭಾರತ ಈ ಬಾರಿ ಸೋತಿದೆ. ಆಸ್ಟ್ರೇಲಿಯಾ 10 ವರ್ಷಗಳ ನಂತರ ಟ್ರೋಫಿಯನ್ನು ಗೆದ್ದುಕೊಂಡಿತು. ಆಸೀಸ್ ಕೂಡ ಡಬ್ಲ್ಯುಟಿಸಿ ಫೈನಲ್ ತಲುಪಿತು. ಡಬ್ಲ್ಯುಟಿಸಿ ಫೈನಲ್ ರೇಸ್ ನಿಂದ ಭಾರತ ಹೊರಬಿದ್ದಿದೆ.
(AP)ಇತರ ಗ್ಯಾಲರಿಗಳು