ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಹ್ಯಾಟ್ರಿಕ್‌ ಸಾಧನೆ ತವಕದಲ್ಲಿ ಕೆಎಲ್‌ ರಾಹುಲ್;‌ ಸಚಿನ್‌-ರಹಾನೆ ದಾಖಲೆ ಬ್ರೇಕ್‌ ಮಾಡ್ತಾರಾ ಕನ್ನಡಿಗ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಹ್ಯಾಟ್ರಿಕ್‌ ಸಾಧನೆ ತವಕದಲ್ಲಿ ಕೆಎಲ್‌ ರಾಹುಲ್;‌ ಸಚಿನ್‌-ರಹಾನೆ ದಾಖಲೆ ಬ್ರೇಕ್‌ ಮಾಡ್ತಾರಾ ಕನ್ನಡಿಗ

ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಹ್ಯಾಟ್ರಿಕ್‌ ಸಾಧನೆ ತವಕದಲ್ಲಿ ಕೆಎಲ್‌ ರಾಹುಲ್;‌ ಸಚಿನ್‌-ರಹಾನೆ ದಾಖಲೆ ಬ್ರೇಕ್‌ ಮಾಡ್ತಾರಾ ಕನ್ನಡಿಗ

  • KL Rahul: ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ಗೆ ಭಾರತ ತಂಡ ಸಜ್ಜಾಗುತ್ತಿದೆ. ಎಂಸಿಜಿ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ‘ಹ್ಯಾಟ್ರಿಕ್‌’ ಸಾಧನೆ ಮಾಡುವ ಸನಿಹವಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ಮತ್ತು ಅಜಿಂಕ್ಯ ರಹಾನೆ ಅವರನ್ನು ಹಿಂದಿಕ್ಕುವ ಸಾಧ್ಯತೆಯಿದೆ.

ಪ್ರಸಕ್ತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಸರಣಿಯ ಮೊದಲ ಮೂರು ಟೆಸ್ಟ್ ಪಂದ್ಯಗಳ ನಂತರ ಅವರು ಭಾರತದ ಪರ ಹೆಚ್ಚು ರನ್ ಗಳಿಸಿದ್ದಾರೆ. ಸರಣಿಯಲ್ಲಿ ರಾಹುಲ್‌ ಈಗಾಗಲೇ ಎರಡು ಅರ್ಧಶತಕ ಸಿಡಿಸಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ರಾಹುಲ್ ಮತ್ತೊಂದು ದಾಖಲೆ  ನಿರ್ಮಿಸುವ ಅವಕಾಶವಿದೆ.
icon

(1 / 6)

ಪ್ರಸಕ್ತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಸರಣಿಯ ಮೊದಲ ಮೂರು ಟೆಸ್ಟ್ ಪಂದ್ಯಗಳ ನಂತರ ಅವರು ಭಾರತದ ಪರ ಹೆಚ್ಚು ರನ್ ಗಳಿಸಿದ್ದಾರೆ. ಸರಣಿಯಲ್ಲಿ ರಾಹುಲ್‌ ಈಗಾಗಲೇ ಎರಡು ಅರ್ಧಶತಕ ಸಿಡಿಸಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ರಾಹುಲ್ ಮತ್ತೊಂದು ದಾಖಲೆ  ನಿರ್ಮಿಸುವ ಅವಕಾಶವಿದೆ.(AP)

ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ರಾಹುಲ್‌ ಶತಕ ಸಿಡಿಸಿದರೆ, ಹ್ಯಾಟ್ರಿಕ್ ಸಾಧನೆ ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಅವರು ಅಜಿಂಕ್ಯ ರಹಾನೆ ಮತ್ತು ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಲಿದ್ದಾರೆ. ರಾಹುಲ್‌ ಸದ್ಯದ ಫಾರ್ಮ್‌ ನೋಡಿದರೆ, ಮೆಲ್ಬೋರ್ನ್‌ನಲ್ಲಿ ಇತಿಹಾಸ ನಿರ್ಮಿಸುವುದು ಅಸಾಧ್ಯವೇನಲ್ಲ. 
icon

(2 / 6)

ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ರಾಹುಲ್‌ ಶತಕ ಸಿಡಿಸಿದರೆ, ಹ್ಯಾಟ್ರಿಕ್ ಸಾಧನೆ ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಅವರು ಅಜಿಂಕ್ಯ ರಹಾನೆ ಮತ್ತು ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಲಿದ್ದಾರೆ. ರಾಹುಲ್‌ ಸದ್ಯದ ಫಾರ್ಮ್‌ ನೋಡಿದರೆ, ಮೆಲ್ಬೋರ್ನ್‌ನಲ್ಲಿ ಇತಿಹಾಸ ನಿರ್ಮಿಸುವುದು ಅಸಾಧ್ಯವೇನಲ್ಲ. (AFP)

ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ರಾಹುಲ್ ಮೂರಂಕಿ ಮೊತ್ತ ಗಳಿಸಿದರೆ, ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಹ್ಯಾಟ್ರಿಕ್ ಶತಕಗಳನ್ನು ಗಳಿಸಿದ ಸಾಧನೆ ಮಾಡಲಿದ್ದಾರೆ. ಆ ಮೂಲಕ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಮೂರು ಶತಕಗಳನ್ನು ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ. ಈವರೆಗೆ ಸಚಿನ್ ತೆಂಡೂಲ್ಕರ್ ಮತ್ತು ರಹಾನೆ ಭಾರತದ ಪರ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ತಲಾ ಎರಡು ಶತಕಗಳನ್ನು ಗಳಿಸಿದ್ದಾರೆ. ರಾಹುಲ್‌ ಕೂಡಾ ಅಷ್ಟೇ ಸೆಂಚುರಿ ಬಾರಿಸಿದ್ದಾರೆ.
icon

(3 / 6)

ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ರಾಹುಲ್ ಮೂರಂಕಿ ಮೊತ್ತ ಗಳಿಸಿದರೆ, ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಹ್ಯಾಟ್ರಿಕ್ ಶತಕಗಳನ್ನು ಗಳಿಸಿದ ಸಾಧನೆ ಮಾಡಲಿದ್ದಾರೆ. ಆ ಮೂಲಕ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಮೂರು ಶತಕಗಳನ್ನು ಗಳಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ. ಈವರೆಗೆ ಸಚಿನ್ ತೆಂಡೂಲ್ಕರ್ ಮತ್ತು ರಹಾನೆ ಭಾರತದ ಪರ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ತಲಾ ಎರಡು ಶತಕಗಳನ್ನು ಗಳಿಸಿದ್ದಾರೆ. ರಾಹುಲ್‌ ಕೂಡಾ ಅಷ್ಟೇ ಸೆಂಚುರಿ ಬಾರಿಸಿದ್ದಾರೆ.(AFP)

2023ರ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೆಎಲ್ ರಾಹುಲ್ ಶತಕ ಬಾರಿಸಿದ್ದರು. ಅವರು ಸೆಂಚೂರಿಯನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅಮೂಲ್ಯ 101 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 4 ರನ್ ಗಳಿಸಿದರು. ಅದಕ್ಕೂ ಮುನ್ನ 2021ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿಯೂ ಶತಕ ಬಾರಿಸಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ 123 ರನ್ ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 23 ರನ್ ಬಾರಿಸಿದ್ದರು.
icon

(4 / 6)

2023ರ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೆಎಲ್ ರಾಹುಲ್ ಶತಕ ಬಾರಿಸಿದ್ದರು. ಅವರು ಸೆಂಚೂರಿಯನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅಮೂಲ್ಯ 101 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 4 ರನ್ ಗಳಿಸಿದರು. ಅದಕ್ಕೂ ಮುನ್ನ 2021ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿಯೂ ಶತಕ ಬಾರಿಸಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ 123 ರನ್ ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 23 ರನ್ ಬಾರಿಸಿದ್ದರು.(AFP)

ಈ ಬಾರಿಯ ಆಸ್ಟ್ರೇಲಿಯಾ ಪ್ರವಾಸದಲ್ಲಿಯೂ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ವರೆಗೆ ಆಡಿದ 3 ಪಂದ್ಯಗಳ 6 ಇನ್ನಿಂಗ್ಸ್‌ಗಳಲ್ಲಿ 235 ರನ್ ಗಳಿಸಿದ್ದಾರೆ. ಇದರೊಂದಿಗೆ ಸರಣಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಎರಡನೇ (ಟ್ರಾವಿಸ್‌ ಹೆಡ್‌ ಮೊದಲಿಗ) ಆಟಗಾರನಾಗಿದ್ದಾರೆ. ಅವರು ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ. ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ 84 ರನ್. 6 ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 26, 77, 37, 7, 84 ಮತ್ತು 4 ರನ್‌ ಗಳಿಸಿದ್ದಾರೆ.
icon

(5 / 6)

ಈ ಬಾರಿಯ ಆಸ್ಟ್ರೇಲಿಯಾ ಪ್ರವಾಸದಲ್ಲಿಯೂ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ವರೆಗೆ ಆಡಿದ 3 ಪಂದ್ಯಗಳ 6 ಇನ್ನಿಂಗ್ಸ್‌ಗಳಲ್ಲಿ 235 ರನ್ ಗಳಿಸಿದ್ದಾರೆ. ಇದರೊಂದಿಗೆ ಸರಣಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಎರಡನೇ (ಟ್ರಾವಿಸ್‌ ಹೆಡ್‌ ಮೊದಲಿಗ) ಆಟಗಾರನಾಗಿದ್ದಾರೆ. ಅವರು ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ. ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ 84 ರನ್. 6 ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 26, 77, 37, 7, 84 ಮತ್ತು 4 ರನ್‌ ಗಳಿಸಿದ್ದಾರೆ.(AP)

ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್‌ ಪಂದ್ಯವು ಡಿಸೆಂಬರ್‌ 26ರಂದು ಆರಂಭವಾಗಲಿದೆ. ಮೆಲ್ಬೋರ್ನ್‌ನ ಐತಿಹಾಸಿಕ ಎಂಸಿಜಿ ಸ್ಟೇಡಿಯಂನಲ್ಲಿ ಬಾಕ್ಸಿಂಗ್‌ ಡೇ ಟೆಸ್ಟ್‌ ನಡೆಯುತ್ತದೆ.
icon

(6 / 6)

ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್‌ ಪಂದ್ಯವು ಡಿಸೆಂಬರ್‌ 26ರಂದು ಆರಂಭವಾಗಲಿದೆ. ಮೆಲ್ಬೋರ್ನ್‌ನ ಐತಿಹಾಸಿಕ ಎಂಸಿಜಿ ಸ್ಟೇಡಿಯಂನಲ್ಲಿ ಬಾಕ್ಸಿಂಗ್‌ ಡೇ ಟೆಸ್ಟ್‌ ನಡೆಯುತ್ತದೆ.(AFP)


ಇತರ ಗ್ಯಾಲರಿಗಳು