ಗುರಿ ಬೆನ್ನಟ್ಟುವಾಗ ಕೊನೆಯ ಎಸೆತದಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ತಂಡಗಳಿವು; ಇಲ್ಲಿದೆ ಸಂಪೂರ್ಣ ಪಟ್ಟಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗುರಿ ಬೆನ್ನಟ್ಟುವಾಗ ಕೊನೆಯ ಎಸೆತದಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ತಂಡಗಳಿವು; ಇಲ್ಲಿದೆ ಸಂಪೂರ್ಣ ಪಟ್ಟಿ

ಗುರಿ ಬೆನ್ನಟ್ಟುವಾಗ ಕೊನೆಯ ಎಸೆತದಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ತಂಡಗಳಿವು; ಇಲ್ಲಿದೆ ಸಂಪೂರ್ಣ ಪಟ್ಟಿ

2025ರ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಕೊನೆಯ ಎಸೆತದಲ್ಲಿ ಗೆದ್ದು ಬೀಗಿತು. ಐಪಿಎಲ್ ಇತಿಹಾಸದಲ್ಲಿ ಗುರಿ ಬೆನ್ನಟ್ಟುವಾಗ ಅಂತಿಮ ಎಸೆತದಲ್ಲಿ ಯಾವ ತಂಡವು ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂದು ತಿಳಿಯೋಣ.

ಐಪಿಎಲ್‌ನಲ್ಲಿ ಕೊನೆಯ ಎಸೆತದಲ್ಲಿ ಗುರಿ ಬೆನ್ನಟ್ಟಿದ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಚೆನ್ನೈ ಸೂಪರ್ ಕಿಂಗ್ಸ್ ಹೊಂದಿದೆ. ಐದು ಬಾರಿ ಚಾಂಪಿಯನ್ ಆಗಿರುವ ಸಿಎಸ್‌ಕೆ ಈ ಸಾಧನೆಯನ್ನು 9 ಬಾರಿ ಸಾಧಿಸಿದೆ.
icon

(1 / 7)

(PTI)

ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದೆ. ಗುರಿ ಬೆನ್ನಟ್ಟುವಾಗ ಕೊನೆಯ ಎಸೆತದಲ್ಲಿ ಮುಂಬೈ 7 ಸಲ ಜಯಿಸಿದೆ.
icon

(2 / 7)

(AFP)

ರಾಜಸ್ಥಾನ್ ರಾಯಲ್ಸ್ ಐಪಿಎಲ್‌ನಲ್ಲಿ ಐದು ಬಾರಿ ಅಂತಿಮ ಎಸೆತದಲ್ಲಿ ಗುರಿ ಬೆನ್ನಟ್ಟುವಾಗ ಜಯಿಸಿದೆ.
icon

(3 / 7)

(REUTERS)

ಗುಜರಾತ್ ಟೈಟಾನ್ಸ್ ಜಂಟಿಯಾಗಿ 4ನೇ ಸ್ಥಾನದಲ್ಲಿದೆ. 2022ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಜಿಟಿ 4 ಬಾರಿ ಕೊನೆಯ ಎಸೆತದಲ್ಲಿ ಪಂದ್ಯ ಗೆದ್ದಿದೆ. ಪಂಜಾಬ್ ಕಿಂಗ್ಸ್ ಕೂಡ 4 ಬಾರಿ ಈ ಸಾಧನೆ ಮಾಡಿದೆ.
icon

(4 / 7)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಜಂಟಿಯಾಗಿ ಐದನೇ ಸ್ಥಾನದಲ್ಲಿವೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ತಲಾ ಮೂರು ಬಾರಿ ಕೊನೆಯ ಎಸೆತದಲ್ಲಿ ಗೆದ್ದಿವೆ.
icon

(5 / 7)

ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಲಯನ್ಸ್ ಮತ್ತು ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡಗಳು ಜಂಟಿಯಾಗಿ 6ನೇ ಸ್ಥಾನದಲ್ಲಿವೆ. ಈ ನಾಲ್ಕೂ ತಂಡಗಳು ಎರಡು ಬಾರಿ ಗುರಿಯನ್ನು ಬೆನ್ನಟ್ಟಿ ಪಂದ್ಯವನ್ನು ಗೆದ್ದಿವೆ.
icon

(6 / 7)

ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಕ್ಕನ್ ಚಾರ್ಜರ್ಸ್ ತಂಡಗಳು ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿವೆ. ಎರಡೂ ತಂಡಗಳು ತಲಾ ಒಮ್ಮೆ ಗುರಿಯನ್ನು ಬೆನ್ನಟ್ಟುವಾಗ ಕೊನೆಯ ಎಸೆತದಲ್ಲಿ ಪಂದ್ಯ ಗೆದ್ದಿದೆ.
icon

(7 / 7)

(Hindustan Times)

ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು