ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದವರು ಯಾರು; ಧೋನಿ ದಾಖಲೆ ಮುರಿಯುವತ್ತ ನರೈನ್, ಆರ್‌ಸಿಬಿ ಸ್ಟಾರ್ ನಂಬರ್ 1
- ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ದಾಖಲೆ ಆರ್‌ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. ಇದೀಗ ಸುನಿಲ್ ನರೈನ್ ಅವರು ಎಂಎಸ್ ಧೋನಿ ಸಮೀಪವಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ಈ ಪಟ್ಟಿಯಲ್ಲಿದ್ದಾರೆ.
- ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ದಾಖಲೆ ಆರ್‌ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. ಇದೀಗ ಸುನಿಲ್ ನರೈನ್ ಅವರು ಎಂಎಸ್ ಧೋನಿ ಸಮೀಪವಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ಈ ಪಟ್ಟಿಯಲ್ಲಿದ್ದಾರೆ.
(1 / 7)
ಕ್ರಿಸ್ ಗೇಲ್ ಮತ್ತು ವಿರಾಟ್ ಕೊಹ್ಲಿ: ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಆಟಗಾರರಾದ ಕ್ರಿಸ್ ಗೇಲ್ 22 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರೆ, ವಿರಾಟ್ ಕೊಹ್ಲಿ 18 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
(2 / 7)
ರವೀಂದ್ರ ಜಡೇಜಾ: ಸಿಎಸ್‌ಕೆ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಐಪಿಎಲ್‌ನಲ್ಲಿ 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
(3 / 7)
ಡೇವಿಡ್ ವಾರ್ನರ್: ಐಪಿಎಲ್‌ನ ಅತ್ಯಂತ ಯಶಸ್ವಿ ವಿದೇಶಿ ಆಟಗಾರರಲ್ಲಿ ಒಬ್ಬರಾದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 18 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
(4 / 7)
ಎಂಎಸ್ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ 17 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
(AFP)(5 / 7)
ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 19 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರು ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಭಾರತೀಯ.
(PTI)(6 / 7)
ಸುನಿಲ್ ನರೈನ್: ಕೆಕೆಆರ್ ತಂಡದ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಐಪಿಎಲ್‌ನಲ್ಲಿ 16ನೇ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದರು. ಅವರು ಈಗ ಕೆಕೆಆರ್ ಪರ ಅತಿ ಹೆಚ್ಚು ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಗೆದ್ದ ಆಟಗಾರರಾಗಿದ್ದಾರೆ.
(PTI)ಇತರ ಗ್ಯಾಲರಿಗಳು