ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿದ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ -Photos
- ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಭಾರತ ಪ್ರವಾಸದಲ್ಲಿದ್ದಾರೆ. ಗುರುವಾರ (ಮಾ.20) ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಕಿವೀಸ್ ಸ್ಪಿನ್ನರ್ ಅಜಾಜ್ ಪಟೇಲ್, ಮಾಜಿ ಬ್ಯಾಟರ್ ರಾಸ್ ಟೇಲರ್ ಮತ್ತು ವೇಗಿ ಟ್ರೆಂಟ್ ಬೌಲ್ಟ್ ಅವರೊಂದಿಗೆ ಕ್ರಿಕೆಟ್ ಆಡಿ ಗಮನ ಸೆಳೆದರು.
- ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಭಾರತ ಪ್ರವಾಸದಲ್ಲಿದ್ದಾರೆ. ಗುರುವಾರ (ಮಾ.20) ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಕಿವೀಸ್ ಸ್ಪಿನ್ನರ್ ಅಜಾಜ್ ಪಟೇಲ್, ಮಾಜಿ ಬ್ಯಾಟರ್ ರಾಸ್ ಟೇಲರ್ ಮತ್ತು ವೇಗಿ ಟ್ರೆಂಟ್ ಬೌಲ್ಟ್ ಅವರೊಂದಿಗೆ ಕ್ರಿಕೆಟ್ ಆಡಿ ಗಮನ ಸೆಳೆದರು.
(1 / 8)
ಮಾರ್ಚ್ 23ರಂದು ಚೆನ್ನೈನಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಆಡಲಿದೆ. ಪಂದ್ಯಕ್ಕೆ ನ್ಯೂಜಿಲೆಂಡ್ ಆಟಗಾರರಾದ ಬೌಲ್ಟ್, ಮಿಚೆಲ್ ಸ್ಯಾಂಟ್ನರ್ ಮತ್ತು ಬೆವೊನ್ ಜೇಕಬ್ಸ್ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಈ ವೇಳೆ ಮೈದಾನಕ್ಕೆ ಭೇಟಿ ನೀಡಿದ ಕೆಲವು ಚಿತ್ರಗಳನ್ನು ಲಕ್ಸನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
(2 / 8)
ಸ್ಪಿನ್ನರ್ ಅಜಾಜ್ ಪಟೇಲ್ ಇದೇ ಕ್ರೀಡಾಂಗಣದಲ್ಲಿ 2021ರಲ್ಲಿ ಇತಿಹಾಸ ನಿರ್ಮಿಸಿದ್ದರು. ಭಾರತದ ವಿರುದ್ಧ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಎಲ್ಲಾ ಹತ್ತು ವಿಕೆಟ್‌ಗಳನ್ನು ಪಡೆಯುವ ಮೂಲಕ, ಈ ಸಾಧನೆ ಮಾಡಿದ ಕೇವಲ ಮೂರನೇ ಬೌಲರ್ ಎನಿಸಿಕೊಂಡರು. ಇದನ್ನು ಲಕ್ಸನ್ ನೆನಪಿಸಿಕೊಂಡರು.
(3 / 8)
"ಕ್ರಿಕೆಟ್ ಮೇಲಿನ ನಮ್ಮ ಪ್ರೀತಿಗಿಂತ ಹೆಚ್ಚಾಗಿ ನ್ಯೂಜಿಲೆಂಡ್ ಮತ್ತು ಭಾರತವನ್ನು ಒಂದುಗೂಡಿಸುವ ವಿಷಯ ಬೇರೊಂದಿಲ್ಲ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಜಾಜ್ ಪಟೇಲ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಅತ್ಯುತ್ತಮ ಅಂಕಿಅಂಶಗಳನ್ನು ಕಲೆ ಹಾಕಿದರು," ಎಂದು ಕಿವೀಸ್ ಪ್ರಧಾನಿ ಲಕ್ಸನ್ ಇನ್‌ಸ್ಟಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
(4 / 8)
ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಜಿಂಕ್ಯ ನಾಯಕ್ ಪತ್ರಿಕಾ ಪ್ರಕಟಣೆ ಹೊರಡಿಸಿ, "ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ, ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ವಾಂಖೆಡೆ ಕ್ರೀಡಾಂಗಣಕ್ಕೆ ಸ್ವಾಗತಿಸುವುದು ದೊಡ್ಡ ಗೌರವವಾಗಿದೆ. ಅವರಿಗೆ ನಾವು ಅವರನ್ನು ಮುಂಬೈ ಕ್ರಿಕೆಟ್‌ನ ಶ್ರೀಮಂತ ಪರಂಪರೆಯನ್ನು ಪರಿಚಯಿಸಿದೆವು" ಎಂದು ಹೇಳಿಕೊಂಡಿದ್ದಾರೆ.
(5 / 8)
ದೆಹಲಿಗೂ ಅಧಿಕೃತ ಭೇಟಿ ನೀಡಿದ ಪ್ರಧಾನಿ ಲಕ್ಸನ್, ಮಕ್ಕಳೊಂದಿಗೆ ಕ್ರಿಕೆಟ್ ಆಡಿದರು. ಈ ವೇಳೆ ದಿಗ್ಗಜ ಕ್ರಿಕೆಟಿಗ ಕಪಿಲ್ ದೇವ್ ಕೂಡಾ ಇದ್ದರು. ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ರಾಸ್ ಟೇಲರ್ ಅವರೊಂದಿಗೆ ಸ್ಥಳೀಯ ಮಕ್ಕಳೊಂದಿಗೆ ಸ್ನೇಹಪರ ಕ್ರಿಕೆಟ್ ಆಡಿದರು.
(6 / 8)
ಮುಂಬೈ ವಾಂಖೆಡೆಯಲ್ಲಿ ಕಿವೀಸ್ ಆಟಗಾರರು ಹಾಗೂ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಲಕ್ಸನ್ ಫೋಟೋಗೆ ಪೋಸ್ ಕೊಟ್ಟರು.
(7 / 8)
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಕ್ರಿಕೆಟ್‌ನ ಬಲಿಷ್ಠ ರಾಷ್ಟ್ರಗಳು. ಇತ್ತೀಚೆಗೆ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಇಂಡೋ-ಕಿವೀಸ್ ಮುಖಾಮುಖಿಯಾಗಿದ್ದವು.
ಇತರ ಗ್ಯಾಲರಿಗಳು