ಚಾಂಪಿಯನ್ಸ್ ಟ್ರೋಫಿ: ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 362 ರನ್ ಸಿಡಿಸಿ ದಾಖಲೆ ನಿರ್ಮಿಸಿದ ನ್ಯೂಜಿಲೆಂಡ್
- ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ತಂಡ ಅಬ್ಬರಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಕಿವೀಸ್, ರಚಿನ್ ರವೀಂದ್ರ ಹಾಗೂ ಕೇನ್ ವಿಲಿಯಮ್ಸನ್ ಶತಕದಾಟದ ನೆರವಿಂದ ಬೃಹತ್ ಮೊತ್ತ ಕಲೆ ಹಾಕಿದೆ. ಇದರೊಂದಿಗೆ ಹಲವು ದಾಖಲೆಗಳನ್ನೂ ನಿರ್ಮಿಸಿದೆ.

(1 / 6)
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 6 ವಿಕೆಟ್ ಕಳೆದುಕೊಂಡು 362 ರನ್ ಗಳಿಸಿತು. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ತಂಡವೊಂದು ದಾಖಲಿಸಿದ ಗರಿಷ್ಠ ಮೊತ್ತ ಇದಾಗಿದೆ.
(AP)(2 / 6)
ಇದಕ್ಕೂ ಹಿಂದೆ, ಇದೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಇಂಗ್ಲೆಂಡ್ ತಂಡವು 351 ರನ್ ಗಳಿಸಿ ಸೋತಿತ್ತು.
(REUTERS)(3 / 6)
ಈ ಹಿಂದೆ 2017ರ ಆವೃತ್ತಿಯಲ್ಲಿ ಯುಎಸ್‌ಎ ವಿರುದ್ಧ ನ್ಯೂಜಿಲೆಂಡ್ 347 ರನ್ ಗಳಿಸಿತ್ತು. ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ತಂಡದ ಈ ಹಿಂದಿನ ಗರಿಷ್ಠ ಮೊತ್ತ ಇದಾಗಿದೆ.
(REUTERS)(4 / 6)
ಇದೇ ವೇಳೆ ಐಸಿಸಿ ಏಕದಿನ ಟೂರ್ನಿಯ ನಾಕೌಟ್ ಪಂದ್ಯದಲ್ಲಿ ಇದು ಮೂರನೇ ಗರಿಷ್ಠ ಮೊತ್ತವಾಗಿದೆ. ಈ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.
(REUTERS)(5 / 6)
ಇದೇ ಪಂದ್ಯದಲ್ಲಿ ಇಬ್ಬರು ಶತಕ ಬಾರಿಸಿದ್ದಾರೆ. ರಚಿನ್ ರವೀಂದ್ರ ಹಾಗೂ ಕೇನ್ ವಿಲಿಯಮ್ಸನ್ ಶತಕದ ನೆರವಿಂದ ಕಿವೀಸ್ ಬೃಹತ್ ಟಾರ್ಗೆಟ್ ಕೊಟ್ಟಿದೆ.
(REUTERS)ಇತರ ಗ್ಯಾಲರಿಗಳು