Rohit Sharma: ಅರ್ಧಶತಕ ಸಿಡಿಸಿ ವಿಶೇಷ ದಾಖಲೆ ಬರೆದ ರೋಹಿತ್​ ಶರ್ಮಾ; ಈ ಸಾಧನೆ ಮಾಡಿದ ವಿಶ್ವದ 3ನೇ ಆಟಗಾರ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Rohit Sharma: ಅರ್ಧಶತಕ ಸಿಡಿಸಿ ವಿಶೇಷ ದಾಖಲೆ ಬರೆದ ರೋಹಿತ್​ ಶರ್ಮಾ; ಈ ಸಾಧನೆ ಮಾಡಿದ ವಿಶ್ವದ 3ನೇ ಆಟಗಾರ

Rohit Sharma: ಅರ್ಧಶತಕ ಸಿಡಿಸಿ ವಿಶೇಷ ದಾಖಲೆ ಬರೆದ ರೋಹಿತ್​ ಶರ್ಮಾ; ಈ ಸಾಧನೆ ಮಾಡಿದ ವಿಶ್ವದ 3ನೇ ಆಟಗಾರ

  • Rohit Sharma Records : ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ ಅವರು 4000 ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ.

ನ್ಯೂಯಾರ್ಕ್​​ನಲ್ಲಿ ಜೂನ್ 5ರ ಬುಧವಾರ ನಡೆದ ಐರ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ರೋಹಿತ್ ಶರ್ಮಾ ಅದ್ಭುತ ಅರ್ಧಶತಕ ಗಳಿಸಿ ದಾಖಲೆ ಬರೆದಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ಮತ್ತು ಬಾಬರ್ ಅಜಮ್ ಅವರ ಎಲೈಟ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಈ ಸಾಧನೆ ಪಡೆದ ಎರಡನೇ ಭಾರತೀಯ ಎನಿಸಿಕೊಂಡಿದ್ದಾರೆ.
icon

(1 / 5)

ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅವರು 37 ಎಸೆತಗಳಲ್ಲಿ 52 ರನ್ ಗಳಿಸಿದ ನಂತರ ರಿಟೈರ್ಡ್ ಹರ್ಟ್ ಆದರು. ಇದರೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ 4000 ರನ್​​ಗಳ ಮೈಲಿಗಲ್ಲು ದಾಟಿದ್ದಾರೆ ರೋಹಿತ್​. ಈ ಗುರಿ ತಲುಪಲು ಭಾರತದ ನಾಯಕನಿಗೆ 26 ರನ್​​ಗಳ ಅಗತ್ಯ ಇತ್ತು,
icon

(2 / 5)

ಐರ್ಲೆಂಡ್ ವಿರುದ್ಧ 26 ರನ್ ಗಳಿಸುತ್ತಿದ್ದಂತೆ ಹಿಟ್​ಮ್ಯಾನ್​, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 4000 ರನ್ ಪೂರೈಸಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡರು, 152 ಪಂದ್ಯಗಳ 144 ಇನ್ನಿಂಗ್ಸ್​ಗಳಲ್ಲಿ 5 ಶತಕ ಹಾಗೂ 30 ಅರ್ಧಶತಕ ಸಹಿತ 4026 ರನ್ ಬಾರಿಸಿದ್ದಾರೆ. ಶರ್ಮಾಗಿಂತ ಮೊದಲು ವಿರಾಟ್ ಕೊಹ್ಲಿ ಮತ್ತು ಬಾಬರ್ ಅಜಮ್ ಮಾತ್ರ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 4000 ರನ್​ಗಳ ಗಡಿ ದಾಟಿದ್ದಾರೆ.
icon

(3 / 5)

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 118 ಪಂದ್ಯಗಳಲ್ಲಿ 110 ಇನ್ನಿಂಗ್ಸ್​​​ಗಳಲ್ಲಿ 4038 ರನ್ ಗಳಿಸಿದ್ದು, 1 ಶತಕ ಮತ್ತು 37 ಅರ್ಧಶತಕ ಬಾರಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​​​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. 
icon

(4 / 5)

ಕೆಲವು ದಿನಗಳ ಹಿಂದೆ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಟಿ20 ಪಂದ್ಯಗಳಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈ ಬಾರಿ ರೋಹಿತ್ ಬಾಬರ್ ನಂತರ ಎರಡನೇ ಸ್ಥಾನಕ್ಕೆ ಮರಳಿದ್ದಾರೆ. ಬಾಬರ್ 112 ಇನ್ನಿಂಗ್ಸ್​​​ಗಳಲ್ಲಿ 4023 ರನ್ ಗಳಿಸಿದ್ದಾರೆ. 3 ಶತಕ, 36 ಅರ್ಧಶತಕ ಗಳಿಸಿದ್ದಾರೆ.
icon

(5 / 5)

ಇತರ ಗ್ಯಾಲರಿಗಳು