PSL: ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಬಾಬರ್ ಅಜಾಮ್ ಹೊಸ ದಾಖಲೆ; ಈ ಮೈಲಿಗಲ್ಲು ತಲುಪಿದ ಮೊದಲ ಆಟಗಾರ
- Babar Azam: ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ (ಪಿಎಸ್‌ಎಲ್) ಬಾಬರ್ ಅಜಾಮ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಟೂರ್ನಿಯ ಇತಿಹಾಸದಲ್ಲೇ 3000 ರನ್ ಕಲೆ ಹಾಕಿದ ಮೊದಲ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಆ ಮೂಲಕ ಹೊಸ ಮೈಲಿಗಲ್ಲು ತಲುಪಿದ್ದಾರೆ.
- Babar Azam: ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ (ಪಿಎಸ್‌ಎಲ್) ಬಾಬರ್ ಅಜಾಮ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಟೂರ್ನಿಯ ಇತಿಹಾಸದಲ್ಲೇ 3000 ರನ್ ಕಲೆ ಹಾಕಿದ ಮೊದಲ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಆ ಮೂಲಕ ಹೊಸ ಮೈಲಿಗಲ್ಲು ತಲುಪಿದ್ದಾರೆ.
(1 / 5)
ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಾಮ್, ಪಿಎಸ್‌ಎಲ್ ಇತಿಹಾಸದಲ್ಲಿ 3000 ರನ್‌ಗಳ ಗಡಿಯನ್ನು ಮುಟ್ಟಿದ ಮೊದಲ ಬ್ಯಾಟರ್ ಆಗಿದ್ದಾರೆ. ಅವರು ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧ 68 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೈಲಿಗಲ್ಲು ತಲುಪಲು ಅವರಿಗೆ 78 ಇನ್ನಿಂಗ್ಸ್‌ಗಳು ಬೇಕಾದವು.
(2 / 5)
ಲಾಹೋರ್ ಖಲಂದರ್ಸ್ ತಂಡದ ಫಖರ್ ಜಮಾನ್ ಪಿಎಸ್‌ಎಲ್‌ನಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಅವರು 78 ಪಂದ್ಯಗಳಲ್ಲಿ 2387 ರನ್ ಗಳಿಸಿದ್ದಾರೆ.
(3 / 5)
ಪಟ್ಟಿಯಲ್ಲಿ ಮೂರನೇ ಹೆಸರು ಶೋಯೆಬ್ ಮಲಿಕ್. ಅವರು ಕರಾಚಿ ಕಿಂಗ್ಸ್, ಮುಲ್ತಾನ್ ಸುಲ್ತಾನ್ಸ್ ಮತ್ತು ಪೇಶಾವರ್ ಝಲ್ಮಿ ಪರ 2135 ರನ್ ಗಳಿಸಿದ್ದಾರೆ.
(4 / 5)
ಮೊಹಮ್ಮದ್ ರಿಜ್ವಾನ್ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಕರಾಚಿ ಕಿಂಗ್ಸ್, ಲಾಹೋರ್ ಖಲಂದರ್ಸ್ ಮತ್ತು ಮುಲ್ತಾನ್ ಸುಲ್ತಾನ್ಸ್ ತಂಡವನ್ನು ಪ್ರತಿನಿಧಿಸಿದ್ದಾರೆ. 2007 ರನ್‌ಗಳೊಂದಿಗೆ ಅವರು ಈ ಲೀಗ್‌ನಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.
ಇತರ ಗ್ಯಾಲರಿಗಳು