IPL Finals: ಐಪಿಎಲ್ ಫೈನಲ್ ಪಂದ್ಯದಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಆಟಗಾರರಿವರು
- IPL finals: ಐಪಿಎಲ್ 2023ರ ಫೈನಲ್ ಪಂದ್ಯವು ಮೀಸಲು ದಿನವಾದ ಸೋಮವಾರ ನಡೆಯಲಿದೆ. ಇದುವರೆಗೆ ನಡೆದ 15 ಐಪಿಎಲ್ ಆವೃತ್ತಿಗಳಲ್ಲಿ ಇದೇ ಮೊದಲ ಬಾರಿ ಈ ರೀತಿ ಸಂಭವಿಸಿದೆ. ಇದುವರೆಗೆ ನಡೆದ ಐಪಿಎಲ್ ಫೈನಲ್ ಪಂದ್ಯಗಳಲ್ಲಿ ಯಾವ ಬ್ಯಾಟರ್ ಅತಿ ಹೆಚ್ಚು ರನ್ ಗಳಿಸಿದ್ದಾರೆ ಎಂಬ ವಿವರ ಇಲ್ಲಿದೆ.
- IPL finals: ಐಪಿಎಲ್ 2023ರ ಫೈನಲ್ ಪಂದ್ಯವು ಮೀಸಲು ದಿನವಾದ ಸೋಮವಾರ ನಡೆಯಲಿದೆ. ಇದುವರೆಗೆ ನಡೆದ 15 ಐಪಿಎಲ್ ಆವೃತ್ತಿಗಳಲ್ಲಿ ಇದೇ ಮೊದಲ ಬಾರಿ ಈ ರೀತಿ ಸಂಭವಿಸಿದೆ. ಇದುವರೆಗೆ ನಡೆದ ಐಪಿಎಲ್ ಫೈನಲ್ ಪಂದ್ಯಗಳಲ್ಲಿ ಯಾವ ಬ್ಯಾಟರ್ ಅತಿ ಹೆಚ್ಚು ರನ್ ಗಳಿಸಿದ್ದಾರೆ ಎಂಬ ವಿವರ ಇಲ್ಲಿದೆ.
(1 / 6)
16ನೇ ಆವೃತ್ತಿಯ ಐಪಿಎಲ್‌ನ ಫೈನಲ್ ಪಂದ್ಯ ಇಂದು ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ.
(2 / 6)
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಶೇನ್ ವ್ಯಾಟ್ಸನ್, ಐಪಿಎಲ್ ಫೈನಲ್‌ನಲ್ಲಿ ವೈಕ್ತಿಕ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ಅವರು 2018ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 57 ಎಸೆತಗಳಲ್ಲಿ ಅಜೇಯ 117 ರನ್ ಸಿಡಿಸಿದ್ದರು. ಆ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ 8 ವಿಕೆಟ್‌ಗಳಿಂದ ಗೆದ್ದುಕೊಂಡಿತು. (Twitter)
(3 / 6)
ವೃದ್ಧಿಮಾನ್ ಸಹಾ 2014ರ ಐಪಿಎಲ್ ಫೈನಲ್ ಪಂದ್ಯದಲ್ಲಿ 55 ಎಸೆತಗಳಲ್ಲಿ 115 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು. ಈ ಇನ್ನಿಂಗ್ಸ್ ಹೊರತಾಗಿಯೂ ಪಂಜಾಬ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ. ಆದಾಗ್ಯೂ, ವೃದ್ಧಿಮಾನ್ ಸಹಾ ಐಪಿಎಲ್ ಫೈನಲ್ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರರಾಗಿದ್ದಾರೆ.(Twitter)
(4 / 6)
ಮುರಳಿ ವಿಜಯ್ 2011ರಂದು ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 95 ರನ್ ಗಳಿಸಿದರು. (Twitter)
(5 / 6)
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಈ ಹಿಂದೆ ಆಡುತ್ತಿದ್ದ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ, 2014ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 50 ಎಸೆತಗಳಲ್ಲಿ 94 ರನ್ ಗಳಿಸಿದ್ದರು. ಆ ಪಂದ್ಯದಲ್ಲಿ ಕೋಲ್ಕತ್ತಾ ಗೆದ್ದಿತ್ತು.(Twitter)
ಇತರ ಗ್ಯಾಲರಿಗಳು